ಬ್ರೇಕಿಂಗ್ ನ್ಯೂಸ್
09-03-24 10:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.9: ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ಅಂತಿಮ ಹಂತಕ್ಕೆ ಬಂದಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಭಾನುವಾರ ನವದೆಹಲಿಯಲ್ಲಿ ನಡೆಯಲಿದ್ದು, ಸಭೆಯಲ್ಲಿ ಜೆಡಿಎಸ್ ಸೀಟಿನ ಬಗ್ಗೆ ಮಹತ್ವದ ಚರ್ಚೆಯಾಗಲಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಅಥವಾ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ. ಇದಕ್ಕಾಗಿ ಕುಮಾರಸ್ವಾಮಿ ಭಾನುವಾರವೇ ನವದೆಹಲಿಗೆ ತೆರಳಲಿದ್ದಾರೆ. ಜೆಡಿಎಸ್‌ಗೆ ನಾಲ್ಕು ಕ್ಷೇತ್ರಗಳೆಂಬುದು ಊಹಾಪೋಹ ಮಾತ್ರ. ಜೆಡಿಎಸ್ ಸಿದ್ಧತೆ ಗಮನಿಸಿದರೆ ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರಗಳು ಬಹುತೇಕ ಫಿಕ್ಸ್ ಎಂಬಂತಿದೆ.
ಈಗಾಗಲೇ ಈ ಮೂರು ಕ್ಷೇತ್ರಗಳನ್ನು ಕೇಂದ್ರೀಕರಿಸಿ ಕುಮಾರಸ್ವಾಮಿ ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರ ಸರಣಿ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಿದ್ದಾರೆ. ಹೀಗಾಗಿ ಜೆಡಿಎಸ್‌ಗೆ 3ಕ್ಕಿಂತ ಹೆಚ್ಚು ಸೀಟು ಬಿಟ್ಟುಕೊಡುವ ಸಾಧ್ಯತೆ ಇಲ್ಲ. ಹಾಸನ, ಮಂಡ್ಯ, ಕೋಲಾರ ಬಹುತೇಕ ಖಚಿತವಾಗಿದೆ. ಕುತೂಹಲ ಕೆರಳಿಸಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್. ಮಂಜನಾಥ್ ಅವರನ್ನು ಬಿಜೆಪಿಯಿಂದಲೇ ಕಣಕ್ಕಿಳಿಸಲು ವರಿಷ್ಠರು ಮುಂದಾಗಿದ್ದಾರೆ. ಜೆಡಿಎಸ್‌ನಲ್ಲೂ ಇದಕ್ಕೆ ಸಮ್ಮತಿ ಇದ್ದು ತಮ್ಮದೇ ಒಬ್ಬರು ಬಿಜೆಪಿಯಲ್ಲಿ ನಿಲ್ಲುವ ಮೂಲಕ ಮತ್ತೊಂದು ಕ್ಷೇತ್ರ ಸಿಕ್ಕಂತೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರು ದೆಹಲಿ ಮೀಟಿಂಗಲ್ಲೂ ಮೂರಕ್ಕಿಂತ ಹೆಚ್ಚು ಸೀಟಿಗಾಗಿ ಚೌಕಾಶಿ ಮಾಡುವುದು ಡೌಟು ಎನ್ನಲಾಗುತ್ತಿದೆ.
The BJP-JD(S) seat-sharing talks for the Lok Sabha elections are in the final stages. The BJP central election committee meeting will be held in New Delhi on Sunday to discuss the JD(S) seat.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm