ಬ್ರೇಕಿಂಗ್ ನ್ಯೂಸ್
05-03-24 07:09 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.5: ರಾಮೇಶ್ವರ ಕೆಫೆ ಸ್ಫೋಟ ಘಟನೆಯ ತನಿಖೆ ಸವಾಲಾಗಿರುವಾಗಲೇ ರಾಜ್ಯದಲ್ಲಿ ಮತ್ತಷ್ಟು ಬಾಂಬ್ ಸ್ಫೋಟಿಸುವುದಾಗಿ ರಾಜ್ಯ ಸರಕಾರಕ್ಕೆ ಬೆದರಿಕೆ ಇಮೇಲ್ ಬಂದಿದೆ. ಕರ್ನಾಟಕ ಮುಖ್ಯಮಂತ್ರಿ, ಡಿಸಿಎಂ, ಗೃಹ ಸಚಿವ ಮತ್ತು ಬೆಂಗಳೂರು ಪೊಲೀಸ್ ಕಮಿಷನರ್ ಅವರ ಕಚೇರಿಗೆ ಇಮೇಲ್ ಬೆದರಿಕೆ ಬಂದಿರುವುದಾಗಿ ತಿಳಿದುಬಂದಿದೆ.
ಮಾರ್ಚ್ 2ರಂದು ಈ ರೀತಿಯ ಇ-ಮೇಲ್ ಸಂದೇಶ ಬಂದಿದ್ದು, ಮಾರ್ಚ್ 5ರಂದು ವಿಚಾರ ಹೊರಬಂದಿದೆ. ವೈಟ್ ಫೀಲ್ಡ್ ನಲ್ಲಿ ಬಾಂಬ್ ಸ್ಫೋಟದ ಮರುದಿನವೇ ಬೆದರಿಕೆ ಸಂದೇಶ ಬಂದಿದ್ದರೂ ರಾಜ್ಯ ಸರಕಾರ ಅದನ್ನು ಮುಚ್ಚಿಟ್ಟಿತ್ತೇ ಎಂಬ ಪ್ರಶ್ನೆ ಎದುರಾಗಿದೆ. ಇಮೇಲ್ ಬೆದರಿಕೆ ಬಗ್ಗೆ ಸೈಬರ್ ಕ್ರೈಮ್ ಪೊಲೀಸರು ಸುಮೊಟೋ ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಇಮೇಲ್ ಸಂದೇಶವನ್ನು ಯಾರು ಕಳಿಸಿದ್ದಾರೆಂದು ತಿಳಿಯಲು ತನಿಖೆ ಕೈಗೊಳ್ಳಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ, ಸಾರ್ವಜನಿಕ ಸಾರಿಗೆ, ಕೆಎಸ್ಸಾರ್ಟಿಸಿ ಇತ್ತೀಚೆಗೆ ಬಿಡುಗಡೆ ಮಾಡಿರುವ ಉತ್ಸವ್ ರೀತಿಯ ಐಷಾರಾಮಿ ಬಸ್ಸುಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇಮೇಲ್ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ವಿಶೇಷ ಅಂದ್ರೆ, ಈ ರೀತಿಯ ಬಾಂಬ್ ದಾಳಿಯನ್ನು ತಪ್ಪಿಸಲು 2.5 ಮಿಲಿಯನ್ ಡಾಲರ್ ಮೊತ್ತವನ್ನು ಪಾವತಿ ಮಾಡುವಂತೆ ಇಮೇಲ್ ಸಂದೇಶ ಹಾಕಿದಾತ ಡಿಮ್ಯಾಂಡ್ ಇಟ್ಟಿದ್ದಾನೆ. ಅಲ್ಲದೆ, ಮುಂದಿನ ದಾಳಿಯ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಲಿದ್ದು, ಸೋಶಿಯಲ್ ಮೀಡಿಯಾದಲ್ಲಿ ನಿರೀಕ್ಷೆಯಲ್ಲಿರುವಂತೆ ಹೇಳಿದ್ದಾನೆ.
ಪೊಲೀಸರು ತನಿಖೆ ನಡೆಸಿದ್ದು, ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ಹೇಳಿದ್ದಾರೆ. ಆದರೆ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟು ಎರಡೇ ದಿನದಲ್ಲಿ ಈ ರೀತಿ ಬೆದರಿಕೆ ಬಂದಿರುವುದು ಸಂಚಲನ ಮೂಡಿಸಿದೆ. ಕೆಫೆ ಹೊಟೇಲಿನಲ್ಲಿ ಬಾಂಬ್ ಇಟ್ಟು ಹೋಗಿರುವಾತನಿಗೆ ಉಗ್ರವಾದಿಗಳ ಕೈವಾಡ ಇದ್ದಿರಬಹುದು ಎಂದು ಈಗಾಗಲೇ ತನಿಖಾ ತಂಡಗಳು ಅಂದಾಜಿಸಿದ್ದು, ಆ ನಿಟ್ಟಿನಲ್ಲಿ ತನಿಖೆ ಕೈಗೊಂಡಿದೆ. ಅದರ ನಡುವಲ್ಲೇ ಅನಾಮಧೇಯ ಇಮೇಲ್ ನಲ್ಲಿ ಮತ್ತಷ್ಟು ಬಾಂಬ್ ಹಾಕುವುದಾಗಿ ರಾಜ್ಯ ಸರಕಾರಕ್ಕೆ ಸವಾಲೊಡ್ಡುವ ರೀತಿ ಬೆದರಿಸಲಾಗಿದೆ.
The Karnataka chief minister, deputy chief minister, home minister and Bengaluru city police commissioner received threat emails on March 2, warning of more attacks. This comes close on the heels of the low-intensity blast at The Rameshwaram Cafe in Brookfield in east Bengaluru on March 1, which left nine injured.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm