ಬ್ರೇಕಿಂಗ್ ನ್ಯೂಸ್
14-02-24 12:24 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕಾರ್ಕಳದಲ್ಲಿ ನಿರ್ಮಾಣಗೊಂಡ ಪರಶುರಾಮ ಥೀಮ್ ಪಾರ್ಕ್ ಯೋಜನೆಯಲ್ಲಿ ಅವ್ಯವಹಾರ ಆಗಿದೆಯೆಂಬ ವಿಚಾರ ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಮತ್ತು ವಿಪಕ್ಷ ಸದಸ್ಯರ ವಾಗ್ಯುದ್ದಕ್ಕೆ ಸಾಕ್ಷಿಯಾಯಿತು.
ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ವಿಷಯ ಪ್ರಸ್ತಾಪಿಸಿ, ಪರಶುರಾಮನ ಪ್ರತಿಮೆಯ ಅರ್ಧ ಭಾಗ ಕಂಚು, ಇನ್ನರ್ಧ ನಕಲಿಯಾಗಿದ್ದು ಫೈಬರ್ ನಲ್ಲಿ ನಿರ್ಮಿಸಲಾಗಿದೆ ಎಂಬ ಆರೋಪಗಳಿವೆ. ದೋಷಪೂರಿತವಾಗಿ ವಿಗ್ರಹ ನಿರ್ಮಿಸಿದ್ದು ಯಾರು, ಇದಕ್ಕೆ ಯಾರು ಕಾರಣ ಎಂಬ ಬಗ್ಗೆ ಸಮಗ್ರ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕುತ್ತರಿಸಿದ ಸಚಿವ ಶಿವರಾಜ ತಂಗಡಗಿ, ಹಿಂದಿನ ಬಿಜೆಪಿ ಸರಕಾರದಲ್ಲಿ ಆಗಿರುವ ಎಡವಟ್ಟುಗಳನ್ನು ನಮ್ಮ ಸರಕಾರ ಬಯಲು ಮಾಡಿದೆ. ಅವ್ಯವಹಾರದ ಬಗ್ಗೆ ಕಾರ್ಕಳದವರೇ ಆರೋಪ ಮಾಡಿದ್ದು, ತನಿಖೆಗೆ ದೂರು ನೀಡಿದ್ದಾರೆ. ಪರಶುರಾಮನ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡವರಿಂದಲೇ ಅಕ್ರಮ ಆಗಿದೆ, ದೇವರ ಹೆಸರೇಳಿ ರಾಜಕೀಯ ಮಾಡೋರಿಂದಲೇ ಅಕ್ರಮ ಆಗಿದೆ ಎಂದು ಬಿಜೆಪಿ ನಾಯಕರ ಹೆಸರೆತ್ತದೆ ಟಾಂಗ್ ಇಟ್ಟಿದ್ದಾರೆ.
ಈ ವೇಳೆ ಬಿಜೆಪಿ ಸದಸ್ಯರು ಸಿಟ್ಟುಗೊಂಡು ಅವ್ಯವಹಾರ ಆಗಿದ್ದರೆ ತನಿಖೆ ಮಾಡಿಸಿ, ಅದು ಬಿಟ್ಟು ದೇವರ ಹೆಸರೇಳಿ ಅವ್ಯವಹಾರ ಎಂದು ಹೇಳಿ ಗೂಬೆ ಕೂರಿಸುವುದು ಬೇಡ ಎಂದು ಜೋರು ದನಿಯಲ್ಲಿ ಹೇಳಿದರು. ಅದಕ್ಕೆ ಶಿವರಾಜ ತಂಗಡಗಿ, ಇದು ನಮ್ಮ ಸರಕಾರದಲ್ಲಿ ನಡೆದಿರುವುದಲ್ಲ. ಹಿಂದಿನ ಸರಕಾರ ಇರುವಾಗ ಆಗಿರುವ ಕಾಮಗಾರಿ. ಅವ್ಯವಹಾರದ ಆರೋಪ ಬಂದಿದ್ದಕ್ಕೆ ಹೇಳಿದ್ದೇನೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿಯೂ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ ಎಂದರು.
ಈ ವಿಚಾರದಲ್ಲಿ ಬಿಜೆಪಿ- ಕಾಂಗ್ರೆಸ್ ಸದಸ್ಯರ ನಡುವೆ ಆರೋಪ, ಪ್ರತ್ಯಾರೋಪ ಹೆಚ್ಚುತ್ತಿದ್ದಂತೆ ಶಿವರಾಜ ತಂಗಡಗಿ, ಪರಶುರಾಮ ಪ್ರತಿಮೆ ನಿರ್ಮಾಣ ಕಾಮಗಾರಿಯಲ್ಲಾದ ಅಕ್ರಮದ ಬಗ್ಗೆ ಸಿಐಡಿ ತನಿಖೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಸಿಐಡಿ ತನಿಖೆಯ ವರದಿ ಆಧರಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಾಗುವುದು ಎಂದು ಭರವಸೆ ನೀಡಿದರು.
Prashurama theme park Karkala controversy picked up in assembly, cheating in the name of god Shivaraj Tangadagi slams sunil kumar.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm