Budget of karnataka, CM Siddaramaiah: ಆರೋಗ್ಯ ಕ್ಷೇತ್ರಕ್ಕೂ ಸಿದ್ದು ಭಾರೀ ಕೊಡುಗೆ ; ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಿಮೋಥೆರಪಿ ಕೇಂದ್ರ, ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಪತ್ತೆಗೆ 20 ಜಿಲ್ಲಾಸ್ಪತ್ರೆಗಳಲ್ಲಿ ವ್ಯವಸ್ಥೆ, ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ ಸ್ಥಾಪನೆ 

16-02-24 01:53 pm       Bangalore Correspondent   ಕರ್ನಾಟಕ

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಯೋಜನೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಕ್ಯಾನ್ಸರ್‌ ರೋಗಿಗಳಿಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಿಮೋಥೆರಪಿ ಕೇಂದ್ರ, ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾಸ್ಪತ್ರೆಗಳಲ್ಲಿ ಡಿಜಿಟಲ್‌ ಮ್ಯಾಮೊಗ್ರಫಿ ಯಂತ್ರ ಅಳವಡಿಕೆ, ತೀವ್ರ ಹೃದ್ರೋಗ ಹಾಗೂ ಪಾರ್ಶ್ವವಾಯು ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ ಸಂಗ್ರಹಣೆ ಹೀಗೆ ಹಲವು ಯೋಜನೆಗಳನ್ನು ಘೋಷಿಸಿದೆ. 

ಬೆಂಗಳೂರು, ಫೆ.16: ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಯೋಜನೆಗೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಕ್ಯಾನ್ಸರ್‌ ರೋಗಿಗಳಿಗೆ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಿಮೋಥೆರಪಿ ಕೇಂದ್ರ, ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾಸ್ಪತ್ರೆಗಳಲ್ಲಿ ಡಿಜಿಟಲ್‌ ಮ್ಯಾಮೊಗ್ರಫಿ ಯಂತ್ರ ಅಳವಡಿಕೆ, ತೀವ್ರ ಹೃದ್ರೋಗ ಹಾಗೂ ಪಾರ್ಶ್ವವಾಯು ಚಿಕಿತ್ಸೆಗಾಗಿ ಥ್ರಂಬೋಲಿಟಿಕ್ ಔಷಧಗಳ ಸಂಗ್ರಹಣೆ ಹೀಗೆ ಹಲವು ಯೋಜನೆಗಳನ್ನು ಘೋಷಿಸಿದೆ. 

ಬಹುತೇಕ ಜಿಲ್ಲೆಗಳಲ್ಲಿ ಕಿಮೊಥೆರಪಿ ಚಿಕಿತ್ಸಾ ಕೇಂದ್ರಗಳು ಲಭ್ಯವಿರದ ಕಾರಣ 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲೂ ಒಂದೊಂದು ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಿ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟಲ್‌ ಮ್ಯಾಮೊಗ್ರಫಿ ಯಂತ್ರಗಳ ಅಳವಡಿಕೆ, ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಮತ್ತು ಉಡುಪಿ, ಕೋಲಾರ ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ ಕಾಲ್ಪಸ್ಕೊಪಿ ಉಪಕರಣಗಳ ಖರೀದಿಗೆ 21 ಕೋಟಿ ರೂ. ಅನುದಾನ ಒದಗಿಸುವುದು. 

ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುತ್ತದೆ. 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, ಮಂಡ್ಯ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ಸಾಲಿನಲ್ಲಿ ಉಳಿದ 9 ಜಿಲ್ಲೆಗಳಲ್ಲಿಯೂ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುವುದು.‌

ರಾಜ್ಯದ ಜಿಲ್ಲಾ ಆಸ್ಪತ್ರೆಗಳನ್ನು ಅಗ್ನಿ ಅವಘಡಗಳಿಂದ ರಕ್ಷಿಸಲು 6 ಕೋಟಿ ರೂ. ವೆಚ್ಚದಲ್ಲಿ 13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು ಅಳವಡಿಸಲಾಗುವುದು.

2025 ರೊಳಗೆ ಕ್ಷಯರೋಗ ನಿರ್ಮೂಲನೆಗೊಳಿಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕ್ಷಯರೋಗ ತಪಾಸಣೆಗಾಗಿ 87 True-Nat Machines ಗಳನ್ನು ಖರೀದಿಸಲು 6 ಕೋಟಿ ರೂ. ಗಳ ಅನುದಾನ ಒದಗಿಸಲಾಗುವುದು.

ಕಲ್ಯಾಣ ಕರ್ನಾಟಕದಲ್ಲಿ ಹಿಮೋಫಿಲಿಯಾ ಮತ್ತು ಥಲಸ್ಸೇಮಿಯಾ ರೋಗಿಗಳಿಗೆ ಸೂಕ್ತ ಚಿಕಿತ್ಸಾ ಸೌಲಭ್ಯಗಳ ಕೊರತೆಯಿರುವುದರಿಂದ ಕಲಬುರಗಿ ಮತ್ತು ಕೊಪ್ಪಳದ ಐಸಿಡಿಟಿ ಕೇಂದ್ರಗಳ ಬಲವರ್ಧನೆಗೆ 7 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಮಂಡಿಸಿದ್ದಾರೆ.

ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ First Referral Unit (FRU) ಗಳಲ್ಲಿ ರಕ್ತ ಸಂಗ್ರಹ ಘಟಕಗಳಿಲ್ಲದ ಕಾರಣ, ರೋಗಿಗಳಿಗೆ ತುರ್ತು ಸಮಯದಲ್ಲಿ ರಕ್ತ ಪೂರೈಸಲು ತೊಂದರೆ ಉಂಟಾಗುತ್ತಿದೆ. ಇದನ್ನು ನೀಗಿಸಲು 50 ಹೊಸ ರಕ್ತ ಶೇಖರಣಾ ಘಟಕಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಸ್ಥಾಪಿಸಲಾಗುವುದು. 

ಬೆಂಗಳೂರಿನಲ್ಲಿ ಬಡಜನತೆಗೆ ಉಚಿತ ಪ್ರಯೋಗಾಲಯ ಸೇವೆಯನ್ನು ಒದಗಿಸಲು Hub and Spoke ಮಾದರಿಯಲ್ಲಿ 430 ಪ್ರಯೋಗಾಲಯಗಳ ಸ್ಥಾಪನೆಗೆ ಮುಂದಿನ ಎರಡು ವರ್ಷಗಳಲ್ಲಿ 20 ಕೋಟಿ ರೂ. ಗಳ ಅನುದಾನವನ್ನು ನೀಡಲಾಗುವುದು.

ಮಧುಮೇಹ ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ಆಯುಷ್ ಚಿಕಿತ್ಸೆ ನೀಡಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಆಯುರ್ವೇದ ಮಧುಮೇಹ ಘಟಕವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

Chief Minister Siddaramaiah has announced several schemes related to health and family welfare schemes. The government has announced a number of schemes such as a chemotherapy centre for cancer patients in every district headquarters, installation of digital mammography machines in 20 district hospitals to detect and treat the increasing incidence of breast cancer and cervical cancer in women at an early stage, procurement of thrombolytic drugs for the treatment of acute heart disease and stroke.