Bagalkot Accident students: ಬಾಗಲಕೋಟೆ ; ಶಾಲಾ ವಾಹನ - ಟ್ರ್ಯಾಕ್ಟರ್ ನಡುವೆ ಡಿಕ್ಕಿ, ನಾಲ್ವರು ಶಾಲಾ ಮಕ್ಕಳ ಬಲಿ, ಶಾಲೆಯ ವಾರ್ಷಿಕ ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುಗುವಾಗ ದುರಂತ, ಸಿಎಂ ಸಂತಾಪ 

29-01-24 06:03 pm       HK News Desk   ಕರ್ನಾಟಕ

ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಹಳಿ ನಡೆದಿದೆ.

ಬಾಗಲಕೋಟೆ, ಜ 29: ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಆಲಗೂರ ಹಳಿ ನಡೆದಿದೆ.

ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ‌. ಎಂಟಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ‌ವಾಗಿದೆ. ಶ್ವೇತಾ ಪಾಟೀಲ (16) , ಸಾಗರ ಕಡಕೋಳ (17), ಗೋವಿಂದ ಜಂಬಗಿ (13), ಬಸವರಾಜ್ ಕೊಟಗಿ (17) ಮೃತಪಟ್ಟ ಮಕ್ಕಳು ಎಂದು ಗುರುತಿಸಲಾಗಿದೆ.

Karnataka: Four students killed after school bus collides with tractor in  Jamkhandi taluk | Karnataka News - News9live

ಬಸ್ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಅಧಿಕಾರಿಗಳು, ಜನಪ್ರತಿನಿಧಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಜಮಖಂಡಿ ತಾಲೂಕು ಆಸ್ಪತ್ರೆಗೆ ತೆರಳಿದ ಶಾಸಕ ಜಗದೀಶ ಗುಡಗುಂಟಿ, ಜಿಲ್ಲಾಧಿಕಾರಿ ಕೆ‌.ಎಂ.ಜಾನಕಿ, ಜಿಪಂ ಸಿಇಒ ಶಶಿಧರ ಕುರೇರ, ಎಸ್ ಪಿ ಅಮರನಾಥ ವಿದ್ಯಾರ್ಥಿಗಳು, ಪಾಲಕರೊಂದಿಗೆ ಮಾತನಾಡಿದರು‌

ಅಲಗೂರಿನ ವರ್ಧಮಾನ ಶಾಲೆಯ ವಾರ್ಷಿಕ ಸ್ನೇಹ ಸಮ್ಮಳನ ಕಾರ್ಯಕ್ರಮ ಮುಗಿಸಿ ಕವಟಗಿ ಗ್ರಾಮಕ್ಕೆ ತೆರಳುವ ವೇಳೆ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ‌. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿಎಂ ಪರಿಹಾರ ಘೋಷಣೆ ;

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

Four students, including a girl, were killed and eight others injured in a collision between a school bus and a tractor in Bagalkot district of Karnataka on Monday. The incident took place in the early hours near Alagur village located close to Jamkhandi town in the district. The students were returning to their homes in the village after the school annual gathering.