ಬ್ರೇಕಿಂಗ್ ನ್ಯೂಸ್
05-03-24 07:03 pm HK News Desk ಕರ್ನಾಟಕ
ಹಾಸನ, ಮಾ.05: ''ಸಿದ್ದರಾಮಯ್ಯನವರೇ ಸಂಪೂರ್ಣ ಐದು ವರ್ಷ ಅಧಿಕಾರ ಪೂರೈಸುತ್ತಾರೆ ಲೋಕಸಭಾ ಚುನಾವಣೆ ನಂತರ ಎರಡೂವರೆ ವರ್ಷ ಮತ್ತೊಬ್ಬರು ಮುಖ್ಯಮಂತ್ರಿ ಆಗುತ್ತಾರೆ ಎಂಬುದೆಲ್ಲ ಉಹಾಪೋಹ'' ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಹಾಸನ ತಾಲೂಕಿನ ಹಳ್ಳಿಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಮುಖ್ಯಮಂತ್ರಿಗಳ ಪಟ್ಟಕ್ಕೆ ಆಕಾಂಕ್ಷಿತರು ಇದ್ದೇ ಇರುತ್ತಾರೆ. ಆದರೆ ಸುಭದ್ರ ಸರಕಾರ ನೀಡುವ ಗುರಿ ರಾಜ್ಯದ ಕಾಂಗ್ರೆಸ್ ಪಕ್ಷಕ್ಕೆ ಇದೆ'' ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ನೀವು ರ್ಸ್ಪಸುತ್ತಿರಾ ಎಂಬ ಪ್ರಶ್ನೆಗೆ ರಾಜ್ಯ ರಾಜಕಾರಣದಲ್ಲೇ ಉಳಿಯಬೇಕೆಂಬ ಇಚ್ಛೆ ಇದೆ ಹೈಕಮಾಂಡ್ ತೀರ್ಮಾನ ತನಗೆ ತಿಳಿದಿಲ್ಲ ಎಂದು ಉತ್ತರಿಸಿದರು. ಜಾತಿಗಣತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ ಈಗಾಗಲೇ ಗಣತಿ ಮಾಡಲಾಗಿದೆ ವರದಿ ಸರಕಾರಕ್ಕೆ ಸಲ್ಲಿಕೆಯಾಗಿದೆ. ಕ್ಯಾಬಿನೆಟ್ ಅಪ್ರೂವಲ್ ಸಮಯ ಸಂದ‘ ನೋಡಿ ಪಡೆಯಲಾಗುತ್ತದೆ ಎಂದರು. ಸರಕಾರ ಕಾನೂನು ಚೌಕಟ್ಟಿನ ಎಲ್ಲವನ್ನೂ ಪರಿಶೀಲಿಸಿಯೇ ವರದಿ ಪಡೆದಿದೆ ಎಂದರು.
ಶ್ಯಾಮನೂರು ಶಿವಶಂಕರಪ್ಪ ಸ್ವಪಕ್ಷೀಯರಾಗಿದ್ದು, ಅಪಸ್ವರ ಎಂಬ ಪ್ರಶ್ನೆಗೆ ಅವರ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗಲ್ಲ ಎಂದರು. ಬೆಂಗಳೂರು ರಾಮೇಶ್ವರಂ ಕೆಫೆಯ ಬಾಂಬ್‌ಬ್ಲಾಸ್ಟ್ ಪ್ರಕರಣ ತನಿಖೆ ನಡೆದಿದೆ. ಇದರ ಹಿಂದೆ ಯಾರ ಕೈವಾಡ ಇದೆ ಎಂದು ತನಿಖೆ ನಂತರವೇ ತಿಳಿಯಬೇಕಿದೆ. ಈ ಹಂತದಲ್ಲಿ ಮಾತನಾಡುವುದು ಸರಿಯಲ್ಲ ಎಂದರು.
ಚರ್ಚೆಗೆ ನಾಂದಿ ಹಾಡಿದ್ದ ಯತೀಂದ್ರ ;
ಇಧೇ ವರ್ಷ ಜನವರಿಯಲ್ಲಿ ಯತೀಂದ್ರ ಸಿದ್ದರಾಮಯ್ಯನವರು, ಲೋಕಸಭೆಯಲ್ಲಿ ಈ ಬಾರಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮಾತ್ರ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು ಮುಂದುವರಿಯುತ್ತಾರೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದ್ದರು. ಜ. 17ರಂದು, ಹೊಳೆನರಸೀಪುರದ ಅಣ್ಣೆಚಾಕನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಉದ್ಘಾಟಿಸಿ ಮಾತನಾಡಿದ್ದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುವ ಮೊದಲೇ ಚುನಾವಣೆಗೂ ಮೊದಲು ಕಾಂಗ್ರೆಸ್ ಹೇಳಿದ್ದ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಾರೆ. ಆದ್ದರಿಂದ ಅವರಿಗೆ ನೈತಿಕ ಬಲ ತುಂಬಬೇಕಿದೆ. ಲೋಕಸಭಾ ಚುನಾವಣೆ ಹತ್ತಿರಕ್ಕೆ ಬರುತ್ತಿರುವುದರಿಂದ ಕಾಂಗ್ರೆಸ್ ಗೆ ಹೆಚ್ಚು ಶಕ್ತಿಯನ್ನು ಜನರು ತರಬೇಕಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿದರೆ ಅವರು ಐದು ವರ್ಷ ಸಿಎಂ ಆಗಿ ಮುಂದುವರಿಯಲಿದ್ದಾರೆ'' ಎಂದು ಹೇಳಿದ್ದರು.
Yathindra Siddaramaiah says father CM Siddaramaiah to continue as cm for the next five years
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm