ಬ್ರೇಕಿಂಗ್ ನ್ಯೂಸ್
27-02-24 01:29 pm Bengaluru Correspondent ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಪಕ್ಷದ ಹೈಕಮಾಂಡಿಗೆ ಶಾಕ್ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿ ಪಕ್ಷದ ವಿಪ್ ಉಲ್ಲಂಘನೆ ಮಾಡಿದ್ದಾರೆ.
ಬಿಜೆಪಿ ಶಾಸಕ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್ ಪರ ಮತ ಚಲಾಯಿಸಿದ್ದಾರೆ. ಹೀಗಾಗಿ ಎಸ್‌ಟಿಎಸ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ.
ಮತ ಚಲಾಯಿಸುವ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಎಸ್.ಟಿ. ಸೋಮಶೇಖರ್ ಭೇಟಿಯಾಗಿದ್ದರು. ಇದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಯಾರನ್ನೂ ಭೇಟಿಯಾಗಿಲ್ಲ. ನನ್ನನ್ನು ಭೇಟಿ ಮಾಡಿ, ಭರವಸೆ ಕೊಟ್ಟರೆ ಅವರಿಗೆ ಮತ ಹಾಕುತ್ತೇನೆ ಎಂದು ಹೇಳಿದ್ದರು.
ಅಭಿವೃದ್ಧಿಗೆ ಅನುದಾನ ಕೊಡುವ ಅಭ್ಯರ್ಥಿಗೆ ನನ್ನ ಮತ ಎಂದಿದ್ದರು. ಮತದಾನದ ಬಳಿಕ ಯಾರು ಅಸಮಧಾನ ಆದ್ರೆ ನನಗೇನು, ನಾನು ಆತ್ಮಸಾಕ್ಷಿಗೆ ತಕ್ಕಂತೆ ಮತ ಹಾಕ್ತೀನಿ. ವೋಟ್ ಆದ ಮೇಲೆ ಯಾರಿಗೆ ಅಂತ ನಿಮಗೇ ಗೊತ್ತಾಗುತ್ತೆ. ಕಾಂಗ್ರೆಸ್ ಜೊತೆಗಿನ ಸಂಬಂಧ ಈಗ ಹೊಸದಾಗಿ ಅಲ್ಲ, ಒಂದು ವರ್ಷದಿಂದ ಇದೆ. ವಿಪ್ ಉಲ್ಲಂಘನೆ, ಉಚ್ಚಾಟನೆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದಿದ್ದರು.
ಬಿಜೆಪಿ ನಾಯಕರಿಂದ ಎಸ್‌ಟಿ ಸೋಮಶೇಖರ್ ಅಂತರ ಕಾಯ್ದುಕೊಂಡಿದ್ದರು. ಇತ್ತೀಚೆಗೆ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲೂ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತದಾನ ಮಾಡಿ ಬಿಜೆಪಿಗೆ ಮುಜುಗರ ತಂದಿದ್ದರು. ಎಸ್‌ಟಿಎಸ್ ಅಡ್ಡ ಮತದಾನ ಮಾಡಿರುವ ಪರಿಣಾಮ ಬಿಜೆಪಿ ಮುಂದೇನು ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
In a surprising turn of events, MLA ST Somashekar from Karnataka's Bharatiya Janata Party (BJP) cross-voted during the ongoing Rajya Sabha elections on Tuesday, February 27. ST Somashekar, who secured victory in Yeshwanthapura with a significant margin of over 10,000 votes in the previous assembly elections, shocked his party by casting his vote in favor of the Congress.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm