ಬ್ರೇಕಿಂಗ್ ನ್ಯೂಸ್
05-03-24 07:11 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.05: ರಾಜ್ಯ ಕಾಂಗ್ರೆಸ್ ಸರಕಾರ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೇವೇಗೌಡ ಅವರು ಕಟುವಾಗಿ ಟೀಕಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಕಡೆ ಗ್ಯಾರಂಟಿ ಕೊಟ್ಟಿದ್ದೇವೆ, ಸಾಧನೆ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡು ಓಡಾಡುತ್ತಿದ್ದಾರೆ. ರಾಜ್ಯದಲ್ಲಿ 692 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಸಿದ್ದರಾಮಯ್ಯ ಸಾಧನೆಯ ಕಿರುನೋಟ ಎಂದು ಕಿಡಿಕಾರಿದರು.
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಕಾವೇರಿ ನೀರಿಗಾಗಿ ಹೋರಾಟ ನಡೆಸಿ ಹೇಮಾವತಿ, ಕಬಿನಿ, ಹಾರಂಗಿ ಅಣೆಕಟ್ಟು ಕಟ್ಟಿಸಿದವನು ನಿಮ್ಮ ಮುಂದೆ ಕೂತಿದ್ದೇನೆ. ಹೇಮಾವತಿಯಲ್ಲಿ ನೀರಿದೆ. ಅಲ್ಲಿನ ಹಳ್ಳಿಗಳಿಗೂ ಆ ನೀರು ಕೊಡಿ, ಬೆಂಗಳೂರಿಗೂ ನೀರು ಕೊಡಿ. ಕೆಆರ್‌ಎಸ್‌ನಲ್ಲಿ 90 ಅಡಿಗೆ ಬಂದಿದೆ. ಹೇಮಾವತಿಯಲ್ಲಿ 23 ಟಿಎಂಸಿ ನೀರಿದೆ. ಜನರಿಗೆ ಕೊಡಲು ನಿಮಗೆ ಸಮಸ್ಯೆ ಏನು? ಜನರು ನೀರಿಗಾಗಿ ಕಣ್ಣೀರು ಹಾಕುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಕಳವಳ ವ್ಯಕ್ತಪಡಿಸಿದರು.
ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ನೀರಿನ ಸಮಸ್ಯೆ ಉಲ್ಬಣವಾಗಿದೆ. ಹಾಲಿನ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಮಾರ್ಚ್ 7ರ ಒಳಗೆ ನೋಂದಣಿ ಮಾಡಿಕೊಳ್ಳದ ಟ್ಯಾಂಕರ್‌ಗಳನ್ನು ವಶಕ್ಕೆ ಪಡೆಯುತ್ತೇವೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ ಎಂದು ದಿನಪತ್ರಿಕೆಗಳ ಸುದ್ದಿ ತುಣುಕುಗಳನ್ನು ತೋರಿಸುತ್ತಾ ಸರಕಾರದ ಮೇಲೆ ಮಾಜಿ ಪ್ರಧಾನಿಗಳು ಪ್ರಹಾರ ನಡೆಸಿದರು.
ಕುಡಿಯುವ ನೀರಿನ ಸಮಸ್ಯೆ ಎಷ್ಟು ದಿನಗಳಿಂದ ಇದೆ. ಇವರೇ ಅಲ್ಲವೇ ಡಿಸಿಎಂ, ನೀರಾವರಿ ಮಂತ್ರಿ. ಒಂದು ಟ್ಯಾಂಕರ್ ನೀರಿಗೆ 2,500 ರಿಂದ 3,000 ರೂ. ಕೊಡಬೇಕು. 10 ತಿಂಗಳಲ್ಲಿ ನೀವು ಎಷ್ಟು ಕಡೆ ಪ್ರವಾಸ ಮಾಡಿದ್ದೀರಾ? 20 ದಿನ ಅಧಿವೇಶನ, ಸಭೆ, ಮಂತ್ರಿಗಳ ಮನೆ ಊಟಕ್ಕೆ 4 ದಿನ ಕಳೆದಿರಿ. ಬಾಕಿ ದಿನ ಏನು ಮಾಡಿದೀರಿ ನೀವು? ಗ್ಯಾರಂಟಿ ಯೋಜನೆ ಉಸ್ತುವಾರಿಗೆ ಮಾಜಿ ಮಂತ್ರಿಗಳ ನೇತೃತ್ವದಲ್ಲಿ ಸಮಿತಿ ಮಾಡಿದ್ದೀರಿ. 95 ಜನರಿಗೆ ಕ್ಯಾಬಿನೆಟ್ ದರ್ಜೆ!! ಆಹಾ.. ಎಂತಹ ಆಡಳಿತ? ಎಂದು ಮಾಜಿ ಪ್ರಧಾನಿಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಇವತ್ತು ವಿಡಿಯೋ ಕಾನ್ಫರೆನ್ಸ್ ಮಾಡ್ತಿದ್ದೀರಾ. ನೀರಿನ ಬಗ್ಗೆ ಇವತ್ತು ಸಭೆ. ಜನ ನೀರು ಕುಡಿಯುತ್ತಿದ್ದಾರಾ ಅಂತ ಸಭೆ. ಗೌರವಾನ್ವಿತ ಸಿಎಂ, ಕಾಂಗ್ರೆಸ್ ಅಧ್ಯಕ್ಷರು ಸಭೆ ಮಾಡುತ್ತಿದ್ದಾರೆ. ನಾನು ಕೂಗಿದರೇ ಮಂಡ್ಯ, ಹಾಸನ ಅಲ್ಲ. ಚಿಕ್ಕಮಗಳೂರುವರೆಗೂ ಕೇಳಬೇಕು.. ಕೂಗಿ ಅಂದರು. ನಾಚಿಕೆ ಆಗೊಲ್ಲವಾ? ಎಂದು ದೇವೇಗೌಡರು ಕಿಡಿಕಾರಿದರು.
ಎತ್ತಿನಹೊಳೆ ಯೋಜನೆಯನ್ನು ಯಾರು ಮಂಜೂರು ಮಾಡಿದ್ದು ?
ಎತ್ತಿನಹೊಳೆ ಯೋಜನೆಯನ್ನು ಯಾರು ಮಂಜೂರು ಮಾಡಿದ್ದು? ಈ ಯೋಜನೆಗೆ ಅನುಮತಿ ಕೊಟ್ಟಿದ್ದು ಜಗದೀಶ್ ಶೆಟ್ಟರ್. ಇದರಲ್ಲಿ ನಿಮ್ಮ ಪಾತ್ರ ಏನು? ಕುಮಾರಸ್ವಾಮಿ ವಿರೋಧ ಮಾಡ್ತಾರೆ ಅಂತೀರಾ. ಅವರ ಬಗ್ಗೆ ಮಾತಾಡೋಕೆ ನಿಮಗೆ ಏನಿದೆ ನೈತಿಕತೆ? ನಿಮ್ಮ ಪಾತ್ರ ಎತ್ತಿನಹೊಳೆ ಯೋಜನೆಯಲ್ಲಿ ಏನು? ಎಂದು ದೇವೇಗೌಡರು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಯೋಜನೆ ಮಾಡಿದ್ದು. ಆದರೆ, ಅರಸೀಕೆರೆಗೆ ನೀರು ಕೊಡಲು ನಮಗೆ ವಿರೋಧ ಇಲ್ಲ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಹೇಮಾವತಿಯಿಂದ ಅರಸಿಕೆರೆಗೆ ನೀರು ಕೊಟ್ಟಿದ್ದರು. ಆ ವಿಷಯವನ್ನು ಈಗ ಹೇಳಲಿ ನೋಡೋಣ. ಹೇಳಲಿ ಯೋಗ್ಯತೆ ಇದ್ದರೆ ಎಂದು ಹಾಸನದಲ್ಲಿ ಕುಮಾರಸ್ವಾಮಿ ಅವರ ವಿರುದ್ಧ ಭಾಷಣದ ಮಾಡಿದ ನಾಯಕರಿಗೆ ಎಚ್‌ಡಿ ದೇವೇಗೌಡರು ತಿರುಗೇಟು ನೀಡಿದರು.
HD deve Gowda slams CM siddaramaiah over drought in Karnataka, 692 farmers commit suicide. The state government under the leadership of siddaramai as failed over crisis of drought. People in Bangalore suffering for water he added.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm