Chitradurga accident, 3 children among 4 killed: ಚಿತ್ರದುರ್ಗದಲ್ಲಿ ಭೀಕರ ಅಪಘಾತ, ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಕಾರು ; ಮೂವರು ಮಕ್ಕಳು ಸೇರಿ ನಾಲ್ವರ ಸಾವು

25-01-24 10:47 am       HK News Desk   ಕರ್ನಾಟಕ

ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಸೇತುವೆಗೆ ಡಿಕ್ಕಿ ಹೊಡೆದು ಪರಿಣಾಮವಾಗಿ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ, ಜ 25: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಸೇತುವೆಗೆ ಡಿಕ್ಕಿ ಹೊಡೆದು ಪರಿಣಾಮವಾಗಿ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಿಳಿ ಗುರುವಾರ ಮುಂಜಾವು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಸಿಂಧುಶ್ರೀ, 5 ತಿಂಗಳ ಹಸುಗೂಸು ಅಯ್ಯಾಳಪ್ಪ, ಮತ್ತೊಂದು 3 ತಿಂಗಳ ಹಸುಗೂಸು ರಕ್ಷಾ ಹಾಗೂ 25 ವರ್ಷದ ಲಿಂಗಪ್ಪ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಳ್ಳಿಯ ನಿವಾಸಿಗಳು ಎಂದು ತಿಳಿದುಬಂದಿದೆ ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಅಪಘಾತ ನಡೆದಿದ್ದು ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಠಾಣೆಯ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಚಳ್ಳಕೆರೆ ಸಮೀಪ ಚಾಲಕನಿಗೆ ನಿದ್ದೆಯ ಮಂಪರು ಶುರುವಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಸೇತುವೆಗೆ ಅಪ್ಪಳಿಸಿದೆ. ಅತಿ ವೇಗವಾಗಿದ್ದರಿಂದ ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Chitradurga accident, 3 children among 4 killed in accident in Challakere taluk. The accident took place after the driver of the speeding car lost control of it and rammed into a wall constructed over the bridge. Three other injured have been taken to the hospital in Challakere.