ಬ್ರೇಕಿಂಗ್ ನ್ಯೂಸ್
19-01-24 07:21 pm Bangalore Correspondent ಕರ್ನಾಟಕ
ಬೆಂಗಳೂರು, ಜ.19: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇದೆ ಎಂದು ನಾನು ಅಂದುಕೊಂಡಿದ್ದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆಯಾ ಅಥವಾ ಬೇರೆಯವರ ಸರ್ಕಾರ ಇದೆಯಾ ಎನ್ನುವುದನ್ನು ಯೋಚನೆ ಮಾಡಬೇಕಿದೆ. ನನ್ನ ಪರಿಸ್ಥಿತಿಯೇ ಹೀಗಾದರೆ, ಉಳಿದ ಸಾಮಾನ್ಯ ಕಾರ್ಯಕರ್ತರ ಪರಿಸ್ಥಿತಿ ಏನು ಎನ್ನುವುದು ನನ್ನ ಯೋಚನೆ. ಬಿಜೆಪಿ ಸರ್ಕಾರ ಇದ್ದಾಗ ಮೂರು ಕೇಸ್ ಫೈಲ್ ಮಾಡಿದ್ದರು. ಆದರೆ ಇವರು ಯಾಕೆ ಹೀಗೆ ಮಾಡುತ್ತಿದ್ದಾರೆ ಎನ್ನುವುದು ಗೊತ್ತಾಗ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ನೋವು ಹೇಳಿಕೊಂಡಿದ್ದಾರೆ.
ರಾಜ್ಯದಲ್ಲೂ ಗೋಧ್ರಾ ಮಾದರಿ ಹತ್ಯಾಕಾಂಡ ದಾಳಿ ನಡೆಯಬಹುದು. ನಮ್ಮ ಕರ್ನಾಟಕದಿಂದ ಅಯೋಧ್ಯೆಗೆ ಪ್ರಯಾಣಿಸುವವರಿಗೆ ರಕ್ಷಣೆ ಕೊಡಿ ಎಂಬ ಹೇಳಿಕೆ ನೀಡಿದ ಹಿನ್ನೆಲೆ ಸಿಸಿಬಿ ಪೊಲೀಸರು ಕುಮಾರಕೃಪಾ ಅತಿಥಿ ಗೃಹದಲ್ಲಿ ಬಿಕೆ ಹರಿಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ವಿಚಾರಣೆ ಬಳಿಕ ಹರಿಪ್ರಸಾದ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.
ಕುಮಾರಕೃಪಾದಲ್ಲಿ ಇದ್ದಾಗ ಹೇಳಿಕೆ ಪಡೆಯಲು ಬಂದಿದ್ದರು. ಸಿಸಿಬಿ ಅಧಿಕಾರಿಗಳ ಯಾವ ಪ್ರಶ್ನೆಗಳಿಗೂ ನಾನು ಉತ್ತರ ನೀಡಿಲ್ಲ. ಠಾಣೆಗೆ ಕರೆದುಕೊಂಡು ಹೋಗಿ, ಅಲ್ಲಿ ಉತ್ತರ ಕೊಡುತ್ತೇನೆ. ಠಾಣೆಗೆ ಕರೆದುಕೊಂಡು ಹೋಗಲು ವಾರೆಂಟ್ ಜೊತೆಗೆ ಬನ್ನಿ ಎಂದು ಹೇಳಿ ಕಳುಹಿಸಿದ್ದೇನೆ. ಸಂಸದ ಅನಂತ್ ಕುಮಾರ್ ಹೆಗಡೆ, ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ರತ್ನಕಂಬಳಿ ಹಾಸಿ ನೋಡಿಕೊಳ್ಳುವಂತೆ, ನನ್ನನ್ನು ನೋಡಿಕೊಳ್ಳಬೇಕೆಂದಿಲ್ಲ. ಯಾವುದೇ ಸಂದರ್ಭದಲ್ಲಿ ಕರೆದರೂ ಬಂದು ಉತ್ತರ ನೀಡಲು ತಯಾರಿದ್ದೇನೆ. ಕೇವಲ ಹೇಳಿಕೆ ಮಾತ್ರವಲ್ಲ, ನಾನು ಮಂಪರು ಪರೀಕ್ಷೆಗೂ ತಯಾರಿದ್ದೇನೆ. ನನ್ನ ಜೊತೆಗೆ ಬಿಜೆಪಿಯ ರಾಜ್ಯಾಧ್ಯಕ್ಷರ ಮಂಪರು ಪರೀಕ್ಷೆಯನ್ನೂ ನಡೆಸಬೇಕು ಎಂದು ಅವರಿಗೆ ಹೇಳಿದ್ದೇನೆ ಎಂದು ಹೇಳಿದರು.
ಸರ್ಕಾರದ ವಿರುದ್ಧ ನಾನು ಮಾತನಾಡಿಲ್ಲ. ಸರ್ಕಾರದಲ್ಲಿರುವವರಿಗೆ ಅವರ ಜವಾಬ್ದಾರಿ ಏನು ಎನ್ನುವುದನ್ನು ಹೇಳಿದ್ದೇನೆ. ಆದರೆ, ಅದು ಸರ್ಕಾರದ ವಿರುದ್ಧ ಅನ್ಕೊಂಡಿದ್ದಾರೆ. ನನ್ನ ತಿಳಿವಳಿಕೆ, ಸಲಹೆಯನ್ನು ಬೇರೆ ರೀತಿಯಲ್ಲಿ ತೆಗೆದುಕೊಂಡರೆ ನಾನು ಜವಾಬ್ದಾರನಲ್ಲ. ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ನಮ್ಮದು ಅದ್ಭುತವಾದ ಸರ್ಕಾರ. ಹೈಕಮಾಂಡ್ ಇವರಲ್ಲೇ ಇದೆ ನೋಡೋಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್, ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅವರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಅವರಿಗೆ ರತ್ನ ಕಂಬಳಿ ಹಾಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ಪೊಲೀಸ್ನವರು ಟಾರ್ಗೆಟ್ ಮಾಡಿದರೆ ನಾನು ಬಗ್ಗುವವನಲ್ಲ. ಪೊಲೀಸ್ ಮೂಲಕ ಸರ್ಕಾರ ನನ್ನನ್ನು ಟಾರ್ಗೆಟ್ ಮಾಡಿದ್ದರೆ, ಅವರ ಭ್ರಮೆಯಷ್ಟೆ. ಬಿಜೆಪಿ ಇದ್ದಾಗ ಮೂರು ಕೇಸ್ ಹಾಕಿದ್ದಾರೆ. ಅದು ಬೇರೆ ಪ್ರಶ್ನೆ. ನಾನೇನಾದರೂ ಪ್ರಚೋದನಾಕಾರಿ ಹೇಳಿಕೆಗಳನ್ನು ಕೊಟ್ಟಾಗ ಕೇಸ್ ಮಾಡಬೇಕು. ಆದರೆ ಇವರು ಯಾಕೆ ಮಾಡಿದ್ದಾರೆ ಎನ್ನುವುದನ್ನು, ಬೇರೆ ಸದಸ್ಯರ ಜೊತೆ ಮಾತನಾಡಿ, ನಂತರ ಮಾಧ್ಯಮದ ಮುಂದೆ ಬರುತ್ತೇನೆ" ಎಂದು ಹೇಳಿದ್ದಾರೆ.
ಗೋಧ್ರಾ ಮಾದರಿ ಹತ್ಯಾಕಾಂಡ ರೀತಿ ರಾಜ್ಯದಲ್ಲೂ ನಡೆಯಬಹುದು ಎಂಬ ಹರಿಪ್ರಸಾದ್ ಹೇಳಿಕೆ ವಿಚಾರವಾಗಿ ಸಿಸಿಬಿ ಪೊಲೀಸರು ಬಿ.ಕೆ.ಹರಿಪ್ರಸಾದ್ ಅವರನ್ನು ವಿಚಾರಣೆಗೆ ಕರೆದಿದ್ದರು. ಹೇಳಿಕೆ ಆಧರಿಸಿ ಮಾಹಿತಿ ನೀಡುವಂತೆ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಸರ್ಕಾರದ ನಡೆಗೆ ಬಿ.ಕೆ.ಹರಿಪ್ರಸಾದ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
B K Hariprasad slams Congress govt says Kalladka Bhat, Ananth hedge are been saved by Congress.
27-08-25 03:17 pm
HK News Desk
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm