ಬ್ರೇಕಿಂಗ್ ನ್ಯೂಸ್
29-02-24 08:38 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.29: ಮಾಜಿ ಐಎಎಸ್ ಅಧಿಕಾರಿ ಹಾಗೂ ಚಿತ್ರನಟ, ರಾಜಕಾರಣಿಯೂ ಆಗಿದ್ದ ಕೆ. ಶಿವರಾಮ್(71) ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಲ್ಪಕಾಲದ ಅನಾರೋಗ್ಯದ ಬಳಿಕ ಹೃದಯಾಘಾತಕ್ಕೀಡಾಗಿ ಗುರುವಾರ ನಿಧನರಾದರು.
ಅನಾರೋಗ್ಯದ ಕಾರಣದಿಂದ ಕಳೆದ 25 ದಿನಗಳಿಂದ ಎಚ್ ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೆ. ಶಿವರಾಮು ಇಂದು ಸಂಜೆ 4-15ರ ಸುಮಾರಿನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು ಎಂದು ಅವರ ಅಳಿಯ, ನಟ ಪ್ರದೀಪ್ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಮೃತರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದವರು ಹೇಳಿದರು.
ಮೂಲತಃ ರಾಮನಗರ ಜಿಲ್ಲೆಯವರಾದ ಶಿವರಾಮ್ ಬೆಳೆದಿದ್ದು ಬೆಂಗಳೂರಿನಲ್ಲಿ. ಬಡ ಕುಟುಂಬದಿಂದ ಬಂದಿದ್ದ ಅವರು ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮಾಡಿ, ನಂತರ ಟೈಪಿಂಗ್ ಮತ್ತು ಶಾರ್ಟ್ ಹ್ಯಾಂಡ್ ಮುಗಿಸಿ 1972ರಲ್ಲಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದರು. ಮಾರನೇ ವರ್ಷವೇ ಪೊಲೀಸ್ ಇಲಾಖೆ ಗುಪ್ತಚರ ವಿಭಾಗದಲ್ಲಿ ಪೊಲೀಸ್ ಮಾಹಿತಿದಾರರಾಗಿ ಕೆಲಸಕ್ಕೆ ಸೇರಿದ್ದರು. ಕೆಲಸ ಮಾಡುತ್ತಲೇ ದೂರ ಶಿಕ್ಷಣ ಮೂಲಕ ಬಿಎ ಮತ್ತು ಎಂಎ ಡಿಗ್ರಿ ಪಡೆದು 1985ರಲ್ಲಿ ಕೆಎಎಸ್ ಪರೀಕ್ಷೆ ಬರೆದು ಡಿಎಸ್ ಪಿ ಆಗಿ ಭಡ್ತಿ ಪಡೆದಿದ್ದರು. 1986ರಲ್ಲಿ ಕನ್ನಡದಲ್ಲೇ ಐಎಎಸ್ ಪರೀಕ್ಷೆ ಬರೆದು ಪಾಸಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದರು.
1993ರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಮ್ಯೂಸಿಕಲ್ ಮತ್ತು ರೋಮ್ಯಾಂಟಿಕ್ ಚಿತ್ರ 'ಬಾ ನಲ್ಲೆ ಮಧುಚಂದ್ರಿಕೆ' ಮೂಲಕ ಯಶಸ್ವಿ ನಾಯಕ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿದ್ದರು. ಇದರ ಬಳಿಕ ‘ವಸಂತ ಕಾವ್ಯ’, ‘ಸಾಂಗ್ಲಿಯಾನ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆದರೆ, ಈ ಚಿತ್ರಗಳು ಯಶಸ್ಸು ತಂದುಕೊಡಲಿಲ್ಲ. ಬಳಿಕ ನಟನೆಯಿಂದ ದೂರವಿದ್ದ ಅವರು 2013ರಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತರಾಗಿದ್ದಾಗ ಸ್ವಯಂ ನಿವೃತ್ತಿ ಪಡೆದಿದ್ದರು. ನಿವೃತ್ತಿ ನಂತರ ಕಾಂಗ್ರೆಸ್ ಪಕ್ಷ, ಬಳಿಕ ಜೆಡಿಎಸ್ ಸೇರಿ 2014 ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರದಿಂದ ಸ್ಪರ್ಧಿಸಿದ್ದರು. ಆನಂತರ, ಬಿಜೆಪಿ ಸೇರ್ಪಡೆಯಾಗಿದ್ದರು.
Renowned bureaucrat-turned-actor K.Shivaram passed away on Thursday, at the age of 71. K Shivram was not keeping well from past few days and was undergoing treatment at HCG Hospital.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:42 pm
Mangalore Correspondent
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm