Congress Naseer Hussain, Pakistan Zindabad, Bangalore ರಾಜ್ಯಸಭೆ ಗೆಲುವು ಹಿನ್ನೆಲೆ ನಾಸಿರ್​ ಹುಸೇನ್​ ಬೆಂಬಲಿಗರ ಸಂಭ್ರಮಾಚರಣೆ ;  ವಿಧಾನಸೌಧದಲ್ಲೇ ಪಾಕಿಸ್ತಾನ್​ ಪರ ಘೋಷಣೆ ; ಭಾರೀ ಆಕ್ರೋಶ, ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ 

27-02-24 10:12 pm       Bangalore Correspondent   ಕರ್ನಾಟಕ

ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್​ ಪಾಳಯದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಗೆಲುವು ಸಾಧಿಸಿದ ಮೂವರು ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್​ನ ನಾಸೀರ್​ ಹುಸೇನ್​ ಬೆಂಬಲಿಗರು ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲೇ ಪಾಕಿಸ್ತಾನ ಪರ ಘೋಷಣೆ ಕೂಗುವ ಮೂಲಕ ಉದ್ಧಟತನ ಮೆರೆದಿದ್ದಾರೆ. 

ಬೆಂಗಳೂರು, ಫೆ.27: ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್​ ಪಾಳಯದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು. ಗೆಲುವು ಸಾಧಿಸಿದ ಮೂವರು ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್​ನ ನಾಸೀರ್​ ಹುಸೇನ್​ ಬೆಂಬಲಿಗರು ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲೇ ಪಾಕಿಸ್ತಾನ ಪರ ಘೋಷಣೆ ಕೂಗುವ ಮೂಲಕ ಉದ್ಧಟತನ ಮೆರೆದಿದ್ದಾರೆ. 

ದೇಶದ ಸೌರ್ವಭೌಮತ್ವವನ್ನು ಧಿಕ್ಕರಿಸಿ ಪಾಕ್‌ ಪರ ಘೋಷಣೆ ಕೂಗಿರುವ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ನಾಸೀರ್ ಹುಸೇನ್ ನಿರಾಕರಿಸಿದ್ದು, ಪ್ರಶ್ನೆ ಮಾಡಿದ ಮಾಧ್ಯಮ ಸಿಬ್ಬಂದಿ ಮೇಲೆಯೇ ದರ್ಪ ತೋರಿದ್ದಾರೆ.

ರಾಜ್ಯಸಭೆಯ ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಗೆಲುವು ಸಾಧಿಸಿದ್ದಾರೆ ಎಂದು ಅಧಿಕಾರಿಗಳು ಚುನಾವಣಾ ಫಲಿತಾಂಶವನ್ನು ಪ್ರಕಟಿಸಿದರು. ಈ ವೇಳೆ ನೂತನ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್​ರನ್ನು ಅವರ ಬೆಂಬಲಿಗರು ಹಾರವನ್ನು ಹಾಕಿ ಸಂಭ್ರಮಿಸಿದ್ದಾರೆ. ಇದೇ ವೇಳೆ, ನಾಸೀರ್ ಹುಸೇನ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುತ್ತಿದ್ದರು. ನಾಸಿರ್ ಹುಸೇನ್ ಹಿಂದೆ ಇದ್ದ ಯುವಕನೊಬ್ಬ 2 ಬಾರಿ ಪಾಕ್​ ಪರ ಘೋಷಣೆ ಕೂಗಿದ್ದಾನೆ ಎನ್ನಲಾಗಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ನಾಸಿರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಜೊತೆಗೆ ಫೆ.28ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮತ್ತು ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಹಾಕಲು ವಿಪಕ್ಷ ಬಿಜೆಪಿ ನಾಯಕರು ಕರೆ ಕೊಟ್ಟಿದ್ದಾರೆ.

Congress Naseer Hussain supporters chant slogans of Pakistan Zindabad in the Vidhana Soudha in Bangalore. As Rajya Sabha Election results 2024 started pouring in Tuesday evening, supporters of Syed Naseer Hussain were heard chanting slogans of Pakistan Zindabad in the Vidhana Soudha, to mark his victory celebrations.