ಬ್ರೇಕಿಂಗ್ ನ್ಯೂಸ್
26-11-20 02:30 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 26: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಿಗೆ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸಿದ್ದ ಸರಕಾರದ ಅಧಿಸೂಚನೆಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ದ್ವಿಸದಸ್ಯ ಪೀಠ ತಡೆಹಾಕಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಲ್ಲಿ ವಾರದ ಹಿಂದಷ್ಟೆ ಅಧಿಕಾರಕ್ಕೇರಿ, ಮೀಸಲು ರದ್ದತಿಯಿಂದ ಉಸಿರು ಕಟ್ಟಿದವರಿಗೆ ಮತ್ತೆ ಉಸಿರು ಸಿಕ್ಕಂತಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿ, ನ.19ರಂದು ಏಕಸದಸ್ಯ ಪೀಠ ಸರಕಾರದ ಅಧಿಸೂಚನೆಯನ್ನು ರದ್ದುಪಡಿಸಿತ್ತು. ಅಲ್ಲದೆ, ಈ ಬಗ್ಗೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿತ್ತು. ರಾಜ್ಯ ಸರಕಾರದ ಮೇಲ್ಮನವಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಸರಕಾರದ ಪರ ವಕೀಲರ ವಾದ ಆಲಿಸಿ ತನ್ನ ಹಳೆಯ ಆದೇಶಕ್ಕೆ ಮತ್ತೆ ತಡೆಹಾಕಿದ್ದಲ್ಲದೆ ಎಲ್ಲ ಪ್ರತಿವಾದಿಗಳಿಗೂ ನೋಟೀಸ್ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಅರ್ಜಿಯಲ್ಲಿನ ತಾಂತ್ರಿಕ ಲೋಪ ಸರಿಪಡಿಸಲು ಸರಕಾರದ ಪರ ವಕೀಲರು ಕೇಳಿಕೊಂಡಿದ್ದು, ಅದನ್ನು ಪರಿಗಣಿಸಿದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಚುನಾವಣೆ ನಡೆದು ಎರಡು ವರ್ಷಗಳಾಗುತ್ತಾ ಬಂದರೂ, ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದಾಗಿದೆ. ಇದೀಗ ರಾಜ್ಯದ 276 ಸಂಸ್ಥೆಗಳಲ್ಲಿ ಚುನಾಯಿತರು ಮೀಸಲಾತಿ ಪ್ರಕಾರ ಅಧ್ಯಕ್ಷ – ಉಪಾಧ್ಯಕ್ಷರಾಗಿ ಅಧಿಕಾರಕ್ಕೇರಿದ್ದಾರೆ. ಇಂಥ ಸಂದರ್ಭದಲ್ಲಿ 5-6 ಸಂಸ್ಥೆಗಳಷ್ಟೇ ಮೀಸಲಾತಿ ಪ್ರಶ್ನಿಸಿದ್ದನ್ನು ಪರಿಗಣಿಸಿ ಎಲ್ಲ ಸಂಸ್ಥೆಗಳ ಆಯ್ಕೆಯನ್ನೂ ರದ್ದುಪಡಿಸುವುದು ಸರಿಯಲ್ಲ ಎಂದು ಸರಕಾರದ ಪರ ವಕೀಲರು ವಾದಿಸಿದ್ದಾರೆ.
The High Court has cleared reserving posts of presidents and vice-presidents of all City Municipal Councils, Town Municipal Councils, and Town Panchayats.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm