ಬ್ರೇಕಿಂಗ್ ನ್ಯೂಸ್
13-02-24 11:02 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಅಕ್ರಮ ಆಸ್ತಿ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶಾಕ್ ಎದುರಾಗಿದೆ. ಡಿಕೆ ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐರ್ ದಾಖಲಿಸಿದ್ದಾರೆ. ಸಿಬಿಐನಲ್ಲಿದ್ದ ಪ್ರಕರಣದ ಮರು ತನಿಖೆಗೆ ಲೋಕಾಯುಕ್ತ ಮುಂದಾಗಿದ್ದು, ಡಿಕೆ ಶಿವಕುಮಾರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಪೂರ್ವಾನುಮತಿಯನ್ನು ಸರ್ಕಾರ ಕಳೆದ ನವೆಂಬರ್ ತಿಂಗಳಲ್ಲಿ ವಾಪಸ್ ತೆಗೆದುಕೊಂಡಿತ್ತು. ಈ ಹಿನ್ನೆಲೆ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ರಾಜ್ಯ ಸರ್ಕಾರ ಡಿಸೆಂಬರ್ 22ರಂದೇ ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ, ಇಲ್ಲಿಯವರೆಗೂ ಎಫ್‌ಐಆರ್ ದಾಖಲಾಗಿದ್ದಿಲ್ಲ. ಈಗ ಒಂದೂವರೆ ತಿಂಗಳ ಬಳಿಕ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಆದರೆ, ಇದುವರೆಗೂ ಯಾವುದೇ ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ಲೋಕಾಯುಕ್ತಕ್ಕೆ ನೀಡಿಲ್ಲ. ಸಿಬಿಐ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದು, ತನಿಖೆ ಮುಗಿಯುವ ಹಂತದಲ್ಲಿದ್ದು ತನಿಖೆಗೆ ನೀಡಿರುವ ಅನುಮತಿ ವಾಪಸ್ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿತ್ತು. ಆದರೆ, ನವೆಂಬರ್ 23, 2023ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ನೀಡಿದ್ದ ಅನುಮತಿಯನ್ನು ವಾಪಸ್ ತೆಗೆದುಕೊಳ್ಳಲಾಗಿತ್ತು. ಈ ಹಿಂದಿನ ಸರ್ಕಾರದಲ್ಲಿ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಲಾಗಿದೆ. ಅದು ಕಾನೂನು ಪ್ರಕಾರ ಸರಿಯಲ್ಲ ಎಂದು ಹೇಳಿ ಅನುಮತಿ ನಿರಾಕರಿಸಿತ್ತು.
Deputy Chief Minister D.K. Shivakumar is in for a shock. The Lokayukta police have registered an FIR against DK Shivakumar. DK Shivakumar is facing another crisis as the Lokayukta has decided to re-investigate the case in the CBI.
25-09-26 04:49 pm
HK News Staffer
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
26-09-26 03:35 pm
HK News Staffer
ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣದಲ್ಲಿ ವಿಚಾರಣೆ ; ಪ...
26-09-26 11:04 am
ಮೈಸೂರು ದಸರಾಕ್ಕೆ ಕರಾವಳಿಯ ಕಂಬಳದ ಮೆರುಗು ; ಅ.18-1...
25-09-26 07:31 pm
ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಬಿಗ್...
25-09-26 07:05 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ಶಶಿಕುಮಾರ್ ನೇ...
24-09-26 10:46 pm
25-09-26 04:53 pm
HK News Staffer
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am
ಉಡುಪಿ ; ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿದ್ದ ಸಿಟಿ ಬಸ...
25-09-26 10:30 am
ಶ್ರೀನಿವಾಸ ಕಾಲೇಜಿನಲ್ಲಿ ರ್ಯಾಗಿಂಗ್ ; ಸೀನಿಯರ್ ಗುಂ...
25-09-26 08:57 am
ಪ್ರೀತಿ ನೆಪದಲ್ಲಿ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ದೌ...
24-09-26 05:10 pm