Rockline Venkatesh Mall seized: ಬೆಂಗಳೂರು ; 12 ಕೋಟಿ ಆಸ್ತಿ ತೆರಿಗೆ ಬಾಕಿ, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಒಡೆತನದ 'ರಾಕ್​ಲೈನ್ ಮಾಲ್​' ಗೆ ಬೀಗ ಜಡಿದ ಬಿಬಿಎಂಪಿ 

14-02-24 10:59 am       Bangalore Correspondent   ಕರ್ನಾಟಕ

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳ ವಿರುದ್ಧ ಪಾಲಿಕ ಕ್ರಮ ಕೈಗೊಳ್ಳುತ್ತಿದೆ.

ಬೆಂಗಳೂರು, ಫೆ 14: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೊಡ್ಡ ದೊಡ್ಡ ವಾಣಿಜ್ಯ ಕಟ್ಟಡಗಳ ವಿರುದ್ಧ ಪಾಲಿಕ ಕ್ರಮ ಕೈಗೊಳ್ಳುತ್ತಿದೆ.

ಟಿ.ದಾಸರಹಳ್ಳಿಯ ಪ್ರಶಾಂತ್ ನಗರದಲ್ಲಿರುವ ನಟ, ನಿರ್ಮಾಪಕ ರಾಕ್​ಲೈನ್​ ವೆಂಕಟೇಶ್ ಒಡೆತನದ  ರಾಕ್​​ಲೈನ್​​ ಮಾಲ್​ ಗೆ ಬಿಬಿಎಂಪಿ ಬಿಗ್ ಜದಾಡಿದೆ. 

2011 ರಿಂದ 2023ರವರೆಗೆ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಟಿ ನೋಟಿಸ್ ನೀಡಿತ್ತು. ನೋಟಿಸ್​ ನೀಡಿದರೂ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ದಾಸರಹಳ್ಳಿಯ ಬಿಬಿಎಂಪಿ ಕಂದಾಯ ಅಧಿಕಾರಿಗಳು ಮಾಲ್​​ಗೆ ಬೀಗಮುದ್ರೆ ಹಾಕಿದ್ದಾರೆ.

2023ರ ನವೆಂಬರ್ ಮತ್ತು 2024ರ ಫೆಬ್ರವರಿ ನಡುವೆ 46,318 ಆಸ್ತಿಗಳಿಗೆ ತೆರಿಗೆ ಬಾಕಿ ವಸೂಲಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ. ಬಿಬಿಎಂಪಿ ಕಂದಾಯ ಅಧಿಕಾರಿಗಳು ನಿವೇಶನಗಳನ್ನು ಸೀಲ್ ಮಾಡಿದರೂ ತೆರಿಗೆ ಪಾವತಿಸದ ಪ್ರಕರಣಕ್ಕೆ ಸಂಬಂಧಿಸಿದ 7,203 ಆಸ್ತಿಗಳನ್ನು ಜಪ್ತಿ ಮಾಡಿದ್ದಾರೆ.

ಕಾರುಗಳು ಮತ್ತು ಶಾಲಾ ಬಸ್‌ಗಳಂತಹ ಚರ ಆಸ್ತಿಗಳನ್ನು ಮೊದಲ ಬಾರಿಗೆ ಬಿಬಿಎಂಪಿ ಜಪ್ತಿ ಮಾಡಿತ್ತು. ಬಿಬಿಎಂಪಿಯ ಯಲಹಂಕ ವಿಭಾಗದಲ್ಲಿ ಇಂದು ನಾಲ್ಕು ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ. 

2023ರ ಡಿಸೆಂಬರ್​ನಲ್ಲಿ ಬಿಬಿಎಂಪಿ 51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್​ಗೆ ಬೀಗಮುದ್ರೆ ಹಾಕಿತ್ತು. 2019-20ರ ವರೆಗಿನ ಆಸ್ತಿ ತೆರಿಗೆ ಬಾಕಿಯಿದ್ದ ಹಿನ್ನೆಲೆಯಲ್ಲಿ ಬೀಗ ಹಾಕಲಾಗಿತ್ತು. ಮಂತ್ರಿ ಮಾಲ್​​ ಮಾಲಿಕ 2020ರ ಆಗಸ್ಟ್​​​ನಲ್ಲಿ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿದ್ದರು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರು ಕೂಡ ಮಾಲ್​ನ ಆಡಳಿತ ಮಂಡಳಿ ತೆರಿಗೆ ಪಾವತಿಸಿರಲಿಲ್ಲ, ಹೀಗಾಗಿ ಕಳೆದ ವರ್ಷ ಬೀಗ ಹಾಕಿತ್ತು.

Bangalore Actor producer Rockline venkatesh Mall closed by BBMC after non payment of tax. It is a popular mall owned by leading Kannada producer Rockline Venkatesh. The mall was inaugurated in 2011 by the then-state Home Minister R Ashoka.