ಬ್ರೇಕಿಂಗ್ ನ್ಯೂಸ್
09-03-24 06:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.09: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದ ಶಂಕಿತನ ಹೊಸ ಫೋಟೋಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಿಡುಗಡೆ ಮಾಡಿದೆ.
ಮಾರ್ಚ್ 3ರಂದು ಪ್ರಕರಣದ ತನಿಖೆ ವಹಿಸಿಕೊಂಡಿರುವ ಎನ್‌ಐಎ, ಶಂಕಿತ ಓಡಾಡಿರುವ ಕೆಲವು ಭಾಗಗಳ ಸಿಸಿಟಿವಿ ಕ್ಯಾಮೆರಾ ವಿಡಿಯೋಗಳನ್ನು ಬಿಡುಗಡೆ ಮಾಡಿತ್ತು. ಈಗ ಅವುಗಳಲ್ಲಿ ಬಹುತೇಕ ಸ್ಪಷ್ಟವಾಗಿ ಗೋಚರಿಸುವ ಶಂಕಿತನ ಕೆಲವು ಚಿತ್ರಗಳನ್ನು ಬಿಡುಗಡೆ ಮಾಡಿದೆ
ಮಾರ್ಚ್ 1ರಂದು ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇರಿಸಿದ್ದವನು ಎಂದು ನಂಬಲಾದ ಶಂಕಿತನನ್ನು ಪತ್ತೆ ಮಾಡಲು ಸಹಾಯ ಮಾಡುವಂತೆ ಸಾರ್ವಜನಿಕರನ್ನು ಎನ್‌ಐಎ ಕೋರಿದೆ.
ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಅಂದಾಜು ಒಂದು ಗಂಟೆ ಬಳಿಕ ಪ್ರಮುಖ ಶಂಕಿತ ಉಗ್ರ ಬಿಎಂಟಿಸಿ ಬಸ್ ಒಂದನ್ನು ಹತ್ತುವುದು ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿತ್ತು. ಸ್ಫೋಟವು ಮಾರ್ಚ್ 1ರಂದು ಮಧ್ಯಾಹ್ನ 12.56ಕ್ಕೆ ಸಂಭವಿಸಿದ್ದರೆ, ಅದೇ ದಿನ ಮಧ್ಯಾಹ್ನ 2.03ಕ್ಕೆ ಆತ ಬಿಎಂಟಿಸಿ ಬಸ್ ಹತ್ತುವುದು ಕಾಣಿಸಿದೆ. ಟಿ- ಶರ್ಟ್, ಟೊಪ್ಪಿ, ಮುಖಕ್ಕೆ ಮಾಸ್ಕ್ ಧರಿಸಿದ್ದ ಶಂಕಿತ, ಕೆಫೆಯಲ್ಲಿ ಐಇಡಿ ತುಂಬಿಸಿದ್ದ ಬ್ಯಾಗ್ ಇರಿಸಿ ಹೋಗುವುದು ಸಹ ಮತ್ತೊಂದು ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಅದೇ ದಿನ ರಾತ್ರಿ 9 ಗಂಟೆಗೆ ಬಸ್ ನಿಲ್ದಾಣವೊಂದರ ಒಳಗೆ ಶಂಕಿತ ಅಡ್ಡಾಡುವುದು ಇನ್ನೊಂದು ವಿಡಿಯೋದಲ್ಲಿ ದಾಖಲಾಗಿದೆ. ಈ ವೇಳೆ ಮಾಸ್ಕ್ ತೆಗೆದಿರುವ ಶಂಕಿತನನ್ನು ಸಹ ಪ್ರಯಾಣಿಕರು ಅಥವಾ ಇತರರು ಕಂಡಿರುವ ಸಾಧ್ಯತೆ ಇದೆ. ಆತನ ಗುರುತು ಪತ್ತೆ ಮಾಡಲು ಮತ್ತು ಬಂಧನಕ್ಕೆ ಸಹಾಯವಾಗುವ ಮಾಹಿತಿ ನೀಡುವವರಿಗೆ 10 ಲಕ್ಷ ರೂ ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ. ಮಾಹಿತಿ ಕೊಟ್ಟವರ ವಿವರ ಗೋಪ್ಯವಾಗಿ ಇರಿಸುವುದಾಗಿ ಸಹ ತಿಳಿಸಿದೆ.


ಬೆಂಗಳೂರು ಪೊಲೀಸರ ಕೇಂದ್ರ ಅಪರಾಧ ದಳವು ತನಿಖೆಯಲ್ಲಿ ಎನ್‌ಐಎ ಜತೆ ಕೈ ಜೋಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್‌ನಲ್ಲಿನ ಬಟ್ಟೆ ವ್ಯಾಪಾರಿ ಹಾಗೂ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ನಂಟು ಹೊಂದಿರುವ ವ್ಯಕ್ತಿಯೊಬ್ಬನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ತನಿಖಾ ತಂಡದ ಪ್ರಕಾರ, ಶಂಕಿತ ಆರೋಪಿಯು ಘಟನೆ ಬಳಿಕ ತನ್ನ ಉಡುಪು ಬದಲಿಸಿಕೊಂಡಿದ್ದು, ವಿಭಿನ್ನ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದಾನೆ. ತುಮಕೂರು, ಬಳ್ಳಾರಿ, ಬೀದರ್ ಮತ್ತು ಭಟ್ಕಳ ಸೇರಿದಂತೆ ಆತ ಹೋಗಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಪದೇ ಪದೇ ಸ್ಥಳ ಬದಲಾವಣೆ ಮಾಡಿದ್ದಾನೆ.
The National Investigation Agency (NIA), which is investigating Bengaluru’s Rameshwaram cafe blast case, has released new pictures of the suspect linked to the crime and sought public cooperation in identifying him. The investigation agency even said the informer's details would be kept secret.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm