Kollegala Accident: ಭತ್ತ ಕತ್ತರಿಸುವ ಯಂತ್ರಕ್ಕೆ ಡಿಕ್ಕಿ ಹೊಡೆದ  ಬೈಕ್ ; ಸಂಕ್ರಾಂತಿ ಹಬ್ಬಕ್ಕೆ ಬಟ್ಟೆ ಖರೀಸಲು ಹೋಗಿ ಸ್ಮಶಾನ ಸೇರಿದ ಒಂದೇ ಕುಟುಂಬದ ನಾಲ್ಕು ಮಂದಿ 

15-01-24 02:37 pm       HK News Desk   ಕರ್ನಾಟಕ

ಸಂಕ್ರಾಂತಿ ಹಬ್ಬದಂದೇ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.

ಚಾಮರಾಜನಗರ, ಜ 15: ಸಂಕ್ರಾಂತಿ ಹಬ್ಬದಂದೇ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.

ಮೃತರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಸಂತೋಷ (37), ಸೌಮ್ಯ (27) ಹಾಗು ಮಕ್ಕಳಾದ ಸಾಕ್ಷಿ (4), ಅಭಿ (9) ಎಂದು ಗುರುತಿಸಲಾಗಿದೆ.

ಹಬ್ಬಕ್ಕೆ ಬಟ್ಟೆ ಖರೀಸಲು ಕೊಳ್ಳೇಗಾಲಕ್ಕೆ ಸಂತೋಷ್ ಕುಟುಂಬ ಬೈಕ್​ನಲ್ಲಿ ತೆರಳುತ್ತಿದ್ದರು ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಜಿನಕನಹಳ್ಳಿ ಸಮೀಪ ಭತ್ತ ಕತ್ತರಿಸುವ ಯಂತ್ರಕ್ಕೆ  ಬೈಕ್​ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್​ನಿಂದ ನಾಲ್ವರೂ ಕೆಳಕ್ಕೆ ಬಿದ್ದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟರು. ಇನ್ನೊಂದು ಮಗು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.

ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

Horrible road accident in Kollegala, Couple, two children die on spot after ramming into Rice cutting machine.