ಬ್ರೇಕಿಂಗ್ ನ್ಯೂಸ್
28-02-24 02:47 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 27: ''ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪ ಪ್ರಕರಣದ ಬಗ್ಗೆ ಸಮಗ್ರ ತನಿಖೆಯ ಅಗತ್ಯವಿದೆ. ತನಿಖೆಯ ನಂತರವೇ ನಿರ್ಧಾರಕ್ಕೆ ಬರಲಾಗುವುದು'' ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ''ಘಟನೆಯ ಕುರಿತು ಈಗಾಗಲೇ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಿಜೆಪಿಯವರು ನೀಡಿರುವ ದೂರನ್ನೂ ಸಹ ಅದರ ಜೊತೆಗೆ ಸೇರಿಸಿಕೊಳ್ಳಲಾಗಿದೆ'' ಎಂದು ಮಾಹಿತಿ ನೀಡಿದ್ದಾರೆ.
''ಪ್ರಕರಣದಲ್ಲಿ ಎರಡು ರೀತಿಯ ಅಭಿಪ್ರಾಯಗಳಿವೆ. ಕೆಲವರು ಅಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ನಾಸಿರ್ ಹುಸೇನ್ ಜಿಂದಾಬಾದ್ ಎನ್ನಲಾಗಿದೆ ಎಂದಿದ್ದಾರೆ. ಹಾಗಾಗಿ, ಘಟನೆಯ ಕುರಿತು ಮೊದಲು ಸುದ್ದಿ ಪ್ರಸಾರ ಮಾಡಿದವರಿಂದ ಅಲ್ಲಿನ ದೃಶ್ಯಗಳನ್ನ ಪಡೆದುಕೊಂಡು ಎಫ್ಎಸ್ಎಲ್ಗೆ ವೈಜ್ಞಾನಿಕ ಪರಿಶೀಲನೆಗೆ ಕಳಿಸುತ್ತಿದ್ದೇವೆ. ಕೂಗಿದ ವ್ಯಕ್ತಿ, ಆತನ ಅಕ್ಕಪಕ್ಕದಲ್ಲಿದ್ದವರನ್ನು ತನಿಖೆ ಮಾಡಬೇಕು. ಆ ನಂತರದಲ್ಲಿ ಆ ವ್ಯಕ್ತಿ ಪಾಕ್ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಕಾನೂನು ಪ್ರಕಾರ ಶಿಕ್ಷೆಯಾಗಲಿದೆ'' ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪ ವಿಚಾರ ಪ್ರತಿಕ್ರಿಯಿಸಿ, ''ಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಏನು ತಪ್ಪು ಮಾಡಿದೆ. ಇದರಲ್ಲಿ ನಮ್ಮ ಕರ್ತವ್ಯ ನಾವು ಮಾಡುತ್ತೇವೆ. ಬಿಜೆಪಿಯವರ ಆರೋಪಗಳು ಮೊದಲಿನಿಂದಲೂ ಇವೆ. ಕಾಂಗ್ರೆಸ್ ಪಕ್ಷ ಮುಸ್ಲಿಂ ಪರ ಇದೆ ಎನ್ನುವುದು ಅವರು ಮೊದಲಿನಿಂದಲೂ ಮಾಡಿಕೊಂಡು ಬಂದಿರುವ ಆರೋಪ. ನಾಸಿರ್ ಹುಸೇನ್ ವರ್ತನೆಯ ಬಗ್ಗೆ ಗಮನಿಸಿಲ್ಲ, ಕೋಪದಲ್ಲಿ ಹೇಳಿರಬೇಕು'' ಎಂದು ಪರಮೇಶ್ವರ್ ತಿಳಿಸಿದ್ದಾರೆ.
Pakistan Zindabad Slogans By Congress Supporters video to be sent to FSL says Home Minister only then we can prove of it was Pakistan Zindabad or Nasir Hussain Zindabad he added. The Bharatiya Janata Party (BJP) on Wednesday accused Congress workers of raising "Pakistan Zindabad" slogans inside the Assembly after grand old party leader Naseer Hussain registered a victory in the Rajya Sabha polls.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm