Shivamogga news, corporation: ಶಿವಮೊಗ್ಗ ; ಮೂತ್ರ ಮಾಡುವಾಗ ತುಂಡಾದ ಸಿಮೆಂಟ್ ಸ್ಲ್ಯಾಬ್‌, 10 ಅಡಿ ಚರಂಡಿಗೆ ಬಿದ್ದ ವ್ಯಕ್ತಿ , ಕಳಪೆ ಕಾಮಗಾರಿಗೆ ಗುಜರಿ ವ್ಯಾಪಾರಿ ಬಲಿ 

29-01-24 08:07 pm       HK News Desk   ಕರ್ನಾಟಕ

ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

ಶಿವಮೊಗ್ಗ, ಜ 29: ಚರಂಡಿಗೆ ಮುಚ್ಚಿದ್ದ ಸ್ಲ್ಯಾಬ್ ಕುಸಿದು ಬಿದ್ದು ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

ಶಿವಮೊಗ್ಗ ನಗರದ ವಿನೋಬನಗರ ರೈಲ್ವೆ ಬ್ಯಾರಲಲ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆ ನಿವಾಸಿ ಮುತ್ತಪ್ಪ (45) ಮೃತ ದುರ್ದೈವಿ.

ಗುಜರಿ ವ್ಯಾಪಾರ ಮಾಡುತ್ತಿದ್ದ ಮುತ್ತಪ್ಪ, ಮೂತ್ರ ವಿಸರ್ಜನೆಗೆಂದು ಹೋದಾಗ ಏಕಾಏಕಿ ಚರಂಡಿಯ ಸ್ಲ್ಯಾಬ್ ಕುಸಿದು ಬಿದ್ದಿದೆ. ಹತ್ತು ಅಡಿ ಆಳದ ಚರಂಡಿಗೆ ಬಿದ್ದ ಮುತ್ತಪ್ಪ ಮೇಲೆ ಕಾಂಕ್ರೀಟ್ ಸ್ಲ್ಯಾಬ್ ಮೈಮೇಲೆ ಬಿದ್ದಿದೆ. ಕಲ್ಲುಗಳು ಬಿದ್ದ ರಭಸಕ್ಕೆ ಮುತ್ತಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಳಪೆ ಕಾಮಗಾರಿಯಿಂದಲೇ ಮತ್ತಪ್ಪ ಮೃತಪಟ್ಟಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಜತೆಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

Shivamogga Man dies after concrete slab breaks down while urinating. The deceased was owning a scrap shop.