ಬ್ರೇಕಿಂಗ್ ನ್ಯೂಸ್
03-01-24 10:39 pm Bangalore Correspondent ಕರ್ನಾಟಕ
ಬೆಂಗಳೂರು, ಜ.3: ಹುಬ್ಬಳ್ಳಿಯಲ್ಲಿ ಅಯೋಧ್ಯೆ ಕರಸೇವಕನ ಬಂಧನ ವಿಚಾರದಲ್ಲಿ ಬಿಜೆಪಿ ಬೀದಿಗಿಳಿದು ಹೋರಾಟ ಆರಂಭಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪೊಲೀಸರ ಬಂಧನ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ”ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ. ಅಕ್ರಮ ಸಾರಾಯಿ ಮಾರಾಟ, ದೊಂಬಿ, ಮಟಕಾ, ಜೂಜಾಟ ಮುಂತಾದ 16 ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರು ಈತನ ಎಲ್ಲಾ ಅಪರಾಧ ಕೃತ್ಯಗಳಿಗೆ ತಮ್ಮ ಪಕ್ಷದ ಬೆಂಬಲವಿದೆ ಎಂಬುದನ್ನು ಬಹಿರಂಗವಾಗಿ ಹೇಳಲಿ ಅಥವಾ ಪ್ರತಿಭಟನೆ ಕೈಬಿಟ್ಟು ಸಾರ್ವಜನಿಕವಾಗಿ ಕ್ಷಮೆ ಕೋರಲಿ” ಎಂದಿದ್ದಾರೆ.
ಪೊಲೀಸರು ಶ್ರೀಕಾಂತ್ ಪೂಜಾರಿ ವಿರುದ್ಧ ದಾಖಲಿಸಿರುವ ಪ್ರಕರಣಗಳ ಕುರಿತ ಪ್ರತಿಗಳ ಸಮೇತ ಇನ್ನೊಂದು ಪೋಸ್ಟ್ ಮಾಡಿದ್ದು, ”ಕಳೆದ 2023ನೇ ಸಾಲಿನಲ್ಲಿ ಹುಬ್ಬಳ್ಳಿ – ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ, ಕಳ್ಳತನ, ಸುಲಿಗೆ, ವಂಚನೆ, ದೊಂಬಿ ಮುಂತಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಲ್.ಪಿ.ಸಿ ( ಕಾನೂನು ವಿಚಾರಣಾ ಪ್ರಮಾಣಪತ್ರ ) ಪ್ರಕರಣಗಳಲ್ಲಿ ಒಟ್ಟು 36 ಜನರನ್ನು ದಸ್ತಗಿರಿ ಮಾಡಲಾಗಿದೆ. ಇದರಲ್ಲಿ ಶ್ರೀಕಾಂತ ಪೂಜಾರಿ 32ನೇ ವ್ಯಕ್ತಿ. ಈತನನ್ನು ಕರಸೇವಕನೆಂಬ ಕಾರಣಕ್ಕೆ ಹೊರಗಡೆ ಬಿಡಬೇಕೋ? ಅಥವಾ ಆರೋಪಿ ಎಂಬ ಕಾರಣಕ್ಕೆ ಬಂಧಿಸಬೇಕೋ? ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಮ್ಮ ಸರ್ಕಾರದ ವಿರುದ್ಧವಲ್ಲ, ದೇಶದ ಕಾನೂನು ಮತ್ತು ಸಂವಿಧಾನದ ವಿರುದ್ಧ. ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿಕೊಂಡು ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ? ರಾಮಮಂದಿರದ ಉದ್ಘಾಟನೆ ವೇಳೆ ಶ್ರೀಕಾಂತ ಪೂಜಾರಿಯ ಬಂಧನವಾಗಿರುವುದು ಕಾಕತಾಳೀಯ ಅಷ್ಟೆ. ಹಳೆಯ ಪ್ರಕರಣಗಳನ್ನು ಪರಿಶೀಲನೆ ನಡೆಸುವ ವೇಳೆ ಪೊಲೀಸರು ಇತರೆ 36 ಜನರ ಜೊತೆಗೆ ಇವರನ್ನು ಕೂಡ ಬಂಧಿಸಿದ್ದಾರೆ. ಇದರಲ್ಲಿ ಪ್ರತೀಕಾರವೂ ಇಲ್ಲ, ತುಷ್ಟೀಕರಣವೂ ಇಲ್ಲ. ಕಾನೂನು ಪಾಲನೆ ಮಾಡಬೇಕು, ಮಾಡಿದ್ದಾರೆ” ಎಂದು ಬಂಧನ ಕ್ರಮವನ್ನು ಸಮರ್ಥಿಸಿದ್ದಾರೆ.
ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ.
— Siddaramaiah (@siddaramaiah) January 3, 2024
ಅಕ್ರಮ ಸಾರಾಯಿ ಮಾರಾಟ,… pic.twitter.com/8U8PlQcdrL
The Karnataka government on Wednesday defended the recent arrest of Srikanth Poojari, whom the Opposition BJP has described as an “elderly kar sevak”, in a 31-year-old rioting case, citing multiple cases filed against him, even as the saffron party protested across the state over the arrest.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm