ಬ್ರೇಕಿಂಗ್ ನ್ಯೂಸ್
18-01-24 10:24 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸಲಾಗುವುದು. ಇದಕ್ಕಾಗಿ ಆರೋಗ್ಯ ಇಲಾಖೆಯ ಸಕ್ಷಮ ಪ್ರಾಧಿಕಾರಕ್ಕೆ ಎಸಿಪಿ ಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿ ನಿಯೋಜಿಸಲು ಗೃಹ ಇಲಾಖೆಗೆ ಮನವಿ ಸಲ್ಲಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ PC& PNDT ಕಾಯ್ದೆ ಅಡಿ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯ ಜೊತೆ ಸಭೆ ನಡೆಸಿದ ಆರೋಗ್ಯ ಸಚಿವರು, ಭ್ರೂಣ ಹತ್ಯೆ ವಿಚಾರದಲ್ಲಿ ಜಾಗೃತಿಯ ಜೊತೆಗೆ ಕಠಿಣ ಕ್ರಮಗಳು ಆಗಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, ಮೇಲ್ವಿಚಾರಣಾ ಸಮಿತಿಯ ಮೊದಲ ಸಭೆ ಇಂದು ಸೇರಲಾಗಿತ್ತು. ನಾಲ್ವರು ಶಾಸಕಿಯರು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಮಿತಿಯ ಸದಸ್ಯರಿದ್ದಾರೆ. ಭ್ರೂಣ ಹತ್ಯೆ ತಡೆ ನಿಟ್ಟಿನಲ್ಲಿ ಶಾಸಕಿ ರೂಪಕಲಾ, ನಯನಾ ಮೊಟಮ್ಮ, ಲತಾ ಮಲ್ಲಿಕಾರ್ಜುನ್ ತಮ್ಮ ಸಲಹೆಗಳನ್ನ ನೀಡಿದ್ದಾರೆ. ಪ್ರತಿ ಹಂತದಲ್ಲಿ ಮೇಲ್ವಿಚಾರಣೆ ನಡೆಸುವುದರ ಜೊತೆಗೆ, ಹೆಣ್ಣು ಮಕ್ಕಳು ಸಮಾಜಕ್ಕೆ ಎಷ್ಟು ಮುಖ್ಯ ಎಂಬುದರ ಬಗ್ಗೆ ದೊಡ್ಡ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
ಭ್ರೂಣ ಹತ್ಯೆಗಳ ತಡೆಗೆ ಪರಿಣಾಮಕಾರಿ ಕಾರ್ಯ ನಿರ್ವಹಿಸಲು ರಾಜ್ಯ ಮಟ್ಟದಲ್ಲಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲು ನಿರ್ಧರಿಸಿದ್ದೇವೆ. ಈ ಕಾರ್ಯಪಡೆ ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ pc&pndt ಕಾಯ್ದೆ ಅಡಿ ಕಾರ್ಯ ನಿರ್ವಹಿಸಿ ಹೆಚ್ಚು ನಿಗಾ ವಹಿಸಲಿವೆ. ಅಲ್ಲದೇ ಆರೋಗ್ಯ ಇಲಾಖೆಯ ಸಕ್ಷಮ ಪ್ರಾಧಿಕಾರಕ್ಕೆ ಪ್ರತ್ಯೇಕವಾಗಿ ಎಸಿಪಿ ಮಟ್ಟದ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಸಬ್ ಇನ್ಸ್ ಪೆಕ್ಟರ್ ನಿಯೋಜಿಸುವಂತೆ ಗೃಹ ಇಲಾಖೆಗೆ ಪತ್ರ ಬರೆಯಲಾಗುವುದು. ಇದರಿಂದ ಭ್ರೂಣ ಹತ್ಯೆ ಪ್ರಕರಣಗಳನ್ನ ಟ್ರೇಸ್ ಮಾಡಲು ಸಹಕಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಭ್ರೂಣ ಹತ್ಯೆ ನಡೆಸುತ್ತಿರುವವರ ಮೇಲೆ ಕಠಿಣ ಕ್ರಮಗಳು ಆಗಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಈಗಿರುವ ಕಾಯ್ದೆಯಲ್ಲಿ 10 ಸಾವಿರ ದಂಡ, 3 ವರ್ಷ ಜೈಲು ಶಿಕ್ಷೆ ಇದೆ. 5 ಲಕ್ಷದ ವರೆಗೆ ದಂಡ ವಿಧಿಸಿ, 5 ವರ್ಷ ಜೈಲು ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ನಾನ್ ಬೇಲಬಲ್ ಕೇಸ್ ಆಗಬೇಕು. ಈ ನಿಟ್ಟಿನಲ್ಲಿ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
A task force will be set up at the state and district levels to prevent foeticide. Health Minister Dinesh Gundu Rao said that a request will be made to the Home Department to appoint an ACP-level officer and staff to the competent authority of the health department.
27-08-25 03:17 pm
HK News Desk
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm