Moodbidri, College girl missing: ಮೂಡುಬಿದ್ರೆ ; ಖಾಸಗಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ 

25-02-24 01:11 pm       HK News Desk   ಕರ್ನಾಟಕ

ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬೈಂದೂರು ಮೂಲದ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡಬಿದಿರೆ, ಫೆ.25: ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಬೈಂದೂರು ಮೂಲದ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡುಬಿದ್ರೆ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಪಿಟಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ನಾಪತ್ತೆಯಾದವಳು. ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ಈಕೆ ಎಂದಿನಂತೆ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದಿದ್ದು ಕನ್ನಡ ಭವನದ ಬಳಿ ಇಳಿದಿದ್ದಾಳೆಂದು ಜೊತೆಗಿದ್ದವರು ಮಾಹಿತಿ ನೀಡಿದ್ದಾರೆ. ಆನಂತರ ಯುವತಿ ಅಲ್ಲಿಂದ ಕಾಲೇಜಿಗೆ ಅಥವಾ ಮನೆಗೆ ಹೋಗದೆ ಕಾಣೆಯಾಗಿರುವುದಾಗಿ ತಿಳಿದುಬಂದಿದೆ. ಕಾಣೆಯಾಗುವ ಸಂದರ್ಭ ಕಾಲೇಜಿನ ಸಮವಸ್ತ್ರ ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

A first-year college student from the city has been reported missing. Adira (19), hailing from Kollur, is the missing student.