ಬ್ರೇಕಿಂಗ್ ನ್ಯೂಸ್
25-01-24 01:25 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಮಹತ್ವದ ಬೆಳವಣಿಗೆಯಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದ್ದ ಜಗದೀಶ ಶೆಟ್ಟರ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಷಾರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಮರಳಿ ಬಿಜೆಪಿ ಸೇರಿದ್ದಾರೆ.
ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಜೊತೆಗೆ ಶೆಟ್ಟರ್, ಅಮಿತ್ ಷಾರನ್ನು ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಿವೈ ವಿಜಯೇಂದ್ರ ಮಾತನಾಡಿ, ಶೆಟ್ಟರ್ ಅವರು ಮರಳಿ ಮನೆಗೆ ಬಂದಿದ್ದಾರೆ. ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದರು.


ಜಗದೀಶ್ ಶೆಟ್ಟರ್ ಮಾತನಾಡಿ, ನಮ್ಮ ನಾಯಕರಾದ ಯಡಿಯೂರಪ್ಪ ಮತ್ತು ರಾಷ್ಟ್ರೀಯ ನಾಯಕರು ಮರಳಿ ಪಕ್ಷಕ್ಕೆ ಬರಬೇಕೆಂದು ಒತ್ತಡ ಹಾಕಿದ್ದರು. ಎಲ್ಲರ ಬಯಕೆ ಅನುಸರಿಸಿ ಮತ್ತೆ ಪಕ್ಷಕ್ಕೆ ಸೇರುತ್ತಿದ್ದೇನೆ. ಕರ್ನಾಟಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಇಮೇಲ್ ಮೂಲಕ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ರವಾನಿಸಿದ್ದೇನೆ. ಇಡೀ ಜಗತ್ತಿನಲ್ಲಿ ನಾಯಕರಾಗಿ ಬೆಳೆದಿರುವ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕೆಂದು ಮರಳಿ ಪಕ್ಷ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಮುಖಂಡ ಭೂಪೇಂದ್ರ ಯಾದವ್ ಉಪಸ್ಥಿತರಿದ್ದರು.
Former Karnataka CM Jagadish Shettar, on Thursday, rejoined the BJP in the presence of former CM B S Yediyurappa and state BJP President B Y Vijayendra, at the party headquarters in Delhi.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm