ಬ್ರೇಕಿಂಗ್ ನ್ಯೂಸ್
23-11-20 03:03 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 23: ರಾಜ್ಯದಲ್ಲಿ ಚಳಿ ಶುರುವಾಗಿರುವುದರಿಂದ ಸದ್ಯಕ್ಕೆ ಶಾಲೆ ಆರಂಭಿಸದೇ ಇರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣಾಧಿಕಾರಿಗಳು ಮತ್ತು ಉನ್ನತ ಮಟ್ಟದ ತಜ್ಞರ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸದ್ಯಕ್ಕೆ ಶಾಲೆ ತೆರೆಯುವುದು ಬೇಡ ಎನ್ನುವ ಸಲಹೆ ಕೇಳಿಬಂದಿದೆ. ಡಿಸೆಂಬರ್ ನಲ್ಲಿ ಚಳಿ ಇರುವುದರಿಂದ ಈ ವೇಳೆಗೆ ಕೊರೊನಾ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಪೋಷಕರು ಮತ್ತು ಮಕ್ಕಳ ಆತಂಕದ ನಡುವೆ ಶಾಲೆ ಆರಂಭಿಸುವುದು ಬೇಡ ಎನ್ನುವ ಬಗ್ಗೆ ಸಭೆಯಲ್ಲಿ ಸಚಿವರು ನಿರ್ಣಯ ಕೈಗೊಂಡಿದ್ದಾರೆ.
ಡಿಸೆಂಬರ್ ಕೊನೆಯ ವಾರದಲ್ಲಿ ಮತ್ತೆ ಸಭೆ ನಡೆಸಿ, ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಭೆಯ ಬಳಿಕ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಶಿಕ್ಷಣ ಇಲಾಖೆಯ ತಾಂತ್ರಿಕ ಸಮಿತಿ ವರದಿ ನೀಡಿದ್ದು, ಒಂದರಿಂದ 8ನೇ ತರಗತಿ ವರೆಗೆ ಈ ವರ್ಷ ಶಾಲೆ ತೆರೆಯುವುದು ಬೇಡ. ಜೊತೆಗೆ, 9ರಿಂದ ಪಿಯುಸಿ ವರೆಗೆ ಶಾಲೆ ತೆರೆಯಬೇಕೆಂಬ ಇಂಗಿತ ಇದೆ. ಆದರೆ, ಸದ್ಯಕ್ಕೆ ಚಳಿ ಇರುವುದರಿಂದ ಇಂಥ ಪರಿಸ್ಥಿತಿಯಲ್ಲಿ ಶಾಲೆ ಆರಂಭಿಸುವುದು ಬೇಡ ಎಂದು ನಿರ್ಧರಿಸಿದ್ದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಹೀಗಾಗಿ ಈ ಬಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಂಟನೇ ತರಗತಿ ಮಕ್ಕಳು ಶಾಲೆಗೆ ಹೋಗದೇ ಪಾಸ್ ಆಗುವುದು ಖಚಿತ ಆಗಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರಮುಖ ಘಟ್ಟ ಆಗಿರುವುದರಿಂದ ಕೊನೆಯ ವೇಳೆಗೆ ಶಾಲೆ ತೆರೆದು ಮಕ್ಕಳಿಗೆ ಪಾಠ ಮಾಡಿಸಲು ಮತ್ತು ವಿಳಂಬವಾದರೂ ಪರೀಕ್ಷೆ ಬರೆಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ನಿರ್ಣಯ ಕೈಗೊಂಡಿದ್ದಾರೆ.
ಚಂದನ ವಾಹಿನಿಯಲ್ಲಿ 1ರಿಂದ 7ನೇ ತರಗತಿ ವರೆಗಿನ ಮಕ್ಕಳಿಗೆ ದಿನವೂ ಪಾಠ ಮಾಡಲಾಗುತ್ತಿದೆ. ಮಕ್ಕಳು ಅದನ್ನು ನೋಡಿ ಕಲಿಯಬೇಕೆಂದು ಸಚಿವರು ಸಲಹೆ ಮಾಡಿದ್ದಾರೆ.
The Karnataka government Monday decided not to reopen schools and pre-university colleges on December 1. According to Chief Minister B S Yediyurappa, the government “shall review the Covid-19 situation during the third week of December” to decide when to resume offline classes.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm