ಬ್ರೇಕಿಂಗ್ ನ್ಯೂಸ್
08-03-24 04:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 08: ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸಂಭವಿಸಿದ ಸ್ಫೋಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶಂಕಿತ ಆರೋಪಿ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
26 ವರ್ಷದ ಬಳ್ಳಾರಿ ನಗರದ ಕೌಲ್ ಬಜಾರ್ ನಿವಾಸಿ ಮಿನಾಜ್, ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತ ಎಂದು ತಿಳಿದು ಬಂದಿದ್ದು, ಇಸ್ಲಾಮಿಕ್ ಸ್ಟೇಟ್ (ಐಎಸ್) ಉಗ್ರರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ. ಈತ ಬೆಂಗಳೂರು ಸೇರಿದಂತೆ ದೇಶದಲ್ಲಿ ಭಯೋತ್ಪಾದನಾ ಕೃತ್ಯ ನಡೆಸಲು ಸಂಚು ರೂಪಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ಈ ಹಿಂದೆ 2023ರ ಡಿಸೆಂಬರ್ 18ರಂದು ಮಿನಾಜ್‌ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಈತನನ್ನು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ ಎಂದು ಎನ್‌ಐಎ ಮೂಲಗಳು ಹೇಳಿವೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕುರಿತು ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದ್ದ ಎನ್‌ಐಎ ಅಧಿಕಾರಿಗಳು, ಮಿನಾಜ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಜೈಲಿಗೆ ಭೇಟಿ ನೀಡಿ ಪರಿಶೀಲಿಸಿದ ಸಂದರ್ಭದಲ್ಲಿ ಲಭ್ಯವಾದ ಮಾಹಿತಿ ಆಧಾರದಲ್ಲಿ, ಮಿನಾಜ್‌ನನ್ನು ಬಾಡಿ ವಾರಂಟ್ ಮೂಲಕ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಎನ್‌ಐಎ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಮಿನಾಜ್‌ನನ್ನು ಮಾರ್ಚ್ 9ರವರೆಗೆ ಕಸ್ಟಡಿಗೆ ಒಪ್ಪಿಸಿದೆ. ಮಾರ್ಚ್ 6 ಬುಧವಾರದಂದೇ ಮಿನಾಜ್‌ನನ್ನು ಕಸ್ಟಡಿಗೆ ಪಡೆದಿರುವ ಎನ್‌ಐಎ ಅಧಿಕಾರಿಗಳು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ.
ಸ್ಫೋಟದಲ್ಲಿ ಈತನ ಪಾತ್ರವೇನು ಬಾಂಬ್ ಇಟ್ಟವನಿಗೂ ಈತನಿಗೂ ಸಂಬಂಧ ಇರಬಹುದೇ ಎನ್ನುವುದು ವಿಚಾರಣೆಯಿಂದ ಗೊತ್ತಾಗಬೇಕಷ್ಟೆ.
ಕೆಫೆಯಲ್ಲಿ ಬಾಂಬ್ ಇರಿಸಿದ್ದ ಶಂಕಿತ, ಬೆಂಗಳೂರಿನಿಂದ ಬಸ್‌ನಲ್ಲಿ ತುಮಕೂರು, ಬಳ್ಳಾರಿ ಸೇರಿದಂತೆ ಹಲವು ನಗರಗಳಲ್ಲಿ ಸುತ್ತಾಡಿದ್ದಾನೆ. ಉದ್ದೇಶಪೂರ್ವಕವಾಗಿ ಗೊಂದಲ ಮೂಡಿಸಲೆಂದೇ ಈತ ಈ ರೀತಿ ಮಾಡಿದ್ದಾನೆ. ಈತನ ಬಗ್ಗೆಯೂ ಸುಳಿವು ಸಿಕ್ಕಿದ್ದು ತನಿಖೆಯನ್ನು ಚುರುಕುಗೊಳಿಸಲಾಗಿದೆ.
