ಬ್ರೇಕಿಂಗ್ ನ್ಯೂಸ್
02-03-24 12:54 pm Mysuru Correspondent ಕರ್ನಾಟಕ
ಮೈಸೂರು, ಮಾ 02: ಬೆಂಗಳೂರಿನ ಕೆಫೆಯಲ್ಲಿ ನಡೆದ ಸ್ಪೋಟವು ವ್ಯಕ್ತಿಯ ಕೃತ್ಯವೋ ಅಥವಾ ಸಂಘಟನೆಯ ಕೃತ್ಯವೋ ಎಂಬುದು ಗೊತ್ತಾಗಿಲ್ಲ. ಇದು ಭಯೋತ್ಪಾದಕ ಕೃತ್ಯವೇ ಎನ್ನುವುದೂ ಸ್ಪಷ್ಟವಾಗಿಲ್ಲ. ಎಲ್ಲವೂ ಇನ್ನೂ ತನಿಖೆಯ ಹಂತದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಸ್ಕ್ ಹಾಗೂ ಟೋಪಿ ಹಾಕಿಕೊಂಡು ಬಂದ ಒಬ್ಬ ವ್ಯಕ್ತಿ ಈ ಸ್ಪೋಟ ನಡೆಸಿದ್ದಾನೆ. ಹೋಟೆಲ್ ನಲ್ಲಿ ತಿಂಡಿಗೆ ಟೋಕನ್ ತೆಗೆದುಕೊಂಡು, ಹೋಟೆಲ್ ನಲ್ಲಿ ಕುಳಿತು ಟೈಮರ್ ಫಿಕ್ಸ್ ಮಾಡಿ ಬ್ಲಾಸ್ಟ್ ಮಾಡಿ ನಂತರ ಹೋಗಿದ್ದಾನೆ. ಅವನು ಬಸ್ಸಿನಿಂದ ಇಳಿಯುವುದು ಹೋಟೆಲ್ ಗೆ ಬರುವುದು ಎಲ್ಲಾ ದೃಶ್ಯಾವಳಿಗಳು ಸಿಕ್ಕಿವೆ. ವ್ಯಕ್ತಿಯ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದರು.
ನಾನು ಕೂಡ ಇಂದು ಘಟನಾ ಸ್ಥಳಕ್ಕೆ ಮತ್ತು ಗಾಯಾಳುಗಳ ಆರೋಗ್ಯ ವಿಚಾರಿಸಲು ಹೋಗುತ್ತೇನೆ. ಒಟ್ಟು 9 ಜನರು ಗಾಯಾಳುಗಳಾಗಿದ್ದಾರೆ. 9ಕ್ಕೆ 9 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದರು. ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಗೂ ನಿನ್ನೆಯ ಸ್ಪೋಟಕ್ಕೂ ಸಾಮ್ಯತೆ ಇಲ್ಲ. ಅದು ಕುಕ್ಕರನಲ್ಲಿ ಆದ ಬ್ಲಾಸ್ಟ್. ಇಲ್ಲಿ ಯಾವ ಕುಕ್ಕರ್ ನಲ್ಲೂ ಬ್ಲಾಸ್ಟ್ ಆಗಿಲ್ಲ ಎಂದು ಸಿಎಂ ಹೇಳಿದರು.
ರಾಜಕಾರಣ ಮಾಡಬಾರದು:
ಅಲ್ಪ ಸಂಖ್ಯಾತರ ಓಲೈಕೆಗಾಗಿ ಈ ಥರ ನಡೆದಿದೆ ಎಂದ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಬಿಜೆಪಿಯವರ ಅವಧಿಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತಲ್ಲ ಅದೂ ಅಲ್ಪ ಸಂಖ್ಯಾತರ ಓಲೈಕೆ ಕಾರಣಕ್ಕೆ ಆಗಿತ್ತೆ? ಬಿಜೆಪಿ ಈ ವಿಷಯದಲ್ಲಿ ರಾಜಕಾರಣ ಮಾಡಬಾರದು. ಮಂಗಳೂರು ಬಾಂಬ್ ಬ್ಲಾಸ್ಟ್ ಹಾಗು ಬೆಂಗಳೂರು ಬ್ಲಾಸ್ಟ್ ಸಂಬಂಧವಿಲ್ಲ. ಬ್ಲಾಸ್ಟ್ ಮಾಡಿದ್ದನ್ನು ಖಂಡಿಸುತ್ತೇನೆ. ಬಾಂಬ್ ಬ್ಲಾಸ್ಟ್ ಸಂಬಂಧ ಇನ್ನೂ ಕೂಡ ತನಿಖೆ ನಡೆಯುತ್ತಿದೆ. ವರದಿ ಬಳಿಕ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಎಫ್ಎಸ್ಎಲ್ ವರದಿ ಬಂದಿಲ್ಲ:
ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಇನ್ನೂ ಎಫ್ಎಸ್ಎಲ್ ರಿಪೋರ್ಟ್ ಬಂದಿಲ್ಲ. ವರದಿ ಬಂದ ಮೇಲೆ ತಪ್ಪು ನಡೆದಿದ್ದು ಸಾಬೀತಾದರೆ ನಾವು ಯಾರನ್ನು ರಕ್ಷಣೆ ಮಾಡುವುದಿಲ್ಲ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ವರದಿಯೇ ಬಂದಿಲ್ಲ ಎಂದ ಮೇಲೆ ಬಿಜೆಪಿಯ ಆರೋಪಗಳಿಗೆ ಏನು ಉತ್ತರ ಕೊಡಲಿ ಎಂದರು.
Cafe bomb blast in Bangalore, CM siddaramiah slams Bjp, says don't politise this incident. Speaking to the media persons in Mysuru he said that there is no connection to Mangalore cooker bomb incident. Bjp is trying to politise this incident for their party benifit.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm