CM Siddaramaiah, Budget of karnataka: ಮಂಗಳೂರಿನಲ್ಲಿ ಹಜ್ ಭವನಕ್ಕೆ 10 ಕೋಟಿ, ವಕ್ಫ್ ಆಸ್ತಿ ರಕ್ಷಣೆಗೆ 100 ಕೋಟಿ, ಕ್ರೈಸ್ತರ ಅಭಿವೃದ್ಧಿ ಮಂಡಳಿಗೆ 200 ಕೋಟಿ ; ಸಿದ್ದು ಬಜೆಟಲ್ಲಿ ಅಲ್ಪಸಂಖ್ಯಾತರಿಗೂ ಭರಪೂರ 

16-02-24 01:37 pm       Bangalore Correspondent   ಕರ್ನಾಟಕ

ವಕ್ಫ್ ಆಸ್ತಿ ರಕ್ಷಣೆಗೆ ನೂರು ಕೋಟಿ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣ, ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಹೇಳಿದ್ದಾರೆ.

ಬೆಂಗಳೂರು, ಫೆ.16: ವಕ್ಫ್ ಆಸ್ತಿ ರಕ್ಷಣೆಗೆ ನೂರು ಕೋಟಿ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣ, ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಹೇಳಿದ್ದಾರೆ.

100 ಹೊಸ ಮೌಲಾನಾ ಆಜಾದ್‌ ಶಾಲೆಗಳನ್ನು ತೆರೆಯಲು ನಿರ್ಧಾರ

ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ

ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್ಸಿ. ನರ್ಸಿಂಗ್‌/ ಜಿ.ಎನ್‌.ಎಂ ನರ್ಸಿಂಗ್‌ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆ ಪುನಾರಂಭ

ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಘಟಕಗಳ ಉನ್ನತೀಕರಣಕ್ಕೆ KSFC ಮೂಲಕ ಪಡೆಯುವ 10 ಕೋಟಿ ರೂ. ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ

ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿ ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಸಾಲ ಸೌಲಭ್ಯ

  • ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. 
  • ರಾಜ್ಯದಲ್ಲಿನ ವಕ್ಫ್‌ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ 
  • ಭಾರತೀಯ ಪುರಾತತ್ವ ಇಲಾಖೆ ವ್ಯಾಪ್ತಿಯ ವಕ್ಫ್‌ ಆಸ್ತಿಗಳ ಅಭಿವೃದ್ಧಿ
  • ವಕ್ಫ್‌ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ 
  • ರಾಜ್ಯದಲ್ಲಿ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ
  • ಮಂಗಳೂರಿನ ಹಜ್‌ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು
  • ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ
  • ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಅನುದಾನ
  • ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಅನುದಾನ 
  • ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ಖ್‌ ಲಿಗಾರ್‌ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆ
  • ಬೀದರ್‌ನಲ್ಲಿರುವ ಶ್ರೀ ನಾನಕ್‌ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ
  • ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
  • Join our WhatsApp group
  • Follow us on Facebook 
  • Follow us on Twitter

Karnataka Chief Minister Siddaramaiah, who also holds the Finance portfolio, presented the state budget on Friday (February 16). Amid opposition attacks on Congress over appeasement, the Siddaramaiah government allocated Rs 100 crore for waqf properties, Rs 200 crore for Christian community and Rs 20 crore for pilgrimage sites.