ಬ್ರೇಕಿಂಗ್ ನ್ಯೂಸ್
06-03-24 04:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.6: ರಾಮೇಶ್ವರ ಕೆಫೆ ಸ್ಫೋಟ ಕೃತ್ಯದ ತನಿಖೆ ಕೈಗೆತ್ತಿಕೊಂಡ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಆರೋಪಿಯ ಸಿಸಿಟಿವಿ ಚಿತ್ರವನ್ನು ಮುಂದಿಟ್ಟು ಆತನ ಪತ್ತೆಗಾಗಿ ಹತ್ತು ಲಕ್ಷದ ಬಹುಮಾನ ಪ್ರಕಟಿಸಿದ್ದಾರೆ.
ಆರೋಪಿ ಬಗ್ಗೆ ಮಾಹಿತಿ ಕೊಟ್ಟವರಿಗೆ ಹತ್ತು ಲಕ್ಷ ನೀಡಲಾಗುವುದು. ಸುಳಿವು ಕೊಟ್ಟವರ ಬಗ್ಗೆ ಮಾಹಿತಿ ಗೌಪ್ಯವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ಬೆಂಗಳೂರು ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ. ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ ಹಾಕ್ಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುವ ಚಿತ್ರವನ್ನು ಪ್ರಕಟಣೆಯಲ್ಲಿ ನೀಡಲಾಗಿದೆ. ಆಮೂಲಕ ಎನ್ಐಎ ಅಧಿಕಾರಿಗಳು ಅಧಿಕೃತವಾಗಿ ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ತನಿಖೆಗೆ ಮುಂದಾಗಿದ್ದಾರೆ.

ರಾಮೇಶ್ವರ ಕೆಫೆ ಹೊಟೇಲಿನಲ್ಲಿ ಮಾ.1ರಂದು ಮಧ್ಯಾಹ್ನ ಆಗಂತುಕನೊಬ್ಬ ಬಿಟ್ಟು ಹೋಗಿದ್ದ ಬ್ಯಾಗ್ ನಲ್ಲಿದ್ದ ಸ್ಫೋಟಕ ಟೈಮರ್ ಆಧರಿಸಿ ಸಿಡಿದು ಸ್ಫೋಟಗೊಂಡಿತ್ತು. ಘಟನೆಯಲ್ಲಿ ಹೊಟೇಲ್ ಸಿಬಂದಿ ಸೇರಿ 9 ಮಂದಿ ಗಾಯಗೊಂಡಿದ್ದಾರೆ. ಹೊಟೇಲ್ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಆರೋಪಿ ಯುವಕ ಬ್ಯಾಗನ್ನು ಬೇಸಿನ್ ಪಕ್ಕದಲ್ಲಿ ಬಿಟ್ಟು ಹೋಗಿರುವುದು ಮತ್ತು ಅದರಲ್ಲಿ ಸ್ಫೋಟಕ ಸಾಮಗ್ರಿ ಬ್ಲಾಸ್ಟ್ ಆಗಿರುವುದು ಕಂಡುಬಂದಿತ್ತು. ಪೊಲೀಸರು ಆಸುಪಾಸಿನ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದಾಗ, ಯುವಕ ಬಿಎಂಟಿಸಿ ಬಸ್ಸಿನಲ್ಲೇ ಬಂದು ಹೋಗಿರುವುದು ದಾಖಲಾಗಿತ್ತು. ಘಟನೆ ಹಿಂದೆ ಭಯೋತ್ಪಾದಕ ಕೃತ್ಯದ ಬಗ್ಗೆ ಶಂಕೆಯಿದ್ದು, ಪೊಲೀಸರು ಹತ್ತು ತಂಡ ಕಟ್ಟಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ ಈತನಕವೂ ತನಿಖಾ ತಂಡಕ್ಕೆ ಯಾವುದೇ ಮಾಹಿತಿಯೂ ಸಿಕ್ಕಿಲ್ಲ.
ಈ ಹಿಂದೆ ಸುಳ್ಯದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿಯೂ ತಲೆಮರೆಸಿಕೊಂಡ ಆರೋಪಿಗಳ ಪತ್ತೆಗಾಗಿ ಎನ್ಐಎ ಅಧಿಕಾರಿಗಳು ಬಹುಮಾನ ಘೋಷಣೆ ಮಾಡಿದ್ದರು. ಇಬ್ಬರಿಗೆ ತಲಾ 5 ಲಕ್ಷ, ಉಳಿದವರಿಗೆ ತಲಾ ಎರಡೂವರೆ ಲಕ್ಷದ ಬಹುಮಾನ ಪ್ರಕಟಿಸಲಾಗಿತ್ತು. ತಲೆಮರೆಸಿಕೊಂಡ ಐದು ಮಂದಿಯಲ್ಲಿ ಇಬ್ಬರು ಇನ್ನೂ ಅಧಿಕಾರಿಗಳ ಕೈಗೆ ಸಿಕ್ಕಿಲ್ಲ.
A day after taking over the probe into the Rameswaram café blast case, the National Investigation Agency (NIA) has released a cctv footage of the accused and announced a reward of Rs 10 lakh for his arrest.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm