ಬ್ರೇಕಿಂಗ್ ನ್ಯೂಸ್
08-01-24 09:40 pm HK News Desk ಕರ್ನಾಟಕ
ಶಿವಮೊಗ್ಗ, ಜ 08: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.
ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆಯಾಗಿತ್ತು. ಆರ್ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಯುವತಿಯಲ್ಲಿ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.
In an incident reported from Manipal hospital, an 18-year-old girl succumbed to Kyasanur Forest Disease (KFD) in a private hospital on Monday. Hailing from a village under Aramane Koppa in Hosanagar, the young woman had developed a fever a week ago, prompting her admission to Mcgan Hospital.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm