ಬ್ರೇಕಿಂಗ್ ನ್ಯೂಸ್
25-11-20 07:02 pm Bengaluru Correspondent ಕರ್ನಾಟಕ
ಮೈಸೂರು, ನ.25: ಸಿಎಂ ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವಾಗಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದಾರೆ.
ಮೈಸೂರಿನ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಗ್ರಾಮದಲ್ಲಿ ಸುದ್ದುಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮುಂದೆ ಎರಡೂವರೆ ವರ್ಷ ತನ್ನ ಆಡಳಿತ ಇದೆ. ಇನ್ನು ಎರಡೂವರೆ ವರ್ಷದಲ್ಲಿ ಎಲ್ಲಾ ಕೆಲಸ ಮಾಡಿ ಮುಗಿಸುವ ಅಪೇಕ್ಷೆ ಇದೆ ಎನ್ನುವ ಮೂಲಕ ಪರೋಕ್ಷವಾಗಿ ಮುಂದಿನ ಎರಡೂವರೆ ವರ್ಷ ತಾವೇ ಸಿಎಂ ಎಂದು ಹೇಳಿಕೊಂಡಿದ್ದಾರೆ.
ಮುಡುಕುತೊರೆ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗೆ 10 ಕೋಟಿ ಬಿಡುಗಡೆ ಮಾಡುತ್ತೇನೆ. ಒಂದೇ ಬಾರಿಗೆ 10 ಕೋಟಿ ಬಿಡುಗಡೆ ಮಾಡುತ್ತಿದ್ದು ಎರಡು ವರ್ಷದಲ್ಲಿ ಕೆಲಸ ಮುಗಿಸಬೇಕು ಎಂದು ಆಡಳಿತ ಸಮಿತಿಗೆ ತಾಕೀತು ಮಾಡಿದರು. ಅಲ್ಲದೆ ದೇವಸ್ಥಾನ ಅಭಿವೃದ್ಧಿಗೆ ಹಣದ ಕೊರತೆ ಬರಲ್ಲ. ದೇವರೇ ಹಣ ಕೊಡ್ತಾನೆ, ದೇವಸ್ಥಾನಕ್ಕೆ ಹಣ ಕೊಡಲು ಯಾಕ್ ತೊಂದರೆ ಆಗಬೇಕು ಎಂದ ಯಡಿಯೂರಪ್ಪ, ರಾಜ್ಯದ 136 ದೇವಸ್ಥಾನಗಳಿಗೆ 136 ಕೋಟಿ ಹಣ ಬಿಡುಗಡೆ ಮಾಡಿದ್ದೇನೆ. ಒಬ್ಬ ಮನುಷ್ಯನ ಸಾಧನೆ ಮಾತನಾಡಬೇಕು. ಮಾತೇ ಸಾಧನೆ ಆಗಬಾರದು. ಇನ್ನೂ ಎರಡುವರೆ ವರ್ಷ ನನ್ನ ಅಧಿಕಾರ ಇದೆ. ಈ ಅವಧಿಯಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡುತ್ತೇನೆ. ಈ ಮೂಲಕ ನನ್ನ ಸಾಧನೆ ಮಾತನಾಡುತ್ತದೆ ಎಂದು ಹೇಳಿದರು.
ಸಿಎಂ ಬದಲು ರಾಗಕ್ಕೆ ಡಿಸಿಎಂ ಟಾಂಗ್
ಇದೇ ವೇಳೆ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಸಿಎಂ ಬದಲಾವಣೆಯ ಮಾತಾಡುವ ಮಂದಿಗೆ ಟಾಂಗ್ ಇಟ್ಟಿದ್ದಾರೆ. ಯಡಿಯೂರಪ್ಪ ಒಂಟಿ ಸಲಗ ಇದ್ದಂತೆ. ಅವರು ಇಡೀ ರಾಜ್ಯವನ್ನು ಒಬ್ಬರೇ ಸುತ್ತಿ ಪಕ್ಷ ಕಟ್ಟಿದ್ದಾರೆ. ಮೊದಲು ಸಿಎಂ ಆಗಿ ಅವರು ಒಬ್ಬರೇ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಯಾರು ಸಚಿವರು ಇರಲಿಲ್ಲ. ಆದರೆ, ರಾಜ್ಯದಲ್ಲಿ ಪ್ರವಾಹ ಬಂದು ನಾಶ ನಷ್ಟ ಉಂಟಾಗಿತ್ತು. ಈ ವೇಳೆ ಇಡೀ ರಾಜ್ಯದಲ್ಲಿ ಒಬ್ಬರೇ ಪ್ರವಾಸ ಮಾಡಿ, ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ರು. ಯಡಿಯೂರಪ್ಪ ಅವರು ಒಂದು ರೀತಿ ಒಂಟಿ ಸಲಗ ಇದ್ದ ಹಾಗೆ ಎಂದು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ್ರು.
Two and half years I will be the cm of Karnataka stated BS Yediyurapp in Mysore
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm