ಬ್ರೇಕಿಂಗ್ ನ್ಯೂಸ್
26-01-24 10:40 pm Hk News Desk ಕರ್ನಾಟಕ
ಬೆಂಗಳೂರು, ಜ 26: ಯುವಕನೋರ್ವ ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಬಲಿ ಆಗಿರುವ ಘಟನೆ ಬೆಂಗಳೂರು ನಗರದ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ತಮಿಳುನಾಡು ತಿರುವಣಾಮಲೈ ಮೂಲದ ರಾಬಿನ್ (22) ಎಂದು ತಿಳಿದು ಬಂದಿದ್ದು, ಇವರು ರಾಜಾಜಿನಗರದ ಬೋವಿ ಕಾಲೋನಿ ಬಸವೇಶ್ವರನಗರ ನಿವಾಸಿ ಎಂದು ತಿಳಿದು ಬಂದಿದೆ. ಇವರು ರಾಷ್ಟ್ರೀಕೃತ ಬ್ಯಾಂಕ ಒಂದರಲ್ಲಿ ಕೆಲಸ ಮಾಡುತ್ತಿದ್ದರು.
ಗಣರಾಜ್ಯೋತ್ಸವದ ಪ್ರಯುಕ್ತ ಇಂದು ಬ್ಯಾಂಕಿನ ವತಿಯಿಂದ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದ ರಾಬಿನ್ ಎರಡು ಮೂರು ಆಟಗಳಲ್ಲಿ ಜಯಗಳಿಸಿ ಕ್ರಿಕಟ್ನಲ್ಲೂ ತಂಡದ ಗೆಲವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಹುಮಾನ ವಿತರಣೆ ವೇಳೆ ವೇದಿಕೆ ಮೇಲೆ ರಾಬಿನ್ ಕುಸಿದು ಬಿದ್ದಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಡಿಹೈಡ್ರೇಟ್ ಆಗಿದ್ದರಿಂದ ರಾಬಿನ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.
22 year old bank employee dies of a heart attack in Bangalore. A 22-year old bank employee dies of a heart attack in Bangalore. The deceased has been identified as Ruban from Tamil Nadu.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
25-09-26 11:17 am
HK News Staffer
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am