ಬ್ರೇಕಿಂಗ್ ನ್ಯೂಸ್
11-01-24 10:27 pm Bangalore Correspondent ಕರ್ನಾಟಕ
ಬೆಂಗಳೂರು, ಜ.11: ಲೋಕಸಭೆ ಚುನಾವಣೆ ಸಿದ್ಧತೆ ಬಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಕರಾವಳಿಯ ಮೂರು ಹಾಲಿ ಸಂಸದರ ಬಗ್ಗೆಯೂ ವಿರೋಧ ವ್ಯಕ್ತವಾಗಿದೆ ಎಂಬ ಮಾಹಿತಿ ಲಭಿಸಿದೆ. ಕ್ಲಸ್ಟರ್ ಮಟ್ಟದ ಸಭೆಯಲ್ಲಿ ಉತ್ತರ ಕನ್ನಡ, ಉಡುಪಿ- ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರಗಳ ವ್ಯಾಪ್ತಿಯ ಶಾಸಕರು, ಪಕ್ಷದ ಪ್ರಮುಖರ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಲೋಕಸಭೆ ಚುನಾವಣೆ ಸಿದ್ಧಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿಜಯೇಂದ್ರ, ಸದಾನಂದ ಗೌಡ, ಸಿಟಿ ರವಿ ಉಪಸ್ಥಿತರಿದ್ದರು. ಸಭೆಗೆ ಪ್ರತಿ ಜಿಲ್ಲೆಯಿಂದ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಹಾಲಿ ಶಾಸಕರು ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯರನ್ನು ಆಹ್ವಾನಿಸಲಾಗಿತ್ತು. ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಸಭೆಗೆ ಗೈರಾಗಿದ್ದರು. ಲೋಕಸಭೆ ಚುನಾವಣೆಗೆ ಯುದ್ಧೋಪಾದಿಯಲ್ಲಿ ಸಿದ್ಧಗೊಳ್ಳುವಂತೆ ಪಕ್ಷದ ಪ್ರಮುಖರಿಗೆ ಸಭೆಯಲ್ಲಿ ಸೂಚನೆ ನೀಡಲಾಗಿದೆ.
ಕೂಡಲೇ ಲೋಕಸಭೆ ಚುನಾವಣೆಗೆ ನಿರ್ವಹಣಾ ಸಮಿತಿಗಳನ್ನು ರೂಪಿಸಬೇಕು. ನಾಯಕರ ಬಗ್ಗೆ ಅಪಸ್ವರ ಇದ್ದಲ್ಲಿ ಅದನ್ನು ಸರಿಪಡಿಸಿಕೊಂಡು ಪಕ್ಷವನ್ನು ಚುನಾವಣೆಗೆ ಸಿದ್ಧಗೊಳಿಸಬೇಕು. ಸದ್ಯದಲ್ಲೇ ಎಲ್ಲ ಜಿಲ್ಲೆಗಳಿಗೂ ವೀಕ್ಷಕರನ್ನು ಕಳಿಸಿಕೊಡಲಿದ್ದು, ಅಭ್ಯರ್ಥಿ ಬಗ್ಗೆ ಆಕ್ಷೇಪಗಳಿದ್ದಲ್ಲಿ ಅವರ ಮೂಲಕ ತಿಳಿಸಲು ಅವಕಾಶ ಇದೆ. ಜನರ ಒಲವು ಏನಿದೆ ಎನ್ನುವ ಬಗ್ಗೆಯೂ ವೀಕ್ಷಕರಿಗೆ ತಿಳಿಸಬಹುದು. ಜನವರಿ ಅಂತ್ಯದ ವೇಳೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ರಾಜ್ಯ ನಾಯಕರು ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಹಾಲಿ ಸಂಸದರ ಬಗ್ಗೆ ಜನರ ಒಲವು ಇಲ್ಲದಿರುವುದು, ಕಾರ್ಯಕರ್ತರು ವೈಮನಸ್ಸು ಹೊಂದಿರುವ ಬಗ್ಗೆಯೂ ಚರ್ಚೆಯಾಗಿದೆ. ಕಳೆದ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿರುವುದು, ಅಲ್ಲಿ ಬಂಡಾಯ ಸ್ಪರ್ಧಿಸಿದ ಅರುಣ್ ಕುಮಾರ್ ಪುತ್ತಿಲ ಕುರಿತಾಗಿಯೂ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. ಸಭೆಯಲ್ಲಿ ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತ ಕುಮಾರ್ ಹೆಗಡೆ ಉಪಸ್ಥಿತರಿದ್ದು, ಅವರ ಕುರಿತಾಗಿಯೇ ಪಕ್ಷದ ಪರವಾಗಿ ಜಿಲ್ಲೆಯಿಂದ ಬಂದಿದ್ದವರು ಬ್ಯಾಟಿಂಗ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ.
Unhappy about MP Nalin Kateel, during BJP meeting, ordered to form committee for elections, New list soon.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm