ಬ್ರೇಕಿಂಗ್ ನ್ಯೂಸ್
11-02-24 02:20 pm HK NEWS ಕರ್ನಾಟಕ
ಗದಗ, ಫೆ 11: ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಎದುರೇ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಹಾಡುಗಳಿಗೆ ಹೆಜ್ಜೆ ಹಾಕಿ, ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಪೇಚಿಗೆ ಸಿಲುಕಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಭರಮಸಾಗರ ತಾಲೂಕು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ತನ್ನ ಭಾವಿ ಪತ್ನಿಯೊಂದಿಗೆ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿಕೊಂಡಿದ್ದರು. ಇದು ಸಾರ್ವಜನಿಕರ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಫೆ. 9ರಂದು ರಾಜ್ಯ ಸರ್ಕಾರ ಆ ವೈದ್ಯರನ್ನು ಸೇವೆಯಿಂದ ವಜಾಗೊಳಿಸಿ ಆದೇಶ ಹೊರಡಿಸುವ ಮೂಲಕ ಈ ವಿವಾದ ಅಂತ್ಯವಾಗಿದೆ. ಈ ಘಟನೆ ಮಾಸುವ ಮುನ್ನವೇ ಗದಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿಗಳು ನೃತ್ಯ ಮಾಡಿರುವುದು ಹಾಗೂ ಅವರ ಅಮಾನತಾಗಿರುವುದು ವೈದ್ಯರಲ್ಲಿ ಹೆಚ್ಚುತ್ತಿರುವ ಬೇಜವ್ದಾರಿತನಕ್ಕೆ ಮತ್ತೊಂದು ನಿದರ್ಶನ ಎಂಬಂತಾಗಿದೆ.

ಗದಗ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ರೀಲ್ಸ್ ವೈರಲ್ ಆಗುತ್ತಿದ್ದಂತೆ ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಅವರು 38 ವಿದ್ಯಾರ್ಥಿಗಳನ್ನು ಒಂದು ವಾರ ಅಮಾನತು ಮಾಡಿ ಆದೇಶಿಸಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿಗಳು ಪ್ರೇಮಲೋಕ ಚಿತ್ರದ ಹಲೋ ಮೈ ಲವ್ಲಿಲೇಡಿ ಹೂ ಆರ್ ಯು ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕ, ಶಿಶು ಆರೈಕೆ ಕೇಂದ್ರ, ಚೀಟಿ ಬರೆಯುವ ಸ್ಥಳದಲ್ಲಿಯೂ ಹೆಜ್ಜೆ ಹಾಕಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿಸಾಕಷ್ಟು ವೈರಲ್ ಆಗಿದ್ದು, ನಿಮ್ಮ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ಲವೇ ಎನ್ನುವ ಆಕ್ರೋಶ ಭರಿತ ಪ್ರತಿಕ್ರಿಯೆಗಳು ಸಹ ವ್ಯಕ್ತವಾಗಿದೆ.
The Instagram Reels tagline that reads, 'Reel it, feel it,' has gone wrong for the medical students from Gadag Institute of Medical Sciences (GIMS) in Karnataka, as 38 college students have been penalised for recording reels on the hospital premises.
25-09-26 03:11 pm
HK News Staffer
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
25-09-26 11:17 am
HK News Staffer
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am