ಬ್ರೇಕಿಂಗ್ ನ್ಯೂಸ್
07-03-24 09:27 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.7: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ರಾಜ್ಯ ಮಟ್ಟದಲ್ಲಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿ ಹಿಡಿದಿದೆ. ಇದರಂತೆ, ಮಾ.11ರಿಂದ ನಿಗದಿಯಂತೆ ರಾಜ್ಯಾದ್ಯಂತ ಪಬ್ಲಿಕ್ ಪರೀಕ್ಷೆಗಳು ನಡೆಯಲಿವೆ.
ನಿನ್ನೆಯಷ್ಟೇ ಶಾಲಾ ಮಟ್ಟದಲ್ಲಿ ಬೋರ್ಡ್ ಪರೀಕ್ಷೆ ನಡೆಸುವುದನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿ ಆದೇಶ ಹೊರಡಿಸಿದ್ದು ಭಾರೀ ಸಂಚಲನ ಮೂಡಿಸಿತ್ತು. ಆದರೆ ಈ ಕುರಿತು ರಾಜ್ಯ ಸರ್ಕಾರ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಮಾಡಿತ್ತು. ವಿಚಾರಣೆ ನಡೆಸಿದ ವಿಭಾಗೀಯ ಪೀಠವು ಏಕದಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿದ್ದಲ್ಲದೆ, ನಿಗದಿಯಂತೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.
![]()
ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ 2023ರ ಅ.6 ಮತ್ತು 9ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಆದರೆ ಈ ಸುತ್ತೋಲೆಯನ್ನು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ’ (ರುಪ್ಸಾ) ಹಾಗೂ ‘ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ’ (ಅವರ್ ಸ್ಕೂಲ್ಸ್) ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರವಿ ವಿ ಹೊಸಮನಿ ಅವರ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ಸುತ್ತೋಲೆಯನ್ನು ರದ್ದುಪಡಿಸಿ ಮಹತ್ವದ ತೀರ್ಪು ನೀಡಿತ್ತು.
ಹೈಕೋರ್ಟ್ ಆದೇಶ ಮತ್ತು ರಾಜ್ಯ ಸರ್ಕಾರ ಹಾಗೂ ಶಾಲಾ ಆಡಳಿತ ಪರ ಸಂಘಟನೆಗಳ ಹಗ್ಗಜಗ್ಗಾಟದಿಂದ ಈ ವರ್ಷವೂ ವಿದ್ಯಾರ್ಥಿಗಳು ಗೊಂದಲಕ್ಕೆ ಸಿಲುಕುವಂತಾಗಿತ್ತು. ಆದರೆ ಪರೀಕ್ಷೆಗೆ ಮೂರು ದಿನ ಇರುವಂತೆ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಗೊಂದಲಕ್ಕೆ ತೆರೆ ಎಳೆದಿದೆ. ಮಾ.11ರಿಂದ 5, 8, 9, 11ನೇ ತರಗತಿಗಳ ಪರೀಕ್ಷೆಗಳು ಆರಂಭಗೊಳ್ಳಲಿದೆ.
ಕಳೆದ ವರ್ಷವೂ 5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆಗೆ ನಿಗದಿಪಡಿಸಿ ‘ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು (ಆರ್‌ಟಿಇ) ಕಾಯ್ದೆ-2009ರಡಿ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಆ ಅಧಿಸೂಚನೆಯನ್ನೂ ರುಪ್ಸಾ ಹಾಗೂ ಅವರ್ ಸ್ಕೂಲ್ಸ್ ಸಂಘಟನೆಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು. ಅಧಿಸೂಚನೆಯನ್ನು 2023ರ ಫೆಬ್ರವರಿಯಲ್ಲಿ ನ್ಯಾ. ಪ್ರದೀಪ್‌ಸಿಂಗ್ ಯೆರೂರ್ ಅವರ ನ್ಯಾಯಪೀಠ ರದ್ದುಪಡಿಸಿತ್ತು. ಅದನ್ನು ಪ್ರಶ್ನಿಸಿ ಸರ್ಕಾರದ ಕಡೆಯಿಂದ ಮೇಲ್ಮನವಿ ಸಲ್ಲಿಸಲಾಗಿತ್ತು. ಆಗ ಪರೀಕ್ಷೆಗೆ ಎರಡು-ಮೂರು ದಿನಗಳಷ್ಟೇ ಇದ್ದ ಕಾರಣ ಪರೀಕ್ಷೆ ನಡೆಯಲಿ. ಆದರೆ, ಫಲಿತಾಂಶ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ವಿಭಾಗೀಯ ನ್ಯಾಯಪೀಠ ಹೇಳಿತ್ತು. ಆನಂತರ, ರಾಜ್ಯ ಸರ್ಕಾರ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಫೈಲ್ ಮಾಡುವ ಉದ್ದೇಶ ಇಲ್ಲ. ಪಬ್ಲಿಕ್ ಪರೀಕ್ಷೆಯ ಮಹತ್ವ ತಿಳಿಯಪಡಿಸುವುದು ಮತ್ತು ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿಗೊಳಿಸುವುದು ಉದ್ದೇಶ ಎಂದು ಹೇಳಿತ್ತು.
A division bench of the high court upheld the state government's circular to conduct board exams at the state level for classes 5, 8, 9 and 1st PUC of government, aided and unaided schools of the state syllabus. Accordingly, public examinations will be held across the state as scheduled from March 11.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm