ಬ್ರೇಕಿಂಗ್ ನ್ಯೂಸ್
03-01-24 11:24 am HK News Desk ಕರ್ನಾಟಕ
ಹುಬ್ಬಳ್ಳಿ, ಜ 03: 31 ವರ್ಷದ ಬಳಿಕ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮಭೂಮಿ ಹೋರಾಟದ ಪ್ರಕರಣಕ್ಕೆ ಮರುಜೀವ ಬಂದಿದೆ. ಈ ಮೂಲಕ ರಾಮ ಜನ್ಮಭೂಮಿ ಹೋರಾಟಗಾರರಿಗೆ ಬಂಧನದ ಭೀತಿ ಶುರುವಾಗಿದೆ.
ಮೂರು ದಶಕಗಳ ಹಿಂದೆ ರಾಮ ಜನ್ಮಭೂಮಿ ಹೋರಾಟದಲ್ಲಿ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದರು. ಸದ್ಯ ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳಿಗಾಗಿ ಏಕಾಏಕಿ ಹುಡುಕಾಟ ಆರಂಭಿಸಿದ್ದಾರೆ. 31 ವರ್ಷದ ಬಳಿಕ ಓರ್ವ ಆರೋಪಿಯನ್ನ ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ.
ಪ್ರಕರಣದ 3ನೇ ಆರೋಪಿ ಶ್ರೀಕಾಂತ್ ಪೂಜಾರಿಯನ್ನು ಕಳೆದ ಶುಕ್ರವಾರ ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ಪ್ರಕರಣ ದಾಖಲಾದಾಗ ಆರೋಪಿತ ವ್ಯಕ್ತಿಗಳು 30 ರಿಂದ 35 ವರ್ಷದ ಒಳಗಿನ ಯುವಕರಾಗಿದ್ದರು. ಈಗ ಅವರಿಗೆಲ್ಲ 65-70 ವರ್ಷಗಳಾಗಿವೆ. ರಾಜು ಧರ್ಮದಾಸ್, ಶ್ರೀಕಾಂತ್ ಪೂಜಾರಿ, ಅಶೋಕ್ ಕಲಬುರಗಿ, ಷಣ್ಮುಖ ಕಾಟಗಾರ, ಗುರುನಾಥಸಾ ಕಾಟಿಗಾರ, ರಾಮಚಂದ್ರಸಾ ಕಲಬುರಗಿ ಹಾಗೂ ಅಮೃತ ಕಲಬುರಗಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಕರಸೇವೆಗೂ ಮುನ್ನ ಅಂದರೆ ಡಿಸೆಂಬರ್ 5, 1992 ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ ಸಂಭವಿಸಿದ್ದು, ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರ ವಿರುದ್ಧ ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ ಈ ಹಳೆ ಪ್ರಕರಣಕ್ಕೆ ಮರುಜೀವ ಕೊಡಲು ಹುಬ್ಬಳ್ಳಿ ಪೊಲೀಸರು ಮುಂದಾಗಿದ್ದಾರೆ.
ರಾಮಜನ್ಮ ಭೂಮಿ ಹೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಶಹರ ಠಾಣೆಯಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಶ್ರೀಕಾಂತ ಪೂಜಾರಿಯ ಮೇಲೆ ಒಟ್ಟು 15 ಪ್ರಕರಣಗಳಿರುವುದು ತಿಳಿದು ಬಂದಿದೆ. ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ, ಹಳೇಹುಬ್ಬಳ್ಳಿ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಹಾಗೂ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳಿವೆ.
ಇದರಲ್ಲಿ 11 ಕೇಸ್ ಗಳು ಅಕ್ರಮ ಸರಾಯಿ ಮಾರಾಟದ ಕುರಿತು ಕೇಸ್ ದಾಖಲು. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ 3 ಕೇಸ್ ಹಾಗೂ ಶಹರ ಠಾಣೆಯಲ್ಲಿ ಅಂಗಡಿಗೆ ಬೆಂಕಿ ಹಚ್ಚಿದ ಕೇಸ್ ದಾಖಲಾಗಿದೆ. ಅಕ್ರಮ ಸಾರಾಯಿ, ಸ್ಪಿರಿಟ್ ಮಾರಾಟ ಪ್ರಕರಣಗಳು ದಾಖಲಾಗಿವೆ. ಶ್ರೀಕಾಂತ ಪೂಜಾರಿಯು ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಕೇಸಿನಲ್ಲಿ ಬಂಧನವಾದ ನಂತರ ಜಾಮೀನು ಸಿಕ್ಕಿಲ್ಲ. ಹೀಗಾಗಿ ಜೈಲು ಪಾಲಾಗಿದ್ದಾರೆ.
ಇದೇ ಕೇಸಿನಲ್ಲಿ ಡಿಸೆಂಬರ್ 18 ರಂದು ಬಂಧನವಾಗಿದ್ದ ರಾಜು ಧರ್ಮದಾಸ್‌ಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಅವರು ಅವತ್ತೆ ಬಿಡುಗಡೆಯಾಗಿದ್ದಾರೆ. ಈ ಪ್ರಕರಣದಲ್ಲಿರುವ ಎಂಟು ಆರೋಪಿಗಳ ಪೈಕಿ ಐವರು ಸಾವನ್ನಪ್ಪಿದ್ದು, ಒಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಅಯೋಧ್ಯೆ ರಾಮಮಂದಿರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತ ಪ್ರಮುಖ ಆರೋಪಿಯಾಗಿದ್ದಾನೆ. ಮೂಲತ ಹಿಂದೂ ಕಾರ್ಯಕರ್ತ ಮತ್ತು ಕರಸೇವಕನಾಗಿದ್ದ. 1992 ರಲ್ಲಿ ಹೊತ್ತಿಕೊಂಡ ಬೆಂಕಿ ಹುಬ್ಬಳ್ಳಿಗೂ ತಲುಪಿತು. ಇಲ್ಲಿ ಅಂಗಡಿ ಹಾಗೂ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ ಆರೋದಡಿ ಈತನ ಮೇಲೆ ಕೆಸ್ ದಾಖಲಾಗಿದ್ದು, ಬಂಧನಕ್ಕೆ ಒಳಗಾಗಿದ್ದಾನೆ.
ಆದರೆ, ಶ್ರೀಕಾಂತ ಪೂಜಾರಿ ಕುಟುಂಬಸ್ಥರು ಹೇಳುವದೇ ಬೇರೆ. ಅವರು ಈ ಪ್ರಕರಣದಲ್ಲಿ ಭಾಗಿಯಾಗಿರಲಿಲ್ಲ. ಮೊದಲಿನಿಂದಲೂ ಆಟೋ ಓಡಿಸುತ್ತಿದ್ದ. ಗಲಭೆ ಸಂದರ್ಭದಲ್ಲಿ ರಸ್ತೆ ಬದಿ ನಿಂತಿದ್ದರು. ಇದೇ ವೇಳೆ ಅವರನ್ನು ವಶಕ್ಕೆ ಪಡೆದು ಕೇಸ್ ದಾಖಲು ಮಾಡಿದ್ದಾರೆ. ಅಲ್ಲಿಂದ ಇಲ್ಲಿಯವರೆಗೂ ಆಟೋ ಓಡಿಸುತ್ತ ಜೀವನ ಸಾಗಿಸುತ್ತಿದ್ದಾರೆ. ತಲೆ ಮರೆಸಿಕೊಂಡಿಸಿಕೊಂಡಿರಲಿಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ.
ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಬೃಹತ್ ಹೋರಾಟ ಮೂಲಕ ಈ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಸರ್ಕಾರ ಹಿಂದೂ ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಕಲಸ ಮಾಡುತ್ತಿದೆ. ಇಂತಹ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ. ಇದು ಹಿಂದೂ ವಿರೋಧಿ, ರಾಮ ವಿರೋಧಿ ಸರ್ಕಾರ ಎಂದರು.
After a gap of 31 years, the Ramjanmabhoomi case has been revived. With this, the ram janmabhoomi activists have started fearing arrest. Three decades ago, Hindu activists were involved in the Ram Janmabhoomi movement. The Hubballi police have launched a search for the accused.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm