Charmadi Ghat Accident: ಚಾರ್ಮಾಡಿ ಘಾಟ್ ನಲ್ಲಿ 2 ಸಾವಿರ ಅಡಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ ; ಡ್ರೈವರ್ ಬದುಕುಳಿದಿದ್ದೇ ನಿಜಕ್ಕೂ ಅಚ್ಚರಿ

13-01-24 12:48 pm       HK News Desk   ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ  ನಡೆದಿದೆ.

ಕೊಟ್ಟಿಗೆಹಾರ, ಜ 13: ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ  ನಡೆದಿದೆ.

ಮೂಡಿಗೆರೆಯಿಂದ ಚಾರ್ಮಾಡಿಗೆ ಹೋಗುತ್ತಿದ್ದ ಟಿಪ್ಪರ್ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳೀಯರು  ಸೊಂಟಕ್ಕೆ ಅಗ್ಗ ಕಟ್ಟಿಕೊಂಡು ಪ್ರಪಾತಕ್ಕೆ ಇಳಿದು ಚಾಲಕನ ರಕ್ಷಣೆ ಮಾಡಿದ್ದಾರೆ. ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

charmadighat

ಸ್ಥಳಕ್ಕೆ ಪೊಲೀಸರು ಅರಣ್ಯ ಇಲಾಖೆ ಸಿಬ್ಬಂದಿಗಳು ಸಮಾಜ ಸೇವಕ ಆರಿಫ್ ಹಾಗೂ ಅಬ್ದುಲ್ ರೆಹಮಾನ್ ಕಾರ್ಯಚರಣೆಯಲ್ಲಿ ಇದ್ದರು.

ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Charmadi Ghat Accident, truck falls 2 thousnad feet gorge, driver survives.