ಮಿನಾಜ್ ಯಾರು
ಶಂಕಿತ ಉಗ್ರ ಮಿನಾಜ್, ಬಳ್ಳಾರಿ ಕೌಲ್‌ಬಜಾರ್‌ನಲ್ಲಿ ಬಟ್ಟೆ ಮಾರಾಟ ಮಳಿಗೆ ನಡೆಸುತ್ತಿದ್ದಾನೆ. ಐಎಸ್ ಮುಖ್ಯಸ್ಥರ ಜೊತೆ ಸಂಪರ್ಕ ಹೊಂದಿದ್ದ ಈತ, ದೇಶದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ. ಧರ್ಮದ ಹೆಸರಿನಲ್ಲಿ ಯುವಕರನ್ನು ಭಯೋತ್ಪಾದನಾ ಕೃತ್ಯಕ್ಕೆ ಪ್ರಚೋದಿಸುತ್ತಿದ್ದ. ವಿಶೇಷವಾಗಿ ಯುವಕರು ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಳ್ಳುತ್ತಿದ್ದ.
ಮಿನಾಜ್ ಐಎಸ್ ಬಳ್ಳಾರಿ ಘಟಕದ ಮುಖ್ಯಸ್ಥನಾಗಿದ್ದ. ಈತ ಕಚ್ಚಾ ಬಾಂಬ್ ತಯಾರಿಸುವ ಬಗ್ಗೆ ತರಬೇತಿ ಪಡೆದಿದ್ದ ಮತ್ತು ಭಯೋತ್ಪಾದನಾ ಕೃತ್ಯ ಎಸಗಲು ಯುವಕರನ್ನು ಪ್ರಚೋದಿಸುತ್ತಿದ್ದ ಎಂಬ ಸುಳಿವು ಲಭ್ಯವಾಗಿದೆ. ಈ ಹಿಂದೆ 2023ರ ಡಿಸೆಂಬರ್ 18ರಂದು ಕರ್ನಾಟಕ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ದೆಹಲಿಯ 19 ಸ್ಥಳಗಳಲ್ಲಿ ಉಗ್ರರ ದಾಳಿ ನಡೆದಿತ್ತು. ಆಗ ಮಿನಾಜ್ ಸೇರಿ 8 ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು.
ಈ ಉಗ್ರರು ಕಚ್ಚಾ ಬಾಂಬ್ (ಐಇಡಿ) ತಯಾರಿಸಲು ಸಲ್ಫರ್, ಪೊಟ್ಯಾಶಿಯಂ ನೈಟ್ರೇಟ್, ಗನ್ ಪೌಡರ್, ಇದ್ದಿಲು, ಎಥೆನಾಲ್, ಎಲೆಕ್ಟ್ರಾನಿಕ್ ಉಪಕರಣಗಳು, ಸ್ಮಾರ್ಟ್ ವಾಚ್‌ಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರು. ಇದೇ ರೀತಿಯ ಸಾಮಗ್ರಿಗಳನ್ನು ಬಳಸಿ ಬಾಂಬ್ ತಯಾರಿಸಿ ರಾಮೇಶ್ವರಂ ಕೆಫೆಯಲ್ಲಿ ಇರಿಸಿರಬಹುದು ಎಂದು ಎನ್‌ಐಎ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. 10 ಸಂಖ್ಯೆ ಬರೆದಿದ್ದ ಕ್ಯಾಪ್ ಅನ್ನು ಶಂಕಿತ ಆರೋಪಿ ಧರಿಸಿದ್ದ. 10 ಸಂಖ್ಯೆ ಏನನ್ನು ಸೂಚಿಸುತ್ತದೆ ಎಂಬುದನ್ನು ತನಿಖಾ ಸಂಸ್ಥೆಗಳು ಪತ್ತೆ ಮಾಡುತ್ತಿವೆ.
Bangalore Rameshwaram Cafe blast Jailed terror suspect from Ballari taken by NIA for custody. Officials obtained a body warrant from the NIA special court to arrest Minhaj alias Mohammed Sulaiman, 26, a cloth merchant from Ballari who was originally arrested on December 18, 2023.
28-08-25 06:23 pm
HK News Desk
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:00 pm
Mangalore Correspondent
Mangalore Rain, School College Holiday: ಭಾರೀ...
28-08-25 10:07 pm
Soujanya Murder Case, Mother SIT: ಸೌಜನ್ಯಾ ಕೊಲ...
28-08-25 08:31 pm
Talapady Accident, Mangalore, Auto bus: ಕೇರಳ...
28-08-25 04:05 pm
Loudspeaker, Punjalkatte,Farangipete: ಪುಂಜಾಲ...
28-08-25 02:51 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm