ಸೋಮವಾರ ಮಧ್ಯಾಹ್ನ 3ಕ್ಕೆ ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

07-08-20 07:42 am       Bangalore Correspondant   ಕರ್ನಾಟಕ

ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಒಮ್ಮೆ ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟವಾಗಲಿದೆ.

ಬೆಂಗಳೂರು (ಆ.7): ಕರ್ನಾಟಕ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ. ಒಮ್ಮೆ ಫಲಿತಾಂಶ ಪ್ರಕಟವಾದ ನಂತರ ಇಲಾಖೆಯ ಅಧಿಕೃತ ವೆಬ್​ಸೈಟ್​ನಲ್ಲಿ ಪ್ರಕಟವಾಗಲಿದೆ.

ಏಕಕಾಲಕ್ಕೆ ಎಲ್ಲರೂ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಲು ಲಾಗಿನ್ ಆಗುವುದರಿಂದ ಬೇರೆ ವೆಬ್​ಸೈಟ್​ಗಳಲ್ಲೂ ಫಲಿತಾಂಶ ವೀಕ್ಷಿಸಬಹುದು. ಆ ಬಗ್ಗೆ ಇಲ್ಲಿದೆ ಮಾಹಿತಿ,

ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ನೀವು http://kseeb.kar.nic.in/ ಅಥವಾ http://karresults.nic.in/ ವೆಬ್​ಸೈಟ್​ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, http://examresults.net/ ಮತ್ತು http://www.indiaresults.com ವೆಬ್​ಸೈಟ್​ನಲ್ಲಿ ಕೂಡ ರಿಸಲ್ಟ್​ ನೋಡಬಹುದು.

ಜೂನ್ 25ರಿಂದ ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗಿತ್ತು. ಕೊರೋನಾ ಭೀತಿಯ ನಡುವೆಯೇ ಎಲ್ಲ ವಿಷಯಗಳ ಪರೀಕ್ಷೆಗಳನ್ನೂ ನಡೆಸಿದ್ದಕ್ಕೆ ವ್ಯಾಪಕ ವಿರೋಧ ಕೇಳಿಬಂದಿತ್ತು. ಕೊರೋನಾ ಹಿನ್ನೆಲೆ ಈ ಬಾರಿ ಶಾಲೆಗಳ ಬದಲು ಆನ್​ಲೈನ್​ನಲ್ಲಿ ನೇರವಾಗಿ ಫಲಿತಾಂಶ ಪ್ರಕಟಿಸಲಾಗುವುದು. ಕಳೆದ ವರ್ಷ ಏಪ್ರಿಲ್ 30ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿತ್ತು. ಈ ವರ್ಷ ಲಾಕ್​ಡೌನ್​ನಿಂದಾಗಿ ಪರೀಕ್ಷೆಯೂ ಮುಂದೂಡಲ್ಪಟ್ಟಿತ್ತು.