ಬ್ರೇಕಿಂಗ್ ನ್ಯೂಸ್
08-01-24 10:21 pm Bangalore Correspondent ಕರ್ನಾಟಕ
ಬೆಂಗಳೂರು, ಜ 08: ಸಿನಿಮಾ ಸಕ್ಸಸ್ ಪಾರ್ಟಿಯನ್ನು ಅವಧಿ ಮೀರಿ ಬೆಳಗಿನ ಜಾವದವರೆಗೆ ಮಾಡಿದ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ 8 ಮಂದಿಗೆ ಹಾಗೂ ಕರ್ತವ್ಯಲೋಪವೆಸಗಿದ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ಬೆಂಗಳೂರು ಪೊಲೀಸ್ ಇಲಾಖೆ ತನಿಖೆಗೆ ಆದೇಶಿಸಿದೆ.
ಈ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರು ಉತ್ತರ ವಿಭಾಗ ಡಿಸಿಪಿ ಸೈದುಲು ಅದಾವತ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಎಫ್‌ಐಆರ್ ದಾಖಲಿಸಿರುವ ಪ್ರತಿಯನ್ನು ತೋರಿಸಿದರು. ಅಲ್ಲದೆ ಚಿತ್ರತಂಡಕ್ಕೆ ನೀಡಿರುವ ನೊಟೀಸ್ ಮತ್ತು ಅದರ ಬಗ್ಗೆ ತನಿಖೆ ನಡೆಸುವಂತೆ ಮಲ್ಲೇಶ್ವರಂ ಎಸಿಪಿಗೆ ಸೂಚಿಸಲಾಗಿದೆ ಎಂದರು. ಜನವರಿ 3ರಂದು ರಾತ್ರಿಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಸುಬ್ರಹ್ಮಣ್ಯ ನಗರ ಠಾಣೆಯ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಮತ್ತು ನಾಲ್ವರು ಕಾನ್ ಸ್ಟೇಬಲ್ ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಎಫ್‌ಐಆರ್ ನಲ್ಲಿರುವುದೇನು?:
ಅಬಕಾರಿ ಕಾಯಿದೆ ಷರತ್ತುಗಳ ಪ್ರಕಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮಾತ್ರ ರೆಸ್ಟೋಬಾರ್ ತೆರೆಯಲು ಅವಕಾಶವಿದೆ.
ಆದರೆ ಜಟ್ಲಾಗ್ ರೆಸ್ಟೋಬಾರ್ ಈ ನಿಮಯಮ ಉಲ್ಲಂಘಿಸಿ ಬೆಳಗಿನ ಜಾವ 3.30ರವರೆಗೂ ಪಾರ್ಟಿ ಮಾಡಲು ಸೆಲೆಬ್ರಿಟಿಗಳಿಗೆ ಅವಕಾಶ ಕೊಟ್ಟಿತ್ತು. ರೆಸ್ಟೋಬಾರ್ ಬೆಳಗ್ಗಿನ ಜಾವ 3 ಗಂಟೆಯಾದರೂ ತೆಗೆದೇ ಇದ್ದ ಬಗ್ಗೆ ಸ್ಥಳೀಯರು ಸುಬ್ರಹ್ಮಣ್ಯ ನಗರ ಠಾಣೆಗೆ ಮಾಹಿತಿ ನೀಡಿದ್ದರು. ಮಾಹಿತಿ ಆಧರಿಸಿ ಜಟ್ಲಾಗ್ ರೆಸ್ಟೋಬಾರ್ ಮೇಲೆ ದಾಳಿ ನಡೆಸಿದ್ದ ಪೊಲೀಸರು ಕೂಡಲೇ ಬಾರ್ ಕ್ಲೋಸ್ ಮಾಡಿಸಿ 3.30ರ ಸುಮಾರಿಗೆ ಜೆಟ್ಲಾಗ್ ನಲ್ಲಿ ಪಾರ್ಟಿ ಮಾಡ್ತಿದ್ದ ಸೆಲೆಬ್ರಿಟಿಗಳನ್ನು ಮನೆಗೆ ಕಳುಹಿಸಿದ್ದರು.
ಜನವರಿ 4ರ ಬೆಳಗಿನ ಜಾವದವರೆಗೆ ಪಾರ್ಟಿ ಹೇಗೆ ನಡೆಯಿತು ಎಂಬುದರ ಕುರಿತು ವಿವರಗಳನ್ನು ಒದಗಿಸುವಂತೆ ಪೊಲೀಸರನ್ನು ಕೇಳಲಾಗಿದೆ.
ಜೆಟ್ ಲ್ಯಾಗ್ ಪಬ್ಗೆ ಏಕೆ ತಡವಾಗಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಯಿತು ಎಂದು ವಿವರಣೆ ನೀಡುವಂತೆ ಸೂಚಿಸಲಾಗಿದೆ ಎಂದು ಡಿಸಿಪಿ ಸೈದುಲ್ ಅದಾವತ್ ತಿಳಿಸಿದ್ದಾರೆ.
ಘಟನೆ ಬೆಳಕಿಗೆ ಬಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಏಕೆ ಎಂಬ ವಿವರಣೆ ನೀಡುವಂತೆ ಪೊಲೀಸರನ್ನೂ ಕೇಳಲಾಗಿದೆ. ಇತ್ತೀಚೆಗೆ ತೆರೆಕಂಡ ಕನ್ನಡದ ಸೂಪರ್ಹಿಟ್ ಸಿನಿಮಾ ‘ಕಾಟೇರ’ ತಂಡ ಈ ಸಕ್ಸಸ್ ಪಾರ್ಟಿ ಆಯೋಜಿಸಿತ್ತು.
ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟರಾದ ನಿನಾಸಂ ಸತೀಶ್, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್ ಹಾಗೂ ಚಿಕ್ಕಣ್ಣ ಅವರಿಗೆ ಪ್ರಧಾನವಾಗಿ ನೋಟಿಸ್ ಜಾರಿ ಮಾಡಲಾಗಿದೆ.
FIR Against Kannada Actor Darshan, 8 Others For Partying Late At Jetlag Pub and bar In Bengaluru, Subramanya Nagar Police in trouble for allowing permission till morning 3:30. DCP Saidulu Adavath has ordered enquiry against Subramanya Nagar station inspector and others.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm