ಬ್ರೇಕಿಂಗ್ ನ್ಯೂಸ್
19-02-24 10:27 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.19: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಎಂಬ ಕುವೆಂಪು ರಚಿತ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.
ವಸತಿ ಶಾಲೆಗಳಲ್ಲಿ ಘೋಷ ವಾಕ್ಯ ಬದಲಾವಣೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡು ಸಚಿವರು ಪ್ರಕಟಣೆ ನೀಡಿದ್ದಾರೆ, ಪ್ರಸ್ತುತ ಇರುವ ಘೋಷವಾಕ್ಯ ತೆಗೆದುಹಾಕುವ ಬಗ್ಗೆ ಯಾವುದೇ ಆದೇಶ ನೀಡಿಲ್ಲ ಎಂದು ಸಚಿವರು ತಿಳಿಸಿದ್ದಾರೆ.
ಮಕ್ಕಳಲ್ಲಿ ಕಲಿಕೆಯ ದೃಷ್ಟಿಯಿಂದ ವೈಜ್ಞಾನಿಕತೆ, ವೈಚಾರಿಕತೆ ಮೂಡಿಸಲು ಜೊತೆಗೆ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಸಲಾಗಿದೆ. ಕೆಲವರು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ ಎಂಬ ಆಲೋಚನೆ ಮುಂದಿಟ್ಟಿದ್ದಾರೆ. ಈ ಆಲೋಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ. ದೈರ್ಯವಾಗಿ ಪ್ರಶ್ನಿಸಿ ಎಂದರೆ ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯ. ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದ ಇಲ್ಲಿ ಜರುಗಿರುವುದಿಲ್ಲ ಎಂದು ಹೇಳಿದ್ದಾರೆ.
ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯ ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು, ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No order has been issued to change the motto of residential schools, only the proposal Social Welfare Minister Mahadevappa clarifies.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm