ಬ್ರೇಕಿಂಗ್ ನ್ಯೂಸ್
25-02-24 05:34 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ರಾಜಾ ವೆಂಕಟಪ್ಪ ನಾಯಕ ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ, ಈವರೆಗೆ ನಾಲ್ಕು ಬಾರಿ ಶಾಸಕರಾಗಿದ್ದರು.
ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಮಾಡಲಾಗಿತ್ತು. 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ, ಇಂದು ದಿಢೀರನೇ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
1994ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಮೊದಲ ಬಾರಿ ಶಾಸಕರಾಗಿದ್ದರು. ಇದಾದ ಬಳಿಕ 1999, 2013 ಹಾಗೂ 2023 ರಲ್ಲೂ ಸಹ ಕಾಂಗ್ರೆಸ್ನಿಂದ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. ಇವರ ತಂದೆ ರಾಜಾ ಕುಮಾರ್ ನಾಯಕ ಸಹ ಕಾಂಗ್ರೆಸ್ನಿಂದ ಎರಡು (1957, 1978 ರಲ್ಲಿ) ಬಾರಿ ಶಾಸಕರಾಗಿದ್ದರು. 2023ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಸುರಪುರ ಎಸ್ಟಿ ಮೀಸಲು ಕ್ಷೇತ್ರದಿಂದ ಬಿಜೆಪಿಯ ರಾಜುಗೌಡ ಅವರನ್ನು ರಾಜಾ ವೆಂಕಟಪ್ಪ ನಾಯಕ್ ಮಣಿಸಿದ್ದರು. ಈ ಮೂಲಕ ನಾಲ್ಕನೇ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.
Raja Venkatappa Nayaka Congress MLA of Surapur dies of heart attack. Congress legislator from Surpur constituency in the district, Raja Venkatappa Naik, died of heart attack in a private hospital in Bengaluru on Sunday.
27-02-25 05:50 pm
HK News Desk
Forest Fire, Kanakapura, Bangalore: ಒಣಹುಲ್ಲು...
27-02-25 05:48 pm
ಕುಂಭಮೇಳಕ್ಕೆ ಹೋಗಿರೋದು ತಪ್ಪಾದ್ರೆ ಡಿಕೆಶಿ ಅವರನ್ನು...
27-02-25 03:28 pm
DK Shivakumar, BJP, Amit Shah, congress: ಡಿಕೆ...
27-02-25 01:46 pm
ಸಿಎಂಗೆ ಕ್ಲೀನ್ ಚಿಟ್ ಕೊಟ್ಟರೂ, ಮುಡಾ ಹಗರಣದ ಬಗ್ಗೆ...
26-02-25 10:43 pm
26-02-25 05:38 pm
HK News Desk
Corruption, Amit Shah, MK Stalin: ಕ್ಷೇತ್ರ ಪುನ...
26-02-25 05:11 pm
CBI raid, Gain Bitcoin: 6,600 ಕೋಟಿ ರೂ. ಕ್ರಿಸ್...
26-02-25 12:47 pm
Vijay Wardhan, UPSC story: Success story 35 ಬ...
24-02-25 10:14 pm
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
27-02-25 07:09 pm
Mangalore Correspondent
PUC student Missing, Farangipete: ಪಿಯುಸಿ ವಿದ್...
27-02-25 03:11 pm
Missing, Mangalore, Konaje police: ಕೋಣಾಜೆಯ ಯು...
26-02-25 10:15 pm
Mangaluru-Kabaka Train, Brijesh Chowta: ಮಂಗಳೂ...
26-02-25 03:40 pm
Urwa Police, Mangalore, Selfie, Suspend: ಸೈಬರ...
25-02-25 10:58 pm
26-02-25 10:48 pm
HK News Desk
Sirsi Crime, stabbing: ಶಿವರಾತ್ರಿ ಹಬ್ಬಕ್ಕೆ ಮನೆ...
26-02-25 01:27 pm
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm