ಬ್ರೇಕಿಂಗ್ ನ್ಯೂಸ್
24-11-20 01:16 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 24 : ಕೆಎಎಸ್ ಅಧಿಕಾರಿ ಡಾ. ಸುಧಾ ಕೇವಲ ಲಂಚ ಪಡೆದು ಅಕ್ರಮ ಆಸ್ತಿ ಗಳಿಸಿಲ್ಲ ! ಬದಲಿಗೆ ಬೆಂಗಳೂರಿನಲ್ಲಿರುವ ಸರ್ಕಾರಿ ಜಮೀನಿಗೆ ಖಾಸಗಿ ವ್ಯಕ್ತಿಗಳನ್ನು ಹುಟ್ಟುಹಾಕಿ ಸರ್ಕಾರದ ಕೋಟ್ಯಂತರ ರೂಪಾಯಿ ಪರಿಹಾರ ಕೊಟ್ಟು ಲೂಟಿ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಅಕ್ರಮದಲ್ಲಿ ಕೇವಲ ಸುಧಾ ಮಾತ್ರವಲ್ಲ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಉನ್ನತ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ರಿಯಲ್ ಎಸ್ಟೇಟ್ ಏಜೆಂಟರು ಭಾಗಿಯಾಗಿದ್ದಾರೆ.
ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರಿ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿದರೆ, ಈ ಭೂಮಿಗೆ ಬಿಡಿಎ ಸ್ವಾಧೀನ ಹೆಸರಿನಲ್ಲಿ ಕೋಟಿ ಕೋಟಿ ಪರಿಹಾರ ನೀಡುವ ನೆಪದಲ್ಲಿ ಕೆಎಎಸ್ ಅಧಿಕಾರಿ ನೂರಾರು ಕೋಟಿ ಲೂಟಿ ಮಾಡಿರುವುದು ಎಸಿಬಿ ತನಿಖೆಯಲ್ಲಿ ಬಯಲಾಗಿದೆ.
ಡಾ. ಸುಧಾ ಅವರ ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮೊದಲ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳಿಗೆ 200 ದಾಖಲೆಗಳು ಮತ್ತು 50 ಕೋಟಿ ರೂ. ಗೂ ಅಧಿಕ ಆಸ್ತಿ ಬಯಲಿಗೆ ಎಳೆದಿದ್ದರು. ಇದಾದ ಬಳಿಕ ಸುಧಾ ಬೇನಾಮಿ ಏಜೆಂಟ್, ರಿಯಲ್ ಎಸ್ಟೇಟ್ ಉದ್ಯಮಿ ರೇಣುಕಾ ಮನೆ ಮೇಲೆ ದಾಳಿ ನಡೆದಿತ್ತು. ದಾಳಿ ವೇಳೆ ಪತ್ತೆಯಾದ ಸುಧಾ ಅವರ ಚಿನ್ನದ ಸಂಪತ್ತು ಜನರನ್ನು ಬೆಚ್ಚಿ ಬೀಳಿಸಿತ್ತು.
ಸುಧಾ ಅವರ ಅಕ್ರಮ ಆಸ್ತಿಯ ಜಾಡು ಹಿಡಿದು ತನಿಖೆ ನಡೆಸಿದಾಗ ಸರ್ಕಾರಿ ಭೂಮಿಗೆ ಬಬಿಡಿಎ ಪರಿಹಾರ ಕೊಟ್ಟು ನೂರಾರು ಕೋಟಿ ಲೂಟಿ ಮಾಡಿರುವ ದೊಡ್ಡ ಹಗರಣ ಬೆಳಕಿಗೆ ಬಂದಿದೆ.
ಸುಧಾ ಕೇವಲ ಲಂಚ ಪಡೆದು ಅಕ್ರಮ ಆಸ್ತಿ ಗಳಿಸಿಲ್ಲ. ಸರ್ಕಾರಿ ಭೂಮಿಗೆ ಕಂದಾಯ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದೇ ಭೂಮಿಯನ್ನು ಬಿಡಿಎ ಸ್ವಾಧೀನ ಪಡಿಸಿಕೊಂಡು ಕೋಟಿ ಕೋಟಿ ಪರಿಹಾರ ನೀಡಿದೆ. ಇದರಲ್ಲಿ ಸಾಕಷ್ಟು ರಿಯಲ್ ಎಸ್ಟೇಟ್ ಏಜೆಂಟರು ಶಾಮೀಲಾಗಿದ್ದರು. ಕೂಲಿ ಮಾಡುತ್ತಿದ್ದವರು ಬೆಂಜ್ ಕಾರಲ್ಲಿ ಓಡಾಡುತ್ತಿದ್ದಾರೆ. ಸಾಕಷ್ಟು ಏಜೆಂಟರನ್ನು ಈ ಅಕ್ರಮದಲ್ಲಿ ಲಾಭ ಪಡೆದುಕೊಂಡಿದ್ದಾರೆ. ಸರ್ಕಾರಿ ಭೂಮಿಗೆ ಖಾಸಗಿ ವ್ಯಕ್ತಿಗಳ ಹೆಸರಿನಲ್ಲಿ ಖಾತೆ, ಪಹಣಿ ಮಾಡಿಸಿ ಆ ಜಮೀನನ್ನುಬಿಡಿಎ ಸ್ವಾಧೀನ ಮಾಡಿಕೊಂಡಿದೆ.
ಬೆಂಗಳೂರಿನಲ್ಲಿ ನೂರಾರು ಎಕರೆ ಸರ್ಕಾರಿ ಭೂಮಿಗೆ ಪರಿಹಾರ ನೀಡಿದೆ. ಇದರ ಸಿಂಹಪಾಲು ಹಣವನ್ನು ಸುಧಾಗೆ ಹೋಗಿದ್ದು, ರೇಣುಕಾ ಅವರ ಮನೆಗೆ ಸೇರಿಸುತ್ತಿದ್ದರು. ಇದರಲ್ಲಿ ಕೇವಲ ಸುಧಾ ಮಾತ್ರವಲ್ಲ, ಬಿಡಿಎ ಮೇಲಾಧಿಕಾರಿಗಳು ಕೂಡ ಶಾಮೀಲಾಗಿರುವುದು ಕಂಡು ಬಂದಿದೆ. ಮುಂದಿನ ದಿನದಗಳಲ್ಲಿ ಕಂದಾಯ ಮತ್ತು ಬಿಡಿಎ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸಿಬಿ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
The Anti-Corruption Bureau on Tuesday morning conducted fresh search operations at six locations in connection with a disproportionate asset case against a Karnataka Administrative Service officer in the state.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm