ಬ್ರೇಕಿಂಗ್ ನ್ಯೂಸ್
21-02-24 09:37 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.21: ಲೋಕಸಭೆ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ಹೊಸಬರಿಗೆ ಟಿಕೆಟ್ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರಿಗೆ ಅಂಚೆ ಮೂಲಕ ಪತ್ರ ರವಾನಿಸಿದ್ದಾರೆ.
ಕೆಲ ವಾರಗಳ ಹಿಂದೆ ಚಿಕ್ಕಮಗಳೂರು ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಾರ್ಯಕರ್ತರು ಸಭೆ ನಡೆಸಿದ್ದರು. ಇದರ ಬೆನ್ನಲ್ಲೇ ಪತ್ರ ಚಳವಳಿ ಆರಂಭಿಸಿದ್ದಾರೆ. ಶೋಭಾ ಕರಂದ್ಲಾಜೆ ಎರಡು ಬಾರಿ ಆಯ್ಕೆಯಾಗಿದ್ದು ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಬಿಜೆಪಿ ಟಿಕೆಟ್ ನೀಡಬಾರದು. ಹೊಸ ಮುಖಕ್ಕೆ ಟಿಕೆಟ್ ನೀಡಬೇಕು ಎಂದು ಪತ್ರ ಬರೆದಿದ್ದಾರೆ.
ಕಳೆದ ಬಾರಿಯೂ ಶೋಭಾ ಕರಂದ್ಲಾಜೆ ಸ್ಪರ್ಧೆ ವಿರುದ್ದ ಗೋಬ್ಯಾಕ್ ಶೋಭಾ ಅಭಿಯಾನ ನಡೆಸಲಾಗಿತ್ತು. ಕೆಲವು ದಿನಗಳ ಬಳಿಕ ಅಭಿಯಾನ ತೆರೆಮರೆ ಸರಿದಿತ್ತು. ಶೋಭಾ ಕರಂದ್ಲಾಜೆ ಬಿಜೆಪಿ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿ ಎರಡನೇ ಬಾರಿಗೆ ಸಂಸದರಾಗಿದ್ದಲ್ಲದೆ ಮೋದಿ ಸಂಪುಟದಲ್ಲಿ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಸ್ಥಾನ ಗಿಟ್ಟಿಸಿದ್ದರು.
ತುಮಕೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಶೋಭಾ ಕರಂದ್ಲಾಜೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದಲೇ ಮತ್ತೆ ಸ್ಪರ್ಧೆ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾಡುವ ಪ್ರಶ್ನೆ ಇಲ್ಲ. ಪಕ್ಷ ಬದಲಾವಣೆ ಬಯಸಿದಲ್ಲಿ ತೀರ್ಮಾನಕ್ಕೆ ಬದ್ದವಾಗಿದ್ದೇನೆ ಎಂದಿದ್ದಾರೆ. ಈ ಹೇಳಿಕೆಯ ಬೆನ್ನಲ್ಲೇ ಕ್ಷೇತ್ರದಲ್ಲಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
Bjp workers have sent a letter to Prime Minister Narendra Modi, party national president J P Nadda and Home Minister Amit Shah seeking tickets for new faces from Udupi-Chikkamagaluru constituency for the upcoming Lok Sabha elections.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 04:03 am
Mangaluru Correspondent
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm