ಬ್ರೇಕಿಂಗ್ ನ್ಯೂಸ್
25-02-24 01:59 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.25: ಶೋಭಾ ಕರಂದ್ಲಾಜೆ ಕಳೆದ ಬಾರಿ 3.50 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದರು. ಈ ಬಾರಿ ಅದಕ್ಕೂ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ. ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಮೋದಿಯಿಂದಾಗಿ ದೇಶ, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ನಾವು 28ಕ್ಕೆ 28 ಸ್ಥಾನ ಗೆಲ್ಲಬೇಕು ಎಂದು ಪ್ರಯತ್ನ ಮಾಡುತ್ತಿದ್ದೇವೆ, ಅದೇ ವಾತಾವರಣವಿದೆ. ಶೋಭಾ ವಿರುದ್ಧ ಪಿತೂರಿ, ವ್ಯವಸ್ಥಿತ ಷಡ್ಯಂತ್ರವನ್ನು ಯಾರು ಮಾಡಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ಅವರು ಯಾವುದಕ್ಕೂ ಧತಿಗೆಡಲ್ಲ, ಕೇಂದ್ರ ಸಚಿವೆಯಾಗಿ ಬಹಳ ಒಳ್ಳೆ ಕೆಲಸ ಮಾಡಿದ್ದಾರೆ ಎಂದು ಯಡಿಯೂರಪ್ಪ, ಶೋಭಾ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ಮಂಡ್ಯದ ಟಿಕೆಟ್ ಯಾರಿಗೆಂದು ಇನ್ನೂ ಯಾವುದೇ ಚರ್ಚೆ ಆಗಿಲ್ಲ. ಇಂದು-ನಾಳೆಯಲ್ಲಿ ಎಲ್ಲ ಗೊತ್ತಾಗುತ್ತೆ ಎಂದು ಆ ಕುರಿತ ಪ್ರಶ್ನೆಗೆ ಬಿ.ಎಸ್.ವೈ ಹೇಳಿದ್ದಾರೆ. ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ, ಮೊದಲ ಪಟ್ಟಿ ಮೂರು ದಿನದಲ್ಲಿ ಆಗಬಹುದು ಅಂದುಕೊಂಡಿದ್ದೇನೆ. ಪಕ್ಷದ ದೆಹಲಿ ನಾಯಕರು ಅದನ್ನು ಮಾಡಲಿದ್ದಾರೆ ಎಂದು ಹೇಳಿದರು.
ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಭಾಗದಲ್ಲಿ ಗೋಬ್ಯಾಕ್ ಅಭಿಯಾನ ನಡೆಯುತ್ತಿರುವಾಗಲೇ ಯಡಿಯೂರಪ್ಪ ಬಂದು ಮದ್ದರೆಯುವ ಪ್ರಯತ್ನ ಮಾಡಿದ್ದಾರೆ. ಪಿತೂರಿ ಹಿಂದೆ ಯಾರಿದ್ದಾರೆ ಅಂತ ಗೊತ್ತು ಅನ್ನುವ ಮೂಲಕ ವಿರೋಧಿ ನಾಯಕರಿಗೆ ಚಾಟಿ ಬೀಸಿದ್ದಾರೆ. ಅಲ್ಲದೆ, ಕ್ಷೇತ್ರದಲ್ಲಿ ಅಭ್ಯರ್ಥಿ ಬದಲಾವಣೆ ಇಲ್ಲ ಎನ್ನುವ ಸುಳಿವು ನೀಡಿದ್ದಾರೆ.
Former Chief Minister BS Yediyurappa today held a crucial meeting with chikkamagaluru district leaders in the wake of 'Go Back Shobha Karanlade' against Union Minister Shobha Karandlaje. Yediyurappa held a meeting with bjp district president M R Devaraj Shetty and other leaders at chikkamagaluru tourist temple and took stock of the campaign. He also assured the BJP activists that there is no need to be afraid of such a campaign.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm