ಬ್ರೇಕಿಂಗ್ ನ್ಯೂಸ್
31-12-23 06:15 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.31: ಪಾರ್ಕಿಂಗ್ ವ್ಯವಸ್ಥೆ ಸರಿಯಾಗಿ ಮಾಡಿಕೊಂಡಿಲ್ಲ, ಸುತ್ತಮುತ್ತ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆಗೆ ಕಾರಣವಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್, ಏಷ್ಯಾದ ಎರಡನೇ ಅತಿದೊಡ್ಡ ಮಾಲ್ ಎಂದೆನಿಸಿರುವ, ಹೆಬ್ಬಾಳದ ಮಾಲ್ ಆಫ್ ಏಷ್ಯಾವನ್ನು ಹೊಸ ವರ್ಷಾಚರಣೆ ಮತ್ತು ಸಂಕ್ರಾಂತಿ ಉತ್ಸವ ಸಂದರ್ಭದಲ್ಲಿ 15 ದಿನಗಳ ವರೆಗೆ ಬಂದ್ ಮಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮಾಲ್ ಆಫ್ ಏಷ್ಯಾ ಸುತ್ತಮುತ್ತ ಮಾಲ್ ಬಳಿ ಸೆಕ್ಷನ್ 144(1), 144(2) ಸೆಕ್ಷನ್ ಜಾರಿ ಮಾಡಲಾಗಿದೆ.
ಏರ್ಪೋರ್ಟ್ ರಸ್ತೆಯಲ್ಲಿರುವ ಈ ಮಾಲ್ ನಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಬಳ್ಳಾರಿ ಕಡೆಯ ಹೆದ್ದಾರಿ ಆಗಿದ್ದರಿಂದ ಮಾಲ್ಗೆ ಬರುವ ಗ್ರಾಹಕರಿಂದ ದೊಡ್ಡ ಮಟ್ಟದ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದರಿಂದ ಅಕ್ಕ ಪಕ್ಕದ ನಿವಾಸಿಗಳಿಗೆ ಕಿರಿಕಿರಿ, ವಿಮಾನ ನಿಲ್ದಾಣ, ಆಸ್ಪತ್ರೆ, ಕಚೇರಿಗಳಿಗೆ ಹೋಗುವವರಿಗೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಬಿಬಿಎಂಪಿ ಅನುಮತಿ ಪ್ರಕಾರ ಮಾಲ್ ನಲ್ಲಿ 2,324 ಕಾರು ಮತ್ತು ಬೈಕ್ಗಳನ್ನು ಮಾತ್ರ ಪಾರ್ಕ್ ಮಾಡಬಹುದು. ಆದರೆ ಈ ಮಾಲ್ನಲ್ಲಿ ಇದಕ್ಕಿಂತ ಹೆಚ್ಚು ಸಂಖ್ಯೆಯಲ್ಲಿ ವಾಹನಗಳು ಬರುತ್ತಿವೆ. ಜೊತೆಗೆ ಮಾಲ್ನಲ್ಲಿ ಶಬ್ದ ಮಾಲಿನ್ಯವೂ ಮಿತಿ ಮೀರುತ್ತಿದೆ. ಮಾಲ್ನಲ್ಲಿ ಪರಿಸ್ಥಿತಿ ಹೀಗೆ ಮುಂದುವರಿದರೆ ಕಾನೂನು ಸುವ್ಯವಸ್ಥೆಗೆ ತೊಂದರೆ ಆಗಬಹುದೆಂದು ಕಾರಣ ಮುಂದಿಟ್ಟು ಮಾಲ್ ಆಫ್ ಏಷ್ಯಾವನ್ನು ಬಂದ್ ಮಾಡಲಾಗಿದೆ.
ಹೊಸ ವರ್ಷಾಚರಣೆ ಮತ್ತು ಸಂಕ್ರಾತಿಗೆ ಟ್ರಾಫಿಕ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಡಿ.31ರಿಂದ ಜ.15ರ ವರೆಗೆ ಮಾಲ್ಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜೊತೆಗೆ ಮಾಲ್ಗೆ ನೀಡಿರುವ ಭಾಗಶಃ ಸ್ವಾಧೀನ ಪ್ರಮಾಣಪತ್ರವನ್ನು ಹಿಂತೆಗೆದುಕೊಳ್ಳುವುದು / ರದ್ದುಗೊಳಿಸಲು ಪೊಲೀಸ್ ಇಲಾಖೆ ಬಿಬಿಎಂಪಿಗೆ ಪತ್ರ ಬರೆದಿದೆ.
ನಾಲ್ಕು ದಿನಗಳ ಹಿಂದೆ ಕರವೇ ಕಾರ್ಯಕರ್ತರು ಕನ್ನಡ ನಾಮಫಲಕದ ಹೆಸರಲ್ಲಿ ಪ್ರತಿಭಟನೆ ನಡೆಸಿದ್ದಲ್ಲದೆ, ಮಾಲ್ ಆಫ್ ಏಷ್ಯಾ ಮೇಲೆ ದಾಳಿ ನಡೆಸಿ, ನಾಮಫಲಕ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ 15 ದಿನಗಳ ಕಾಲ 144 ಸೆಕ್ಷನ್ ಜಾರಿಗೊಳಿಸಿ ಮಾಲನ್ನು ಬಂದ್ ಮಾಡಲಾಗಿದೆ.
ಹೈಕೋರ್ಟಿಗೆ ರಿಟ್ ಅರ್ಜಿ
ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಕಡೆಯಿಂದ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ರಿಟ್ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಿದ ಏಕಸದಸ್ಯ ಪೀಠವು ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದೆ. ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾ. ಎಂ.ಜಿ.ಎಸ್. ಕಮಲ್, ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಹೊಣೆಯಾಗಿದೆ. ಮಾಲ್ ಬಂದ್ ಮಾಡುವ ಬದಲು ಅನುಷ್ಠಾನ ಯೋಗ್ಯ ಪರಿಹಾರ ಯೋಚಿಸಿದ್ದೀರಾ? ಇಷ್ಟು ದಿನದ ನಂತರ ಮಾಲ್ಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸುವುದು ಏಕೆ? ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಅಕ್ಟೋಬರ್ ತಿಂಗಳಿನಿಂದ ಮಾಲ್ ಕಾರ್ಯಾಚರಣೆ ನಡೆಸುತ್ತಿದೆ. ಯಾವುದೇ ಸಂದರ್ಭದಲ್ಲಿ ಸರ್ಕಾರದ ಆದೇಶ ಗೊಂದಲಕ್ಕೀಡು ಮಾಡಬಾರದು. ಸ್ಪಷ್ಟವಾಗಿರಬೇಕು. ಸರ್ಕಾರ ಮತ್ತು ಮಾಲ್ ಎರಡು ಕಡೆಯವರೂ ಸೇರಿ ಸೂಕ್ತ ಪರಿಹಾರ ರೂಪಿಸಬೇಕು ಎಂದು ಸೂಚಿಸಿದರು.
Bengaluru Police issued an order on December 30, restricting public access to Phoenix Mall of Asia on Bellari Road in North Bengaluru from December 31 to January 15. The order comes a day before the New Year celebrations in the. The move aims "to prevent annoyance and disturbance to public tranquility and provide a safe environment for traffic and the public at large," according to Bengaluru City Police Commissioner B Dayananda's order dated December 30.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm