ಬ್ರೇಕಿಂಗ್ ನ್ಯೂಸ್
16-02-24 03:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಪ್ರಸಕ್ತ ಸಾಲಿನ ಆಯವ್ಯಯ ರಾಜ್ಯ ಸರ್ಕಾರದ ಅಭಿವೃದ್ಧಿ ವಿರೋಧಿ ಬಜೆಟ್ ಎಂದು ಘೋಷಣೆ ಕೂಗಿದ ಬಿಜೆಪಿ ಸದಸ್ಯರು ವಿಧಾನಸೌಧ ದ್ವಾರದ ಎದುರು ನಡೆಸಿದ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಭಿತ್ತಿಪತ್ರ ಪ್ರದರ್ಶಿಸಿ ಆಕ್ರೋಶ ಹೊರಹಾಕಿದರು.
ವಿಧಾನಸಭಾ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ ಬಜೆಟ್ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಸದಸ್ಯರು ವಿಧಾನಸಭೆ ಪ್ರವೇಶದ್ವಾರದ ಬಳಿ ಆಗಮಿಸಿ ಪ್ರತಿಭಟನೆ ನಡೆಸಿದರು. ಬಜೆಟ್ ಅಭಿವೃದ್ಧಿ ವಿರೋಧಿಯಾಗಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ, ಮಾತನಾಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್, "ಸಿದ್ದರಾಮಯ್ಯ ಅವರು ಇವತ್ತು ಬಜೆಟ್ ಮಂಡಿಸಿದ್ದಾರೆ. ಈ ಬಜೆಟ್ ಅಲ್ಲಿ ರಾಜಕೀಯ ಸ್ಕೋಪ್ ಇರೋದಿಲ್ಲ, ಜನರ ದೃಷ್ಟಿಯಿಂದ ಬಜೆಟ್ ಮಾಡುತ್ತಾರೆ ಅಂದುಕೊಂಡಿದ್ದೆವು. ಪದೇ ಪದೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಾರೆ. ಕೇಂದ್ರ ಸರ್ಕಾರವನ್ನು ತೆಗಳುತ್ತಾರೆ. 15ನೇ ಹಣಕಾಸು ಆಯೋಗದಲ್ಲಿ ಸಿಎಂ ಆಗಿದ್ದವರು ಯಾರು? ನೀವೇ ಹೋಗಿ ಒಪ್ಪಿಗೆ ಕೊಟ್ಟಿದ್ದೇಕೆ? ಕುಣಿಯಲು ಬಾರದವ ನೆಲ ಡೊಂಕು ಎಂದಂತೆ ಕೇಂದ್ರವನ್ನು ಟೀಕೆ ಮಾಡುತ್ತಿದ್ದೀರಿ. ಆಡಳಿತ ನಡೆಸಲು ಆಗಿಲ್ಲ ಎಂದರೆ ಅಧಿಕಾರ ಬಿಟ್ಟು ಕೆಳಗಿಳಿಯಿರಿ" ಎಂದು ಸಿಟ್ಟು ಹೊರ ಹಾಕಿದರು.
"ಕೇಂದ್ರ ಸರ್ಕಾರದ ಮೇಲೆ ಸವಾಲು ಹಾಕ್ತೀರಾ? ಇದನ್ನು ಖಂಡಿಸಿ ವಾಕ್ ಔಟ್ ಮಾಡಿದ್ದೇವೆ. ಹಿಂದೆ ಕಾಂಗ್ರೆಸ್ನವರು ಕಿವಿಯಲ್ಲಿ ಹೂ ಇಟ್ಟುಕೊಂಡು ಬಂದಿದ್ದರು. ಈಗ ಹೇಳಿ ಏನು ಮಾಡೋದು ಅಂತಾ? ಪ್ರತಿಭಟನೆ ಮಾಡೋದು ನಮ್ಮ ಹಕ್ಕು. ಸರ್ಕಾರದ ತಪ್ಪುಗಳನ್ನು ಹೇಳೋದಕ್ಕೆ ಜನ ನಮ್ಮನ್ನು ಕುರಿಸಿರೋದು" ಎಂದರು.
ಸಿಎಂ ಸಿದ್ದರಾಮಯ್ಯ ಅವರಿಗೆ ನೊಬೆಲ್ ಪ್ರಶಸ್ತಿ ಕೊಡಬೇಕು. 7 ಕೋಟಿ ಜನರ ಮೇಲೆ ಸಾಲದ ಹೊರೆ ಹಾಕಿದ್ದಾರೆ. 1 ಲಕ್ಷ ಕೋಟಿ ಸಾಲ ದಾಟಿಸಿದ ಮೊದಲ ಸಿಎಂ ಸಿದ್ದರಾಮಯ್ಯ. ಕೃಷಿ ಕ್ಷೇತ್ರಕ್ಕೆ ಅನ್ಯಾಯ ಮಾಡಿದ್ದಾರೆ. ಬೆಂಗಳೂರಿಗೆ ಸುರಂಗ ಮಾರ್ಗ ಕೊಟ್ಟಿದ್ದಾರೆ. ಕೆಂಪಣ್ಣ ಆರೋಪಿಸಿದ್ದ 50 ಪರ್ಸೆಂಟ್ ಹಣ ಇಡೋಕೆ ಈ ಸುರಂಗ ಮಾರ್ಗ ಮಾಡಿರಬೇಕು. ಒಟ್ಟಾರೆಯಾಗಿ ಉಪ್ಪು ಹುಳಿ ಇಲ್ಲದ ಬಜೆಟ್" ಎಂದು ಟೀಕಿಸಿದರು.
ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, "ಸಿಎಂ ಮಂಡನೆ ಮಾಡಿರುವ ಬಜೆಟ್ ರೈತ ವಿರೋಧಿ ಬಜೆಟ್ ಆಗಿದೆ. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಅಂಶವಿಲ್ಲ. ತಮ್ಮ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ಈ ಬಜೆಟ್ ಮಾಡಿದ್ದಾರೆ. ಮೊನ್ನೆ ದೆಹಲಿ ಚಲೋ ಮಾಡಿದ್ರು. ಇವತ್ತು ಕೂಡ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಾರೆ. ರೈತರಿಗೆ ಅನುಕೂಲ ಆಗದೇ ಇರುವ ಬಜೆಟ್. ಇವರ ಪ್ರಣಾಳಿಕೆಯಲ್ಲಿ ನೇತಾರರ ಅಭಿವೃದ್ಧಿ ಬಗ್ಗೆ ಹೇಳಿದ್ದರು. ಆದರೆ, ಇವತ್ತು ಆ ಮಾತೇ ಇಲ್ಲ. ನುಡಿದಂತೆ ನಡೆಯದ ಸರ್ಕಾರ ಇದು. ರೈತರಿಗೆ ಬಡವರಿಗೆ ಅನ್ಯಾಯ ಆಗಿರೋ ಬಜೆಟ್. ಬರಗಾಲ ಸಂದರ್ಭದಲ್ಲಿ ಯಾವುದೇ ರೀತಿ ಸಹಾಯ ಆಗದೇ ಇರೋ ಬಜೆಟ್. ಒಬ್ಬ ಅನುಭವಿ ಸಿಎಂ ಈ ರೀತಿ ಬಜೆಟ್ ಮಾಡ್ತಾರೆ ಅಂತಾ ಯಾರೂ ನಿರೀಕ್ಷೆ ಮಾಡಿರಲಿಲ್ಲ. ರಾಜ್ಯದ ಜನರ ಪಾಲಿಗೆ ಬದುಕಿದ್ದು ಈ ಸರ್ಕಾರ ಸತ್ತಂತೆ" ಎಂದರು.
ಮಾಜಿ ಡಿಸಿಎಂ ಡಾ.ಅಶ್ವತ್ಥ ನಾರಾಯಣ ಮಾತನಾಡಿ, "ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ. ಇದು ಅಭಿವೃದ್ಧಿಗೆ ವಿರೋಧ ಆಗಿದೆ. ಅಭಿವೃದ್ಧಿಗೆ ಹಣ ನೀಡಿಲ್ಲ. ರೈತರ ಬಡವರ ಹಾಗೂ ಅಭಿವೃದ್ಧಿಯ ವಿರೋಧಿಯಾಗಿದೆ" ಎಂದು ಟೀಕಿಸಿದರು.
Bjp leaders protest against Budget of Cm Siddaramaiah, they said noble prize should be given to him for such a wonderful budget.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm