ಬ್ರೇಕಿಂಗ್ ನ್ಯೂಸ್
08-02-24 10:22 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 08: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸೆಂಟ್ ಕಮಿಷನ್ ಆರೋಪ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆ ಸಮಯದಲ್ಲಿ ಕಾಂಗ್ರೆಸ್ ನಾಯಕರು ದೊಡ್ಡ ಹೋರಾಟವನ್ನೇ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧವೂ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪರ್ಸೆಂಟೇಜ್ ಬಾಂಬ್ ಸಿಡಿಸಿದ್ದಾರೆ.
ಗುರುವಾರ ಚಾಮರಾಜಪೇಟೆಯಲ್ಲಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದಲ್ಲಿ ಮಾತನಾಡಿದ ಅವರು, ''ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿದರು. ಬಿಜೆಪಿ ಬಳಿಕ, ಕಾಂಗ್ರೆಸ್ ಸರ್ಕಾರದಲ್ಲೂ 40 ಪರ್ಸೆಂಟ್ ಕಮಿಷನ್ ಮುಂದುವರೆದಿದೆ. ಮೊದಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಸಕರು ನೇರವಾಗಿ ಹಣ ಕೇಳುತ್ತಿದ್ದರು. ಈಗ ಅಧಿಕಾರಿಗಳೇ ನೇರವಾಗಿ ಹಣ ಕೇಳುತ್ತಿದ್ದಾರೆ. ಪ್ರತಿ ಟೆಂಡರ್ನಲ್ಲೂ ಹಣ ಕೊಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸಂಬಂಧ ಸದ್ಯದಲ್ಲೇ ಅಧಿಕಾರಿಗಳು ಎಂಜಿನಿಯರ್ಗಳ ದಾಖಲೆ ಬಿಡುಗಡೆ ಮಾಡುವುದಾಗಿ'' ತಿಳಿಸಿದರು.
'ರಾಜ್ಯದ ಎಲ್ಲ ಇಲಾಖೆಯಲ್ಲೂ ಅಧಿಕಾರಿಗಳಿಂದಲೇ ಭ್ರಷ್ಟಾಚಾರದ ಬೇರೂರಿದೆ. ಹೆಜ್ಜೆ ಹೆಜ್ಜೆಗೂ ಮಿತಿಮೀರಿದ ಭ್ರಷ್ಟಾಚಾರಿ ಅಧಿಕಾರಿಗಳಿದ್ದಾರೆ. ಬಿಬಿಎಂಪಿ, ನೀರಾವರಿ ಸೇರಿದಂತೆ ಎಲ್ಲಾ ಇಲಾಖೆಯಲ್ಲಿಯೂ ಭ್ರಷ್ಟ ಅಧಿಕಾರಿಗಳಿದ್ದಾರೆ'' ಎಂದು ಕೆಂಪಣ್ಣ ದೂರಿದರು.
''ಪ್ಯಾಕೇಜ್ ಸಿಸ್ಟಂ ಬಂದ್ ಮಾಡಿ ಪ್ರತ್ಯೇಕ ಟೆಂಡರ್ ಕರೆಯಬೇಕು. ಕೋಲಾರದಲ್ಲಿ ಪ್ಯಾಕೇಜ್ ಟೆಂಡರ್ ಕರೆದಿದ್ದಾರೆ. ಬೇರೆ ಜಿಲ್ಲೆಗಳಲ್ಲೂ ಕರೆಯಲಾಗಿದೆ. ಇದರಲ್ಲಿ ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಶುರುವಾಗಿದೆ. ಅಧಿಕಾರಿಗಳು ಹಣ ಕಲೆಕ್ಟ್ ಮಾಡಿ ರಾಜಕಾರಣಿಗಳಿಗೆ ಕೊಡುತ್ತಿದ್ದಾರೆ. ಈ ಹಿಂದೆ ರಾಜಕಾರಣಿಗಳು ನೇರವಾಗಿ ಕಮಿಷನ್ ತೆಗೆದುಕೊಳ್ಳುತ್ತಿದ್ದರು. ಈಗ ಅಧಿಕಾರಿಗಳು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಹೀಗಾಗಿ, ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಅನಾವಶ್ಯಕ ಪ್ಯಾಕೇಜ್ ಟೆಂಡರ್ ಕೂಡಲೇ ಸರ್ಕಾರ ರದ್ದುಗೊಳಿಸಬೇಕು'' ಎಂದು ಒತ್ತಾಯಿಸಿದರು.
''ವಿವಿಧ ಇಲಾಖೆಗಳ ಟೆಂಡರ್ ನೀಡಿರುವ ಕಾಮಗಾರಿ ಪೂರ್ಣಗೊಳಿಸಿ ಎರಡು ವರ್ಷಗಳೇ ಕಳೆದಿವೆ. ಹೀಗಾದರೂ ಹಣ ಬಿಡುಗಡೆ ಮಾಡಲು ಅಧಿಕಾರಿಗಳು ಮುಂದಾಗುತ್ತಿಲ್ಲ. ಶೇ.40 ಕಮಿಷನ್ ಆಸೆಯಲ್ಲಿರುವ ಅಧಿಕಾರಿಗಳ ವಿರುದ್ಧ ಸಮಯ ನೋಡಿ ದೂರು ನೀಡುತ್ತೇನೆ'' ಎಂದು ಹೇಳಿದರು.
ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದ ಅಶ್ವತ್ಥನಾರಾಯಣ
ಕೆಂಪಣ್ಣ ಆರೋಪದ ಕುರಿತಂತೆ ಜಸ್ಟಿಸ್ ನಾಗಮೋಹನದಾಸ್ ಸಮಿತಿಯು ಸ್ವಯಂಪ್ರೇರಿತ ತನಿಖೆಯನ್ನು ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಆಗ್ರಹಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವ್ಯವಹಾರದ ಕುರಿತು ನ್ಯಾಯಮೂರ್ತಿ ನಾಗಮೋಹನ್‍ದಾಸ್ ಸಮಿತಿ ಮೂಲಕ ತನಿಖೆ ಮಾಡಿಸುವುದಾಗಿ ಕಾಂಗ್ರೆಸ್ ಸರ್ಕಾರ ಹೇಳಿತ್ತು. ನ್ಯಾ. ನಾಗಮೋಹನ್‍ದಾಸ್ ಅವರು ಕೆಂಪಣ್ಣ ಮಾಡಿದ ಆರೋಪಗಳ ಬಗ್ಗೆ ಸ್ವಯಂಪ್ರೇರಿತ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
Congress government is now involved in 40 percent comission after BJP slams Kempanna, President of Karnataka State Contractors Association
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm