ಬ್ರೇಕಿಂಗ್ ನ್ಯೂಸ್
26-01-24 10:52 pm Bangalore Correspondent ಕರ್ನಾಟಕ
ಬೆಂಗಳೂರು, ಜ.26: ಉಚಿತವಾಗಿ ಉತ್ತಮ ಡಯಾಲಿಸಿಸ್ ಸೇವೆ ಎದುರು ನೋಡುತ್ತಿದ್ದ, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ಜನರಿಗೆ ಸಂತಸದ ಸುದ್ದಿ. ಸೋಂಕು ರಹಿತ ಡಯಾಲಿಸಿಸ್ ಸೇವೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಡಯಾಲಿಸಿಸ್ ಮಾಡಿಸಿಕೊಳ್ಳುವವರಿಗೆ ಇನ್ಮುಂದೆ ಏಕ ಬಳಕೆಯ ಡಯಾಲೈಸರ್ ಆರೈಕೆ ಲಭ್ಯವಾಗಲಿದೆ.
ರಾಜ್ಯದಲ್ಲಿ ಕೆಲವು ದೂರು ದುಮ್ಮಾನಗಳಿಂದ ನಡೆಯುತ್ತಿದ್ದ ಡಯಾಲಿಸಿಸ್ ವ್ಯವಸ್ಥೆಯನ್ನ ಆರೋಗ್ಯಕರ ಹಂತಕ್ಕೆ ತರುವಲ್ಲಿ ಕಳೆದ 6 ತಿಂಗಳಿನಿಂದ ಸಾಕಷ್ಟು ಸವಾಲುಗಳನ್ನ ಎದುರಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊನೆಗೂ ರಾಜ್ಯದ ಡಯಾಲಿಸಿಸ್ ವ್ಯವಸ್ಥೆಯನ್ನ ಸರಿ ದಾರಿಗೆ ತರುವತ್ತ ಮಹತ್ವದ ಪಾತ್ರ ವಹಿಸಿದ್ದಾರೆ.
ಜನಸಾಮಾನ್ಯರಿಗೆ ಸೋಂಕು ರಹಿತ ಡಯಾಲಿಸಿಸ್ ಸೇವೆ ಕಲ್ಪಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆದ್ಯತೆ ನೀಡಿದ್ದರು. ಡಯಾಲಿಸಿಸ್ ಕೇಂದ್ರಗಳಲ್ಲಿ ಅಲ್ಲಲ್ಲಿ ಅಸ್ವಸ್ಥಗೊಂಡಿದ್ದ ಬಹು ಬಳಕೆಯ ಡಯಾಲೈಸರ್ ಯಂತ್ರಗಳಿಂದ ಡಯಾಲಿಸಿಸ್ ಪಡೆಯುತ್ತಿದ್ದವರಿಗೆ ಸೋಂಕು ತಗುಲುತ್ತಿರುವುದನ್ನ ಗಮನಿಸಿದ್ದ ಸಚಿವ ದಿನೇಶ್ ಗುಂಡೂರಾವ್, ರಾಜ್ಯದ ಇಡೀ ಡಯಾಲಿಸಿಸ್ ವ್ಯವಸ್ಥೆಯನ್ನ ಸದೃಢಗೊಳಿಸುವ ನಿಟ್ಟಿನಲ್ಲಿ ಏಕ ಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲು ನಿರ್ಧರಿಸಿದರು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ 800 ಹೊಸ ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳನ್ನ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದರು.
ಇದೀಗ ಹೊಸ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಬಹುತೇಕ ಅಂತಿಮ ಘಟ್ಟಕ್ಕೆ ತಲುಪಿದ್ದು, ನಾಳೆಯಿಂದ ಏಕ ಬಳಕೆಯ ಡಯಾಲಿಸಿಸ್ ಆರೋಗ್ಯ ಸೇವೆ ಆರಂಭವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.27ರ ಸಂಜೆ 5 ಗಂಟೆಗೆ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಸೇವೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಕೆ.ಸಿಜನರಲ್ ಆಸ್ಪತ್ರೆಯೊಂದರಲ್ಲೇ 20 ಹೊಸ ಏಕ ಬಳಕೆಯ ಡಯಾಲೈಸರ್ ಯಂತ್ರಗಳನ್ನ ಅಳವಡಿಸಲಾಗಿದ್ದು, ಪ್ರತಿ ನಿತ್ಯ 72 ರೋಗಿಗಳಿಗೆ ಡಯಾಲಿಸಿಸ್ ಸೇವೆ ಒದಗಿಸುವ ಸಾಮರ್ಥ್ಯ ಕಲ್ಪಿಸಲಾಗಿದೆ.
ರಾಜ್ಯದಲ್ಲಿದ್ದ 171 ಡಯಾಲಿಸಿಸ್ ಕೇಂದ್ರಗಳನ್ನ 219 ಕ್ಕೆ ಹೆಚ್ಚಿಸಲಾಗಿದ್ದು, ಹೊಸದಾಗಿ 48 ತಾಲೂಕುಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನ ಆರಂಭಿಸಲಾಗಿದೆ. 219 ಕೇಂದ್ರಗಳಲ್ಲಿ ಒಟ್ಟು 800 ಏಕಬಳಕೆಯ ಡಯಲೈಸರ್ ಯಂತ್ರಗಳನ್ನ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ವಿಭಾಗದ 57 ಡಯಾಲಿಸಿಸ್ ಕೇಂದ್ರಗಳಲ್ಲಿ 250 ಯಂತ್ರಗಳು, ಮೈಸೂರು ವಿಭಾಗದ 55 ಕೇಂದ್ರಗಳಲ್ಲಿ 222 ಯಂತ್ರಗಳು, ಬೆಳಗಾವಿ ವಿಭಾಗದ 62 ಕೇಂದ್ರಗಳಲ್ಲಿ 201 ಯಂತ್ರಗಳು, ಕಲಬುರಗಿ ವಿಭಾಗದ 45 ಕೇಂದ್ರಗಳಲ್ಲಿ 127 ಯಂತ್ರಗಳು ಸೇರಿದಂತೆ ಒಟ್ಟು 800 ಏಕಬಳಕೆಯ ಡಯಾಲೈಸರ್ ಗಳ ಅಳವಡಿಕೆ ಕಾರ್ಯ ಅಂತಿಮ ಘಟ್ಟಕ್ಕೆ ತಲುಪಿದೆ. ಜ.27 ರಿಂದ 475 ಏಕಬಳಕೆಯ ಡಯಾಲೈಸರ್ ಕಾರ್ಯ ಆರಂಭಿಸಲಿದ್ದು, ರೋಗಿಗಳಿಗೆ ಸೋಂಕು ರಹಿತ ಡಯಾಲಿಸಿಸ್ ಸೇವೆ ಲಭ್ಯವಾಗಲಿದೆ. ಉಳಿದ ಕೇಂದ್ರಗಳಲ್ಲೂ ಒಂದು ತಿಂಗಳೊಳಗೆ ಏಕ ಬಳಕೆಯ ಡಯಾಲಿಸಿಸ್ ಯಂತ್ರಗಳ ಸೇವೆ ಆರಂಭವಾಗಲಿದೆ.
ಪ್ರತಿ ಡಯಾಲಿಸಿಸ್ ಸೈಕಲ್ ಗೆ 1573 ರೂ. ವೆಚ್ಚವಾಗಲಿದ್ದು, ಸರ್ಕಾರವೇ ವೆಚ್ಚವನ್ನ ಭರಿಸಿ ರೋಗಿಗಳಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸಲಿದೆ. 800 ಡಯಾಲಿಸಿಸ್ ಯಂತ್ರಗಳಿಂದ ವಾರ್ಷಿಕ 7.20 ಲಕ್ಷ ಡಯಾಲಿಸಿಸ್ ಸೇವೆಗಳನ್ನ ಒದಗಿಸಲು ಸಾಮರ್ಥ್ಯ ಕಲ್ಪಿಸಲಾಗಿದ್ದು, ಸೋಂಕು ರಹಿತ ಡಯಾಲಿಸಿಸ್ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
Good news for the poor people suffering from kidney failure, who were looking forward to better dialysis services for free. The countdown to the start of infection-free dialysis services has begun, and single-use dialyzer care will now be available to those undergoing dialysis. Health Minister Dinesh Gundurao, who faced a lot of challenges for the last 6 months in bringing the dialysis system to a healthy stage due to some complaints, has finally played an important role in bringing the state's dialysis system on the right track.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm