Deputy CM DK Shivakumar: ಫೆ.17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ; ಡಿಸಿಎಂ ಡಿಕೆ ಶಿವಕುಮಾರ್

31-01-24 02:42 pm       Bangalore Correspondent   ಕರ್ನಾಟಕ

ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಜ.31: ಮುಂದಿನ ಫೆಬ್ರವರಿ 17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಮೊದಲು ಜ. 17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಆಯೋಜಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆ ಬಳಿಕ ಅದನ್ನು ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಈಗ ಫೆ.17ರಂದು ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಈ ಸಮಾವೇಶ ಮಂಗಳೂರಿನಲ್ಲಿ ನಡೆಯಲಿದೆ" ಎಂದು ತಿಳಿಸಿದ್ದಾರೆ. 

ರಾಜ್ಯದ ಮೂಲೆ ಮೂಲೆಯಿಂದ ಕಾರ್ಯಕರ್ತರು ಮಂಗಳೂರಿಗೆ ಬರಲಿದ್ದಾರೆ. ಬೃಹತ್ ಸಮಾವೇಶ ನಡೆಸಲು ಸಿದ್ಧತೆ ನಡೆಸಿದ್ದೇವೆ ಎಂದಿದ್ದಾರೆ. ‌

Karnataka Pradesh Congress Committee (KPCC) president and Deputy Chief Minister D.K. Shivakumar has announced that a state-level congress workers' convention will be held in Mangaluru on February 17.