KGF Star Yash, Gadag Current, fans Death: ಗದಗ ; ರಾಕಿಂಗ್ ಸ್ಟಾರ್ ಯಶ್ ಬರ್ತ್​ಡೇ ದಿನವೇ ಘನಘೋರ ದುರಂತ, ಕಟೌಟ್ ಕಟ್ಟುವಾಗ ಕರೆಂಟ್ ಶಾಕ್, ಮೂವರ ಬಲಿ 

08-01-24 01:14 pm       HK News Desk   ಕರ್ನಾಟಕ

ರಾಕಿಂಗ್ ಸ್ಟಾರ್ ಯಶ್  ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾಗಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ.

ಗದಗ, ಜ 08: ರಾಕಿಂಗ್ ಸ್ಟಾರ್ ಯಶ್  ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾಗಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ.

ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ (21), ಮುರಳಿ ನೀಲಪ್ಪ ನಡವಿನಮನಿ (20), ನವೀನ ನೀಲಪ್ಪ ಗಾಜಿ (19) ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ರಾಕಿಂಗ್ ಸ್ಟಾರ್ ಜನ್ಮದಿನವನ್ನು ಆಚರಿಸಲು ಪ್ಲಾನ್ ಮಾಡಿಕೊಂಡಿದ್ದ ಸೂರಣಗಿ ಗ್ರಾಮದ‌ 10ಕ್ಕೂ ಯುವಕರು 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿ ತಾಗಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಯುವಕರ ಹಠಾತ್ ಸಾವಿನಿಂದಾಗಿ ಸೂರಣಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿತ್ತು.

ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಸಕ ಡಾಕ್ಟರ್ ಚಂದ್ರು ಲಮಾಣಿ ಆಸ್ಪತ್ರೆಗೆ ಭೇಟಿ ನೀಡಿದ್ದರು.

3 Fans Of KGF Star Yash Electrocuted While Putting Up Banner Of Actor Gadag District. This incident occurred late Sunday night, resulting in the loss of three lives and injuries to two others, currently under treatment at Laxmeshwar Taluk Hospital.