ಬ್ರೇಕಿಂಗ್ ನ್ಯೂಸ್
08-03-24 08:28 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.8: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಮೊದಲ ಪಟ್ಟಿಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡಿನಲ್ಲಿ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ತಿರುವನಂತಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಶಶಿ ತರೂರ್ ನಾಲ್ಕನೇ ಬಾರಿಗೆ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ ತರೂರ್ ಮೂರು ಬಾರಿ ಗೆಲುವು ಕಂಡಿದ್ದಾರೆ.
ಮೊದಲ ಪಟ್ಟಿಯಲ್ಲಿ ಕರ್ನಾಟಕದ ಏಳು ಕ್ಷೇತ್ರ ಹಾಗೂ ಕೇರಳದ 16 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ. ಶಿವಮೊಗ್ಗ ಕ್ಷೇತ್ರದಿಂದ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಹಾಲಿ ಸಂಸದ ಡಿಕೆ ಸುರೇಶ್, ಮಂಡ್ಯ ಕ್ಷೇತ್ರದಿಂದ ಉದ್ಯಮಿ ವೆಂಕಟರಮಣೇ ಗೌಡ(ಸ್ಟಾರ್ ಚಂದ್ರು), ತುಮಕೂರಿನಿಂದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಹಾಸನದಿಂದ ಶ್ರೇಯಸ್ ಪಟೇಲ್, ಹಾವೇರಿಯಿಂದ ಆನಂದಸ್ವಾಮಿ ಗಡದೇವರಮಠ, ಬಿಜಾಪುರ ಎಸ್ಸಿ ಮೀಸಲು ಕ್ಷೇತ್ರದಿಂದ ಎಚ್.ಆರ್ ಹಲಗೂರ ಅವರಿಗೆ ಟಿಕೆಟ್ ನೀಡಲಾಗಿದೆ.

ಕೇರಳದ ಕಾಸರಗೋಡು ಕ್ಷೇತ್ರದಿಂದ ರಾಜಮೋಹನ್ ಉಣ್ಣಿತ್ತಾನ್, ಆಲಪ್ಪುಝ ಕ್ಷೇತ್ರದಿಂದ ಎಐಸಿಸಿ ಸೆಕ್ರಟರಿ ವೇಣುಗೋಪಾಲ್, ತೃಶ್ಶೂರಿನಿಂದ ಕೆ.ಮುರಲೀಧರನ್, ಕಣ್ಣೂರಿನಿಂದ ಸುಧಾಕರನ್ ಸೇರಿದಂತೆ 16 ಮಂದಿಗೆ ಟಿಕೆಟ್ ಘೋಷಿಸಲಾಗಿದೆ. ಮೊನ್ನೆ ಬಿಜೆಪಿಯಿಂದ ಮೊದಲ ಪಟ್ಟಿಯಲ್ಲಿ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಎರಡನೇ ಪಟ್ಟಿ ಮಾ.8 ಅಥವಾ 9ರಂದು ಪ್ರಕಟವಾಗಲಿದೆ ಎನ್ನಲಾಗುತ್ತಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಬಹುತೇಕ ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಪ್ರಕಟವಾಗಲಿದೆ.
The Congress party has announced its first list of 39 candidates on Friday, March 8 for the upcoming Lok Sabha elections and seven names from Karnataka have been announced. The names of DK Suresh, the lone Congress candidate to win in 2019 and Geeta Shivarajkumar, wife of Kannada veteran actor Shivaraj Kumar, also feature in the list. Congress’s list comes almost a week after the Bharatiya Janata Party (BJP) released its first list of candidates for the elections.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm